ಯೆಹೆಜ್ಕೇಲನು 22:14 - ಕನ್ನಡ ಸತ್ಯವೇದವು C.L. Bible (BSI)
14 ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡಿರುವೆಯಾ? ಕೈಗಳನ್ನು ಬಲಪಡಿಸಿಕೊಂಡಿರುವೆಯಾ? ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ. ಅಂತೆಯೇ ನಡೆಸುತ್ತೇನೆ.
14 ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.
‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”
ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”
ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?
ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.
“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಕಾರಿ ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಸರ್ವೇಶ್ವರನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.
ಸರ್ವೇಶ್ವರ ಗರ್ಜಿಸಿ ತಮ್ಮ ಸೈನ್ಯಕ್ಕೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ದೊಡ್ಡದು. ಅವರ ಆಜ್ಞೆಯನ್ನು ಪಾಲಿಸುವವನು ಬಲಾಢ್ಯನು. ಸರ್ವೇಶ್ವರಸ್ವಾಮಿಯ ದಿನ ಮಹತ್ತರ; ಅತಿ ಭಯಂಕರ; ಅದರೆದುರಿಗೆ ನಿಲ್ಲಲು ಯಾರಿಗಿದೆ ಧೈರ್ಯ?