Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:16 - ಕನ್ನಡ ಸತ್ಯವೇದವು C.L. Bible (BSI)

16 ಜನಾಂಗಗಳ ದೃಷ್ಟಿಯಲ್ಲಿ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವೆ; ನಾನೇ ಸರ್ವೇಶ್ವರ ಎಂದು ಆಗ ನಿನಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜೆರುಸಲೇಮೇ, ನಿನಗೆ ಸಂಭವಿಸುವ ಸಂಗತಿಗಳಿಂದ ಜನಾಂಗಗಳ ಮುಂದೆ ನಿನ್ನ ಕೀರ್ತಿಯು ಹಾಳಾಗುವುದು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ನೀನು ಇತರ ಜನಾಂಗಗಳ ಮುಂದೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:16
17 ತಿಳಿವುಗಳ ಹೋಲಿಕೆ  

ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಹೀಗಿರಲು ನಾನು ಅತಿ ದುಷ್ಟಜನಾಂಗಗಳನ್ನು ಬರಮಾಡುವೆನು; ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವುವು;


ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


ತಾವು ಮಾನವ ಸಮಾಜದಿಂದ ಬಹಿಷ್ಕೃತರಾಗುವಿರಿ. ಕಾಡುಮೃಗಗಳ ನಡುವೆ ವಾಸಮಾಡುವಿರಿ. ದನಕರುಗಳಂತೆ ಹುಲ್ಲು ಮೇಯುವ ಗತಿ ನಿಮ್ಮದಾಗುವುದು. ಆಕಾಶದ ಇಬ್ಬನಿ ನಿಮ್ಮನ್ನು ತೋಯಿಸುವುದು. ಪರಾತ್ಪರ ದೇವರಿಗೆ ಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದು ತಮಗೆ ತಿಳಿದುಬರುವುದರೊಳಗೆ ಏಳು ವರ್ಷ ಕಳೆದಿರುತ್ತದೆ.


ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ, ಆಮೇಲೆ ಒಟ್ಟುಗೂಡಿಸಿ, ಸ್ವದೇಶಕ್ಕೆ ತಂದದ್ದರಿಂದ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು;


ಸರ್ವೇಶ್ವರನಾದ ದೇವರ ವಾಕ್ಯವನ್ನು ಕೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದುದ್ದನ್ನು, ಇಸ್ರಯೇಲ್ ನಾಡು ಪಾಳುಬಿದ್ದುದನ್ನು, ಯೆಹೂದ್ಯವಂಶದವರು ಗಡೀಪಾರಾದುದನ್ನು ನೋಡಿ ನೀನು ಹಿರಿಹಿರಿ ಹಿಗ್ಗಿಹೋದೆ.


“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ಎಂದೇ ಗುರಿಮಾಡಿದೆ ಯಕೋಬನ್ನು ಶಾಪಕ್ಕೆ ಈಡುಪಡಿಸಿದೆ ಇಸ್ರಯೇಲನ್ನು ನಿಂದೆದೂಷಣೆಗೆ.”


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಆಗ ದೈವಪುರುಷನೊಬ್ಬನು ಇಸ್ರಯೇಲರ ಅಹಾಬನ ಬಳಿಗೆ ಬಂದು, “ಸರ್ವೇಶ್ವರ ಹೀಗೆನ್ನುತ್ತಾರೆ, ‘ಸರ್ವೇಶ್ವರ ಕಣಿವೆಗಳ ದೇವರಲ್ಲ, ಬೆಟ್ಟಗಳ ದೇವರಾಗಿ ಮಾತ್ರ ಇರುತ್ತಾರೆಂದುಕೊಂಡು ಬಂದಿರುವ ಈ ಸಿರಿಯಾದವರ ಮಹಾಸೈನ್ಯವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು,” ಎಂದು ಹೇಳಿದನು.


ಆಗ ಒಬ್ಬ ಪ್ರವಾದಿ ಇಸ್ರಯೇಲರ ಅರಸ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾಸಮೂಹವನ್ನು ನೋಡಿದಿಯೋ? ‘ನಾನೇ ಸರ್ವೇಶ್ವರ’ ಎಂಬುದು ನಿನಗೆ ಮನದಟ್ಟಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೊಪ್ಪಿಸುವೆನು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.


ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು.


ಆಮೇಲೆ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


ಕೆಳ ಪಾತಾಳವೊಂದೇ ಗತಿ ದುಷ್ಟರಿಗೆ I ದೇವರನು ಕೈಬಿಟ್ಟಾ ರಾಷ್ಟ್ರಗಳಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು