Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:18 - ಕನ್ನಡ ಸತ್ಯವೇದವು C.L. Bible (BSI)

18 “ನರಪುತ್ರನೇ, ಇಸ್ರಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಅದೆಲ್ಲಾ ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ; ಅದು ಕಂದುಲೋಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ ಮತ್ತು ಕಂದು ಬೆಳ್ಳಿಯ ಹಾಗೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಅದೆಲ್ಲಾ ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ; ಅದು ಕಂದುಬೆಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನರಪುತ್ರನೇ, ಇಸ್ರೇಲ್ ಜನಾಂಗವು ನನ್ನ ಪಾಲಿಗೆ ನಿಷ್ಪ್ರಯೋಜಕವಾಗಿದೆ. ಅವರು ತಾಮ್ರದಂತೆ, ತವರದಂತೆ, ಕಬ್ಬಿಣದಂತೆ ಮತ್ತು ಸೀಸದಂತೆ ಮತ್ತು ಬೆಳ್ಳಿಯನ್ನು ಕುಲುಮೆಯಲ್ಲಿ ಕರಗಿಸಿ ಶುದ್ಧೀಕರಿಸಿದಾಗ ಉಳಿಯುವ ಕಂದುಬೆಳ್ಳಿಯಂತೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ ಕಸದ ಹಾಗಾದರೂ, ಅವರೆಲ್ಲರೂ ಗುಹೆಯಲ್ಲಿರುವ ತಾಮ್ರ, ತವರ, ಕಬ್ಬಿಣದ ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಸದ ಹಾಗೆಯೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:18
14 ತಿಳಿವುಗಳ ಹೋಲಿಕೆ  

ಎಲೌ ನಗರಿಯೇ, ನಿನ್ನ ಬೆಳ್ಳಿ ಕಪ್ಪಾಗಿದೆ. ನಿನ್ನ ದ್ರಾಕ್ಷಾರಸ ನೀರಾಗಿದೆ.


ಲೋಕದ ದುರುಳರನ್ನೆಲ್ಲಾ ಕಸದಂತೆ ಪರಿಗಣಿಸುತ್ತೀ I ಎಂತಲೇ, ನಿನ್ನಾ ಕಟ್ಟಳೆಯಲ್ಲಿದೆ ನನಗೆ ಆಸಕ್ತಿ II


ಬೆಳ್ಳಿಯನು ಪುಟಕ್ಕೆ ಹಾಕಿದಂತಲ್ಲ; ನಿನ್ನನು ಸಂಕಟವೆಂಬ ಕೆಂಡಕ್ಕೆ ಹಾಕಿರುವೆ. ಶೋಧಿಸಿರುವೆನು, ಪರಿಶೋಧಿಸಿರುವೆನು ನಿನ್ನನು ನನಗಾಗೆ;


ಪುಟಕುಲುಮೆಗಳು ಬೆಳ್ಳಿಬಂಗಾರಗಳನ್ನು ಶೋಧಿಸುತ್ತವೆ; ಸರ್ವೇಶ್ವರನು ಹೃದಯಗಳನ್ನು ಶೋಧಿಸುತ್ತಾನೆ.


ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪಾಗ್ನಿಯಲ್ಲಿ ಇಟ್ಟು ಕರಗಿಸುವೆನು.


ತಿಳಿದಿದೆ ನನಗೆ ನಿನ್ನ ಹಟಮಾರಿತನ ನಿನ್ನ ಕುತ್ತಿಗೆಯ ನರಗಳು ಕಬ್ಬಿಣ ನಿನ್ನ ಹಣೆ ಕಂಚಿನಂತೆ ಕಠಿಣ.


ಅವರಿಗೆ ಆಶ್ರಯ ನೀಡಿದವನು, ಭಯದಿಂದ ಪಲಾಯನ ಮಾಡಿಬಿಡುವನು, ಅವರ ದಳಪತಿಗಳು ಧ್ವಜವನ್ನೇ ಬಿಟ್ಟು ದಿಕ್ಕುಪಾಲಾಗುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಪ್ರಭುವಿನ ಅಗ್ನಿ ಇರುವುದು ಸಿಯೋನಿನಲ್ಲಿ, ಅವರ ಅಗ್ನಿಕುಂಡ ಜೆರುಸಲೇಮಿನಲ್ಲಿ.


ನಿಮ್ಮ ಮೇಲೆ ಕೈಮಾಡುವೆನು. ನಿಮ್ಮ ಲೋಹವನ್ನು ಪುಟಹಾಕಿ ನಿಮ್ಮ ಕಲ್ಮಷವನ್ನು ಪೂರ್ತಿಯಾಗಿ ಕರಗಿಸಿಬಿಡುವೆನು. ಕಂದುಕೆಸರನ್ನೆಲ್ಲ ತೊಡೆದುಹಾಕುವೆನು.


ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ದಕ್ಕುವುದು ಚೊಕ್ಕ ಒಡವೆ.


ಆಮೇಲೆ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀವೆಲ್ಲರು ಕಲ್ಮಷವಾಗಿರುವುದರಿಂದ ಇಗೋ, ನಿಮ್ಮನ್ನು ಜೆರುಸಲೇಮಿನ ಒಳಕ್ಕೆ ಸೇರಿಸುವೆನು.


ಯಾರು ಅಡ್ಡಬಿದ್ದು ಆರಾಧಿಸುವುದಿಲ್ಲವೋ ಅಂಥವರನ್ನು ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು,” ಎಂದು ಸಾರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು