Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:20 - ಕನ್ನಡ ಸತ್ಯವೇದವು C.L. Bible (BSI)

20 ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪಾಗ್ನಿಯಲ್ಲಿ ಇಟ್ಟು ಕರಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ,, ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಇಟ್ಟು ಕರಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಕೂಡಿಸಿ ಊದಿ ಉರಿಹತ್ತಿಸಿ ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಕೂಡಿಸಿ ಇಟ್ಟುಬಿಟ್ಟು ಕರಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಕೆಲಸಗಾರರು ಬೆಳ್ಳಿ, ತಾಮ್ರ, ಸೀಸ, ತವರ, ಕಬ್ಬಿಣ ಇವುಗಳನ್ನೆಲ್ಲಾ ಬೆಂಕಿಗೆ ಹಾಕುವರು. ಬೆಂಕಿಯನ್ನೂದಿ ಶಾಖ ಹೆಚ್ಚು ಮಾಡುವರು. ಆಗ ಲೋಹಗಳು ಕರಗಲು ಪ್ರಾರಂಭವಾಗುವವು. ಅದೇ ರೀತಿಯಲ್ಲಿ ನಾನು ನಿಮ್ಮನ್ನು ನನ್ನ ಬೆಂಕಿಯಲ್ಲಿ ಹಾಕಿ ಕರಗಿಸುವೆನು. ನನ್ನ ರೌದ್ರವೇ ಆ ಬೆಂಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒರೆಯೊಳಗೆ ಕೂಡಿಸಿ, ಅದಕ್ಕೆ ಬೆಂಕಿಯನ್ನು ಊದಿ ಕರಗಿಸುವರೋ, ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿ ಮತ್ತು ನನ್ನ ರೋಷದಲ್ಲಿ ಒಟ್ಟುಗೂಡಿಸಿ ನಿಮ್ಮನ್ನು ನಗರದೊಳಗೆ ಹಾಕಿ ಕರಗಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:20
12 ತಿಳಿವುಗಳ ಹೋಲಿಕೆ  

ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ.


ನಾಶನದ ಮೇಲೆ ನಾಶನದ ಸುದ್ದಿ, ನಾಡೆಲ್ಲ ಕಾಡಾಯಿತು. ದಿಢೀರೆಂದು ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ತುಂಡುತುಂಡಾದವು !


ಕೆಂಡ ಊದಿ ಕುಲುಮೆಯಲ್ಲಿ ಆಯುಧಮಾಡುವ ಕಮ್ಮಾರನನು ನಾನೇ ಸೃಷ್ಟಿಸಿದಾತ. ವಿನಾಶಮಾಡಲು ಬರುವ ಕೆಡುಕರನು ನಾನೇ ಉಂಟುಮಾಡಿದಾತ.


ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಹಾಕಿ ಊದಲು ನೀವು ಅದರೊಳಗೆ ಕರಗಿಹೋಗುವಿರಿ.


ನಿಮ್ಮ ಮೇಲೆ ಕೈಮಾಡುವೆನು. ನಿಮ್ಮ ಲೋಹವನ್ನು ಪುಟಹಾಕಿ ನಿಮ್ಮ ಕಲ್ಮಷವನ್ನು ಪೂರ್ತಿಯಾಗಿ ಕರಗಿಸಿಬಿಡುವೆನು. ಕಂದುಕೆಸರನ್ನೆಲ್ಲ ತೊಡೆದುಹಾಕುವೆನು.


“ನಾನು ಕೊಯ್ಲಿಗೆ ಕೈಹಾಕಲು ನೋಡಿದೆ. ಆದರೆ ದ್ರಾಕ್ಷೆಯ ಬಳ್ಳಿಗಳಲ್ಲಿ ಹಣ್ಣಿಲ್ಲ, ಅಂಜೂರದ ಮರದಲ್ಲಿ ಫಲವಿಲ್ಲ. ಎಲೆಯೂ ಬಾಡಿಹೋಗಿದೆ. ಪರರ ತುಳಿತಕ್ಕೆ ಈಡಾಗಿ ಇರುವುದು ಕಾಣುತ್ತದೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀವೆಲ್ಲರು ಕಲ್ಮಷವಾಗಿರುವುದರಿಂದ ಇಗೋ, ನಿಮ್ಮನ್ನು ಜೆರುಸಲೇಮಿನ ಒಳಕ್ಕೆ ಸೇರಿಸುವೆನು.


ಆದಕಾರಣ, ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ, ಅವರ ದುರ್ನಡತೆಯ ಹೊಣೆಯನ್ನು ಅವರ ಮೇಲೆ ಹೊರಿಸಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.”


ಅವರು ನಾಡಿನ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಹೊಲೆಗೈದಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು;


ಹಣ ತೆತ್ತು ಅನ್ಯರಾಷ್ಟ್ರಗಳೊಡನೆ ಮೈತ್ರಿಬೆಳೆಸಿಕೊಂಡಿದ್ದರೂ ನಾನು ಶೀಘ್ರದಲ್ಲಿ ಅದನ್ನು ಸೆರೆಗೂಡಿಸಲಿರುವೆನು. ಅಸ್ಸೀರಿಯದ ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು