Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:21 - ಕನ್ನಡ ಸತ್ಯವೇದವು C.L. Bible (BSI)

21 ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಹಾಕಿ ಊದಲು ನೀವು ಅದರೊಳಗೆ ಕರಗಿಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಹಾಕಿ, ಊದಲು ನೀವು ಅದರೊಳಗೆ ಕರಗಿ ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಕೂಡಿಸಿ ಊದಲು ನೀವು ಅದರೊಳಗೆ ಕರಗಿಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ನಿಮ್ಮನ್ನು ಆ ಬೆಂಕಿಯಲ್ಲಿ ಹಾಕುವೆನು. ನನ್ನ ರೌದ್ರವೆಂಬ ಬೆಂಕಿಯನ್ನು ಊದಿ ಶಾಖ ಹೆಚ್ಚಿಸುವೆನು. ಆಗ ನೀವು ಕರಗಲು ಪ್ರಾರಂಭಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ನಿಮ್ಮನ್ನು ಕೂಡಿಸಿ, ನನ್ನ ರೋಷದ ಬೆಂಕಿಯನ್ನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:21
20 ತಿಳಿವುಗಳ ಹೋಲಿಕೆ  

ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.


ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ : “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ !


ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ಒಣಗಿಡಕ್ಕೆ ಹಚ್ಚುವ ಕಿಚ್ಚಿನಂತೆ, ನೀರನ್ನು ಕುದಿಸುವ ಬೆಂಕಿಯಂತೆ ನೀವು ಪ್ರತ್ಯಕ್ಷರಾಗಲಾರಿರಾ?


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಇದನು ಕಂಡು ಕೆರಳುವನಾ ದುರುಳನು I ಹೊಂದುವನು ಈ ಪರಿ ಆಶಾಭಂಗವನು I ಹಲ್ಲು ಕಡಿಯುತ ಅವನು ಹಾಳಾಗುವನು II


ಅವರನು ಊದಿಬಿಡು ದೇವಾ, ತೇಲಿಹೋಗಲಿ ಹೊಗೆಯಂತೆ I ಕರಗಿಹೋಗಲಿ ನಿನ್ನೆದುರಿಗೆ ಅಗ್ನಿಮುಟ್ಟಿದ ಮೇಣದಂತೆ II


ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಕಬಳಿಸಿಬಿಡುವ ಅಗ್ನಿಯಂಥವರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡದ ದೇವರು.


“ನಾನು ಕೊಯ್ಲಿಗೆ ಕೈಹಾಕಲು ನೋಡಿದೆ. ಆದರೆ ದ್ರಾಕ್ಷೆಯ ಬಳ್ಳಿಗಳಲ್ಲಿ ಹಣ್ಣಿಲ್ಲ, ಅಂಜೂರದ ಮರದಲ್ಲಿ ಫಲವಿಲ್ಲ. ಎಲೆಯೂ ಬಾಡಿಹೋಗಿದೆ. ಪರರ ತುಳಿತಕ್ಕೆ ಈಡಾಗಿ ಇರುವುದು ಕಾಣುತ್ತದೆ. ಇದು ಸರ್ವೇಶ್ವರನಾದ ನನ್ನ ನುಡಿ.”


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು