Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:22 - ಕನ್ನಡ ಸತ್ಯವೇದವು C.L. Bible (BSI)

22 ಬೆಳ್ಳಿ ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗಿಬಿಡುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದ ನಾನು ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬೆಳ್ಳಿಯು ಕುಲುಮೆಯಲ್ಲಿ ಕರಗಿಹೋಗುವಂತೆಯೇ ನೀವು ಪಟ್ಟಣದಲ್ಲಿ ಕರಗಿಹೋಗುವಿರಿ. ಯೆಹೋವನಾದ ನಾನೇ ನನ್ನ ಕೋಪವನ್ನು ನಿಮ್ಮ ಮೇಲೆ ಸುರಿದೆನೆಂದು ಆಗ ನೀವು ಅರ್ಥಮಾಡಿಕೊಳ್ಳುವಿರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ. ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದವರು ಯೆಹೋವ ದೇವರಾದ ನಾನೇ ಎಂದು ನಿಮಗೆ ತಿಳಿಯುತ್ತದೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:22
10 ತಿಳಿವುಗಳ ಹೋಲಿಕೆ  

“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ, ನಿಮ್ಮ ಮೇಲೆ ದೊರೆತನಮಾಡುವೆನು;


ಅವರಾದರೋ ನನ್ನ ಮಾತನ್ನು ಲೆಕ್ಕಿಸದೆ ನನ್ನ ವಿರುದ್ಧ ದಂಗೆಯೆದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತ್ಯಜಿಸಲಿಲ್ಲ. ಆಗ ನಾನು ಈಜಿಪ್ಟ್ ದೇಶದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಎಂದುಕೊಂಡೆ.


“ಜುದೇಯದ ಮುಖಂಡರು, ಗಡಿದಾಟಿ ಆಕ್ರಮಣಮಾಡುವವರನ್ನು ಹೋಲುತ್ತಾರೆ. ಅವರ ಮೇಲೆ ನನ್ನ ಕೋಪಾಗ್ನಿಯನ್ನು ಸುರಿಸುತ್ತೇನೆ.


ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.


ಆದಕಾರಣ, ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ, ಅವರ ದುರ್ನಡತೆಯ ಹೊಣೆಯನ್ನು ಅವರ ಮೇಲೆ ಹೊರಿಸಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.”


ಜನಾಂಗಗಳ ದೃಷ್ಟಿಯಲ್ಲಿ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವೆ; ನಾನೇ ಸರ್ವೇಶ್ವರ ಎಂದು ಆಗ ನಿನಗೆ ಗೊತ್ತಾಗುವುದು.”


ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಹಾಕಿ ಊದಲು ನೀವು ಅದರೊಳಗೆ ಕರಗಿಹೋಗುವಿರಿ.


ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು - “ನರಪುತ್ರನೇ,


ಅವರು ನಾಡಿನ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಹೊಲೆಗೈದಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು;


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು