Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:24 - ಕನ್ನಡ ಸತ್ಯವೇದವು C.L. Bible (BSI)

24 ಆ ನಾಡಿಗೆ ಹೀಗೆ ಹೇಳು - ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ನರಪುತ್ರನೇ, ಆ ನಾಡಿಗೆ ಹೀಗೆ ಹೇಳು, ‘ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನರಪುತ್ರನೇ, ಆ ನಾಡಿಗೆ ಹೀಗೆ ಹೇಳು - ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ನರಪುತ್ರನೇ, ಇದನ್ನು ಜೆರುಸಲೇಮಿಗೆ ಹೇಳು. ಮಳೆಯನ್ನೇ ಪಡೆದಿಲ್ಲದ ಭೂಮಿಯಂತೆ ಆಕೆ ಇದ್ದಾಳೆಂದು ಆಕೆಗೆ ತಿಳಿಸು. ನನ್ನ ಕೋಪದ ಸಮಯದಲ್ಲಿ ಆಕೆಯ ಮೇಲೆ ಮಳೆಯೇ ಸುರಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು, ‘ದೇವರ ರೌದ್ರದ ದಿವಸದಲ್ಲಿ ನೀನು ಶುದ್ಧಿಯಾಗದ ದೇಶವಾಗಿಯೂ, ಮಳೆಯಿಲ್ಲದ ದೇಶವಾಗಿಯೂ ಇರುವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:24
11 ತಿಳಿವುಗಳ ಹೋಲಿಕೆ  

ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.


ಆದರೂ ತಮ್ಮನ್ನು ಶಿಕ್ಷಿಸಿದ ದೇವರಿಗೆ ಇಸ್ರಯೇಲರು ಅಭಿಮುಖರಾಗಲಿಲ್ಲ. ಸೇನಾಧೀಶ್ವರಸ್ವಾಮಿಯನ್ನು ಅರಸಲಿಲ್ಲ.


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ಕಷ್ಟಬಂದಾಗ ಅರಸ ಅಹಾಜನು ಸರ್ವೇಶ್ವರನಿಗೆ ಮತ್ತಷ್ಟು ದ್ರೋಹಮಾಡಿದನು.


ಅದು ಯಾರ ಬುದ್ಧಿಮಾತಿಗೂ ಕಿವಿಗೊಡಲಿಲ್ಲ. ಶಿಕ್ಷಣಕ್ಕೆ ಒಳಪಡಲಿಲ್ಲ. ಸರ್ವೇಶ್ವರಸ್ವಾಮಿಯಲ್ಲಿ ಭರವಸೆ ಇಡಲಿಲ್ಲ, ತನ್ನ ದೇವರ ಸನ್ನಿಧಿಗೆ ಬರಲಿಲ್ಲ.


ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ.


ತಿದಿ ಬುಸುಬುಸುಗುಟ್ಟುತ್ತದೆ. ಸೀಸ ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಶ್ರಮವೆಲ್ಲ ವ್ಯರ್ಥ. ಏಕೆಂದರೆ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು - “ನರಪುತ್ರನೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು