Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:31 - ಕನ್ನಡ ಸತ್ಯವೇದವು C.L. Bible (BSI)

31 ಆದಕಾರಣ, ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ, ಅವರ ದುರ್ನಡತೆಯ ಹೊಣೆಯನ್ನು ಅವರ ಮೇಲೆ ಹೊರಿಸಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.’ ಇದು ಕರ್ತನಾದ ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅದಕ್ಕಾಗಿ ನಾನು ಅವರಿಗೆ ನನ್ನ ಕೋಪವನ್ನು ತೋರಿಸುವೆನು. ಅವರ ದುಷ್ಟತನಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರೇ ಅದಕ್ಕೆ ಜವಾಬ್ದಾರರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:31
19 ತಿಳಿವುಗಳ ಹೋಲಿಕೆ  

ನೀನು ನಿನ್ನ ಯೌವನಕಾಲವನ್ನು ನೆನೆಸಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ, ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯಕಾರ್ಯವನ್ನೂ ಮಾಡಿರುವೆ. ಇದು ಸರ್ವೇಶ್ವರನಾದ ದೇವರ ನುಡಿ.


ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


“ಈಗಲೇ ನಿನಗೆ ಪ್ರಳಯ ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ, ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು.


ಆದರೆ ಯಾರ ಮನಸ್ಸು ತಮ್ಮ ಅಸಹ್ಯವಸ್ತುಗಳನ್ನೂ ಅನಿಷ್ಟ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು, ಇದು ಸರ್ವೇಶ್ವರನಾದ ದೇವರ ನುಡಿ.”


ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.


ಇಗೋ, ಸರ್ವೇಶ್ವರ ನಾಮಧೇಯನು ಬರುತಿಹನು ದೂರದಿಂದ; ಭುಗಿಲೇರುತಿದೆ ಆತನ ಕೋಪ ಏಳುತಿದೆ ದಟ್ಟವಾದ ಧೂಮ ಅದರಿಂದ. ದಹಿಸುವ ಅಗ್ನಿಯಂತಿದೆ ಆತನ ನಾಲಗೆ. ಭರಿತವಾಗಿದೆ ಆತನ ತುಟಿಗಳು ರೋಷದಿಂದ.


ಸುರಿಸಿದ್ದಾನೆ ಸರ್ವೇಶ್ವರ ತನ್ನ ರೋಷಾಗ್ನಿಯನ್ನು ತೀರಿಸಿಕೊಂಡಿದ್ದಾನೆ ತನ್ನ ಉಗ್ರಕೋಪವನ್ನು. ಆತ ಹೊತ್ತಿಸಿದ ಬೆಂಕಿಗೆ ಸಿಯೋನಿನ ಅಸ್ತಿವಾರ ಆಹುತಿಯಾಗಿದೆ.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪಾಗ್ನಿಯಲ್ಲಿ ಇಟ್ಟು ಕರಗಿಸುವೆನು.


ಸರ್ವೇಶ್ವರ ಮತ್ತೊಂದು ವಾಣಿಯನ್ನು ನನಗೆ ದಯಪಾಲಿಸಿದರು:


ನಾನು ಈಜಿಪ್ಟಿಗೆ ಬೆಂಕಿಹಚ್ಚಿ, ಅದರ ಸಹಾಯಕರನ್ನೆಲ್ಲ ನಾಶಮಾಡಿದ ಮೇಲೆ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.


ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು.


“ನಾನು ಕೊಯ್ಲಿಗೆ ಕೈಹಾಕಲು ನೋಡಿದೆ. ಆದರೆ ದ್ರಾಕ್ಷೆಯ ಬಳ್ಳಿಗಳಲ್ಲಿ ಹಣ್ಣಿಲ್ಲ, ಅಂಜೂರದ ಮರದಲ್ಲಿ ಫಲವಿಲ್ಲ. ಎಲೆಯೂ ಬಾಡಿಹೋಗಿದೆ. ಪರರ ತುಳಿತಕ್ಕೆ ಈಡಾಗಿ ಇರುವುದು ಕಾಣುತ್ತದೆ. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು