Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:4 - ಕನ್ನಡ ಸತ್ಯವೇದವು C.L. Bible (BSI)

4 ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿರುವೆ. ಹೀಗೆ ನಿನ್ನ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿ, ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ, ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಸುರಿಸಿದ ರಕ್ತದಿಂದ ಅಪರಾಧಿಯೂ ಮಾಡಿಕೊಂಡ ಬೊಂಬೆಗಳಿಂದ ಹೊಲಸೂ ಆಗಿ ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿದ್ದೀ; ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “‘ಜೆರುಸಲೇಮಿನ ನಿವಾಸಿಗಳೇ, ನೀವು ಅನೇಕರನ್ನು ಕೊಂದಿದ್ದೀರಿ. ಆದ್ದರಿಂದ ನೀವು ದೋಷಿಗಳು. ನೀವು ಹೊಲಸು ವಿಗ್ರಹಗಳನ್ನು ಮಾಡಿಕೊಂಡಿದ್ದೀರಿ. ಆದ್ದರಿಂದ ನೀವು ಅಶುದ್ಧರು. ನಿಮ್ಮನ್ನು ಶಿಕ್ಷಿಸುವ ಸಮಯ ಈಗ ಬಂದಿದೆ. ನಿಮ್ಮ ಅಂತ್ಯವು ಬಂದಿದೆ. ಆದ್ದರಿಂದಲೇ ಇತರ ಜನಾಂಗಗಳವರು ನಿಮ್ಮನ್ನು ಗೇಲಿಮಾಡುವರು. ಎಲ್ಲಾ ದೇಶಗಳು ನಿಮ್ಮನ್ನು ನೋಡಿ ನಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀನು ಚೆಲ್ಲಿದ ನಿನ್ನ ರಕ್ತದಿಂದ ನೀನು ಅಪರಾಧಿಯಾದೆ; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧನಾದೆ; ನಿನ್ನ ದಿನಗಳನ್ನು ಸಮೀಪಿಸಿರುವೆ; ಮತ್ತು ನಿಮ್ಮ ವರ್ಷಗಳ ಅಂತ್ಯವು ಬಂದಿದೆ. ಆದ್ದರಿಂದ ನಿನ್ನನ್ನು ಇತರ ಜನಾಂಗಗಳಿಗೆ ನಾಚಿಕೆಯಾಗಿಯೂ, ಎಲ್ಲಾ ದೇಶಗಳಿಗೂ ನಿಂದೆಯಾಗಿಯೂ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:4
26 ತಿಳಿವುಗಳ ಹೋಲಿಕೆ  

ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.


“ನರಪುತ್ರನೇ, ರಕ್ತಸಿಕ್ತವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ಸ್ಥಿರಮನಸ್ಸು ಮಾಡಿರುವೆಯಾ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು -


ನೀನು ಗರ್ವಪಡುತ್ತಿದ್ದ ಆ ಕಾಲದಲ್ಲಿ ಸೊದೋಮೆಂಬ ನಿನ್ನ ತಂಗಿಯ ಹೆಸರು ನಿನ್ನ ಬಾಯಲ್ಲಿ ಬರಲೇ ಇಲ್ಲ;


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


“ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲೂ ಅವರು ಮಾಡುವ ದೂಷಣೆಯ ವಿಷಯದಲ್ಲೂ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ಖಡ್ಗ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ; ಮಿಂಚುವಂತೆ ಪೂರ್ಣ ಮಸೆಯಲಾಗಿದೆ.


ಪ್ರವಾಸಿಗಳಾಗಿ ನೀವು ಬಂದಿರುವ ಈಜಿಪ್ಟಿನಲ್ಲಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುತ್ತಿದ್ದೀರಿ. ಆದ್ದರಿಂದ ನೀವೂ ನಿರ್ಮೂಲರಾಗಿ ಎಲ್ಲ ಭೂರಾಜ್ಯಗಳ ಶಾಪ, ನಿಂದೆ, ದೂಷಣೆಗಳಿಗೆ ಗುರಿಯಾಗುವಿರಿ.


ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.


ನಿಂದಾಸ್ಪದರಾದೆವು ನೆರೆಹೊರೆಯ ಜನಾಂಗಗಳಿಗೆ I ಗುರಿಯಾದೆವು ಸುತ್ತಣವರ ಹಾಸ್ಯಕುಚೋದ್ಯಗಳಿಗೆ II


ನಾನು ಇಸ್ರಯೇಲರಿಗೆ ಕೊಟ್ಟ ನನ್ನ ನಾಡಿನಿಂದ ನಿಮ್ಮನ್ನು ಕಿತ್ತುಹಾಕುವೆನು; ನನ್ನ ಹೆಸರಿಗೆ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಡುವೆನು; ಎಲ್ಲ ಜನಾಂಗಗಳವರು ಪರಿಹಾಸ್ಯದಿಂದ ಲಾವಣಿ ಕಟ್ಟುವುದಕ್ಕೂ ನಿಂದಿಸುವುದಕ್ಕೂ ಇದು ಆಸ್ಪದವಾಗುವಂತೆ ಮಾಡುವೆನು.


ನಾನು ಕೊಟ್ಟ ನಾಡಿನಿಂದ ಇಸ್ರಯೇಲರನ್ನು ತೆಗೆದುಹಾಕುವೆನು; ನನ್ನ ಹೆಸರಿಗಾಗಿ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಯೇಲರು ಎಲ್ಲಾ ಜನಾಂಗಗಳವರ ಲಾವಣಿಗೂ ನಿಂದೆಪರಿಹಾಸ್ಯಕ್ಕೂ ಗುರಿಯಾಗುವರು.


‘ಸರ್ವೇಶ್ವರ ಈ ನಾಡಿಗೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣ ಏನಿರಬಹುದು?’ ಎಂದು ವಿಚಾರಿಸುವರು.


ಸರ್ವೇಶ್ವರ ನಿಮ್ಮನ್ನು ಒಯ್ಯಿಸುವ ಜನಾಂಗಗಳಲ್ಲಿ ನೀವು ಭೀಕರತೆಗೂ ನಿಂದೆಲಾವಣಿಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


ಈಗ ಈ ದುಷ್ಟ ಪೀಳಿಗೆಗೆ ಸೇರಿದವರಾದ ನೀವು ನಿಮ್ಮ ಪೂರ್ವಜರಿಗೆ ಬದಲಾಗಿ ಬಂದು ಇಸ್ರಯೇಲರ ಮೇಲಿದ್ದ ಸರ್ವೇಶ್ವರನ ಕೋಪಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತಿದ್ದೀರಿ.


ನಾನು ನಿಮ್ಮ ನಾಡನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ನೆಲಸುವ ಶತ್ರುಗಳು ಅದನ್ನು ನೋಡಿ ಚಕಿತರಾಗುವರು.


ತನ್ನನ್ನು ಸೂಳೆಯಾಗಿ ಒಪ್ಪಿಸಿಕೊಂಡಳು; ಇವರೆಲ್ಲರು ಅಸ್ಸೀರಿಯದಲ್ಲಿನ ಗಣ್ಯವ್ಯಕ್ತಿಗಳು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನೇ ಹೊಲಸುಮಾಡಿಕೊಂಡಳು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಆಳವೂ ಅಗಲವೂ ಬಹಳ ಹಿಡಿಯುವುದೂ ಆದ ನಿನ್ನ ಅಕ್ಕನ ಪಾತ್ರೆಯಲ್ಲೇ ನೀನೂ ಕುಡಿದು ಹಾಸ್ಯಕ್ಕೂ ಕುಚೋದ್ಯಕ್ಕೂ ಗುರಿಯಾಗುವೆ. ಸಮಾರಿಯಳೆಂಬ ನಿನ್ನ ಅಕ್ಕನು ಕುಡಿದ ಬೆಚ್ಚುಬೆರಗಿನಾ ಕೊಡದಿಂದಲೇ


ಜೆರುಸಲೇಮ್ ನಗರ ಸುರಿಸಿದ ರಕ್ತ ಅದರಲ್ಲೇ ನಿಂತಿದೆ. ಧೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ, ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ.


ಆ ರಕ್ತದಿಂದ ರೋಷವೆದ್ದು ಮುಯ್ಯಿಗೆ ಮುಯ್ಯಿ ತೀರಿಸಲೆಂದು, ಅದನ್ನು ನಾನು ಇಂಗಗೊಡಿಸದೆ ಬರೀ ಬಂಡೆಯ ಮೇಲೆ ನಿಲ್ಲಿಸಿದ್ದೇನೆ.


ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು