Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:6 - ಕನ್ನಡ ಸತ್ಯವೇದವು C.L. Bible (BSI)

6 ಇಗೋ, ಇಸ್ರಯೇಲಿನ ಅರಸರು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “‘ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯನುಸಾರ ನಿನ್ನಲ್ಲಿ ರಕ್ತಸುರಿಸುತ್ತಲೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “‘ಇಗೋ, ಜೆರುಸಲೇಮಿನಲ್ಲಿ ಇತರರನ್ನು ಕೊಲ್ಲುವದಕ್ಕಾಗಿಯೇ ತಮ್ಮನ್ನು ಬಲಿಷ್ಠರನ್ನಾಗಿ ಮಾಡಿಕೊಂಡಿರುವ ಇಸ್ರೇಲಿನ ಅಧಿಪತಿಗಳು ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ಇಸ್ರಾಯೇಲಿನ ಅರಸರು ಪ್ರತಿಯೊಬ್ಬನು ತಮ್ಮ ತಮ್ಮ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:6
18 ತಿಳಿವುಗಳ ಹೋಲಿಕೆ  

ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ದೇವದೂತನ ಮುಂದೆ ನಿಂತಿದ್ದ ಯೆಹೋಶುವನು ಮಲಿನವಾದ ಬಟ್ಟೆಯನ್ನು ಧರಿಸಿದ್ದನು.


ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


ಸ್ವಾಮೀ, ನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಒಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.


ಅದರ ಅರಸರು, ಮಂತ್ರಿಗಳು, ಯಾಜಕರು, ಪ್ರವಾದಿಗಳು, ಜುದೇಯದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು, ಹೀಗೆ ಎಲ್ಲ ಇಸ್ರಯೇಲರೂ ಯೆಹೂದ್ಯರೂ ಅಧರ್ಮವನ್ನು ಹೇರಳವಾಗಿಮಾಡಿ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ಈ ನಗರವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂದಿದೆ.


ಆದುದರಿಂದ ಗಣ್ಯವ್ಯಕ್ತಿಗಳ ಬಳಿಗೆ ಹೋಗಿ ಮಾತಾಡುವೆನು ಅವರು ಸರ್ವೇಶ್ವರನ ಮಾರ್ಗ ಹಾಗೂ ಅವರ ದೇವರ ನ್ಯಾಯವಿಧಿಗಳನ್ನು ಬಲ್ಲವರು,” ಎಂದುಕೊಂಡೆನು. ಆದರೆ ಆ ವ್ಯಕ್ತಿಗಳು ಕೂಡ ನೊಗವನ್ನು ಮುರಿದವರು, ಕಣ್ಣಿಗಳನ್ನು ಕಿತ್ತುಬಿಟ್ಟವರು.


ನಮ್ಮ ಅರಸರು, ರಾಜ್ಯಪಾಲರು, ಯಾಜಕರು, ಹಿರಿಯರು ಅನುಸರಿಸಲಿಲ್ಲ, ನಿಮ್ಮಾಜ್ಞೆಯನು, ಧರ್ಮೋಪದೇಶವನು. ಲಕ್ಷಿಸಲಿಲ್ಲ ನೀವಿತ್ತ ಎಚ್ಚರಿಕೆಯ ಮಾತುಗಳನು.


ನರಪುತ್ರನೇ, ಕೂಗು, ಗೋಳಾಡು, ಬಡಿದುಕೋ ಎದೆ! ಎರಗಿದೆ ಆ ಖಡ್ಗ ನನ್ನ ಜನರ ಮೇಲೆ ಇಸ್ರಯೇಲಿನ ಅರಸರೆಲ್ಲರ ಮೇಲೆ ತುತ್ತಾಗುವರು ಅದಕ್ಕೆ ಜನನಾಯಕರು ಜನರೊಂದಿಗೆ.


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿನ್ನ ಮಧ್ಯೆ ರಕ್ತ ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ, ನಿನ್ನ ಕೇಡಿಗಾಗಿಯೇ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನೆ ಹೊಲೆಗೆಡಿಸಿಕೊಂಡ ನಗರಿಯೇ,


ಖಡ್ಗದಂಥ ಹಲ್ಲುಗಳು, ಕತ್ತಿಯಂಥ ಕೋರೆಗಳೂ ಉಳ್ಳವರಿದ್ದಾರೆ. ನಾಡಿನ ಬಡವರನ್ನು ಇವರು ತಿಂದುಬಿಡುವರು; ಜನರಲ್ಲಿ ದಿಕ್ಕಿಲ್ಲದವರನ್ನು ಇವರು ನುಂಗಿಬಿಡುವರು.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ಅದು ಅವನಿಗೆ ಇಸ್ರಯೇಲಿನಲ್ಲಿ ಭೂಸೊತ್ತಾಗುವುದು; ಇನ್ನು ಮೇಲೆ ರಾಜರುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ನಾಡಿನ ಭೂಮಿಯನ್ನು ಇಸ್ರಯೇಲರಿಗೆ ಕುಲಕುಲಕ್ಕೂ ಹಂಚುವರು.


ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ಅದರ ಪ್ರವಾದಿಗಳು ಬಡಾಯಿಕೊಚ್ಚುವವರು, ವಿಶ್ವಾಸದ್ರೋಹಿಗಳು. ಅದರ ಯಾಜಕರು ಪವಿತ್ರವಾದುದನ್ನು ಹೊಲೆಗೆಡಿಸುವಂಥವರು, ಧರ್ಮವಿಧಿಗಳನ್ನು ಭಂಗಪಡಿಸುವಂಥವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು