Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:10 - ಕನ್ನಡ ಸತ್ಯವೇದವು C.L. Bible (BSI)

10 ಇವರು ಅವಳನ್ನು ಅವಮಾನಪಡಿಸಿ, ಅವಳ ಗಂಡು ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ, ಅವಳನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯನಿರ್ಣಯವಾಗುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಮತ್ತು ಅವಳ ಗಂಡು, ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇವರು ಅವಳನ್ನು ಅವಮಾನಪಡಿಸಿ ಅವಳ ಗಂಡು ಹೆಣ್ಣುಮಕ್ಕಳನ್ನು ಎತ್ತಿಕೊಂಡು ಹೋಗಿ ಅವಳನ್ನು ಖಡ್ಗದಿಂದ ಸಂಹರಿಸಿದರು. ಇವರು ಅವಳಿಗೆ ದಂಡನೆಮಾಡಿದ್ದರಿಂದ ಹೆಂಗಸರಲ್ಲಿ ಅವಳಿಗೆ ಕೆಟ್ಟಹೆಸರು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರು ಬಲವಂತದಿಂದ ಆಕೆಯನ್ನು ಸಂಭೋಗಿಸಿದರು. ಆಕೆಯ ಮಕ್ಕಳನ್ನು ತೆಗೆದುಕೊಂಡರು. ಖಡ್ಗವನ್ನು ತೆಗೆದುಕೊಂಡು ಆಕೆಯನ್ನು ಕೊಂದುಹಾಕಿದರು. ಆಕೆಯನ್ನು ಶಿಕ್ಷಿಸಿದರು. ಸ್ತ್ರೀಯರು ಈಗಲೂ ಆಕೆಯ ವಿಷಯ ಮಾತನಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಅವಳ ಬೆತ್ತಲೆತನವನ್ನು ಬಯಲುಪಡಿಸಿದರು ಮತ್ತು ಅವಳ ಪುತ್ರರನ್ನೂ, ಅವಳ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:10
8 ತಿಳಿವುಗಳ ಹೋಲಿಕೆ  

ಅವಳ ನಲ್ಲರ ಕಣ್ಣೆದುರಿಗೆ ಅವಳ ಲಜ್ಜೆಗೇಡಿತನವನ್ನು ಬಯಲುಮಾಡುವೆನು. ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ಅವರ ಕೈಗೆ ನಿನ್ನನ್ನು ನಾನು ಒಪ್ಪಿಸುವೆನು. ಅವರು ನಿನ್ನಲ್ಲಿ ಹಗೆ ತೀರಿಸಿಕೊಳ್ಳುವರು. ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಹಾದರವು, ಹೌದು, ನಿನ್ನ ಲಂಪಟತನ ಹಾಗು ಸೂಳೆತನ ಬಯಲಿಗೆ ಬರುವುವು.


ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.


ಹೀಗೆ ನಾನು ನಾಡಿನೊಳಗಿಂದ ಲಂಪಟತನವನ್ನು ತೊಲಗಿಸುವೆನು; ಇದರಿಂದ ಸಮಸ್ತ ಮಹಿಳೆಯರಿಗೂ ನಿಮ್ಮ ಲಂಪಟತನವನ್ನೂ ಅನುಸರಿಸಬಾರದೆಂಬ ಬುದ್ಧಿ ಬರುವುದು.


ಎಲೈ ಜೆರುಸಲೇಮ್, ಸೂರೆಯಾಗುವಾಗ ಏನು ಮಾಡುವೆ? ಪಟ್ಟದ ಬಟ್ಟೆಗಳನ್ನು ಉಟ್ಟುಕೊಂಡು ಚಿನ್ನದ ಒಡವೆಗಳನ್ನು ತೊಟ್ಟುಕೊಂಡು ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೆ ಏನು ಪ್ರಯೋಜನ? ಎಲ್ಲವೂ ವ್ಯರ್ಥ ! ನಿನ್ನ ಮಿಂಡರೇ ನಿನ್ನನ್ನು ತಿರಸ್ಕರಿಸಿ ನಿನ್ನ ಪ್ರಾಣಹುಡುಕುವರು.


ಇವಳು ಮುಚ್ಚುಮರೆಯಿಲ್ಲದೆ ಹಾದರಮಾಡಿ ತನ್ನ ಮಾನವನ್ನೇ ಕೆಡಿಸಿಕೊಂಡಾಗ ನನ್ನ ಅನುರಾಗ, ಮೊದಲು ಇವಳ ಅಕ್ಕನಿಂದ ದೂರವಾದ ಹಾಗೆ, ಇವಳಿಂದಲೂ ದೂರವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು