Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:11 - ಕನ್ನಡ ಸತ್ಯವೇದವು C.L. Bible (BSI)

11 “ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿಯೂ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ಹಾದರಕ್ಕಿಂತ ಹೆಚ್ಚಾಗಿ ಹಾದರವನ್ನು ನಡೆಸಿ ಅವಳನ್ನು ಮೀರುವಷ್ಟು ಕೆಟ್ಟವಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ವ್ಯಭಿಚಾರಕ್ಕಿಂತ ಹೆಚ್ಚಾದ ವ್ಯಭಿಚಾರವನ್ನು ನಡೆಸಿ, ಅವಳನ್ನು ಮೀರುವಷ್ಟು ಕೆಟ್ಟವಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿಯೂ ಅವಳಿಗಿಂತ ಅಧಿಕವಾಗಿ ಮೋಹಗೊಂಡು ಅಕ್ಕನ ಸೂಳೆತನಕ್ಕಿಂತ ಹೆಚ್ಚಾದ ಸೂಳೆತನವನ್ನು ನಡಿಸಿ ಅವಳನ್ನು ಮೀರಿ ಬಲುಕೆಟ್ಟವಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆಕೆಯ ತಂಗಿಯಾದ ಒಹೊಲೀಬಳು ಆಕೆಗಾದದ್ದನ್ನೆಲ್ಲಾ ನೋಡಿದ್ದಳು. ಆದರೆ ಒಹೊಲೀಬಳು ಅಕ್ಕನಿಗಿಂತ ಹೆಚ್ಚು ಪಾಪ ಮಾಡಿದಳು. ಆಕೆ ಒಹೊಲಳಿಗಿಂತ ಹೆಚ್ಚು ಅಪನಂಬಿಗಸ್ತಿಕೆಯುಳ್ಳವಳಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ, ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:11
6 ತಿಳಿವುಗಳ ಹೋಲಿಕೆ  

ಹಿರಿಯಳ ಹೆಸರು ಒಹೊಲ, ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರಿಯವನ್ನೂ, ಒಹೊಲೀಬ ಜೆರುಸಲೇಮನ್ನೂ ಸೂಚಿಸುವ ಹೆಸರುಗಳು.


ಸುಮಾರು ಮೂರು ತಿಂಗಳಾದ ಬಳಿಕ, ಯೆಹೂದನಿಗೆ ತನ್ನ ಸೊಸೆ ತಾಮಾರಳು ವ್ಯಭಿಚಾರದಿಂದ ಗರ್ಭವತಿಯಾಗಿದ್ದಾಳೆಂಬ ಸಮಾಚಾರ ಬಂದಿತು. ಅವನು, “ಅವಳನ್ನು ಎಳೆದು ತನ್ನಿ; ಸುಟ್ಟುಹಾಕಬೇಕು,” ಎಂದನು.


ಅವನು ಜುದೇಯದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಜೆರುಸಲೇಮಿನವರು ದೇವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.


ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು