Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:18 - ಕನ್ನಡ ಸತ್ಯವೇದವು C.L. Bible (BSI)

18 ಇವಳು ಮುಚ್ಚುಮರೆಯಿಲ್ಲದೆ ಹಾದರಮಾಡಿ ತನ್ನ ಮಾನವನ್ನೇ ಕೆಡಿಸಿಕೊಂಡಾಗ ನನ್ನ ಅನುರಾಗ, ಮೊದಲು ಇವಳ ಅಕ್ಕನಿಂದ ದೂರವಾದ ಹಾಗೆ, ಇವಳಿಂದಲೂ ದೂರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗೆ ಇವಳು ವ್ಯಭಿಚಾರವನ್ನು ಮಾಡಿ, ತನ್ನ ಬೆತ್ತಲೆತನವನ್ನು ಬಯಲುಪಡಿಸಿಕೊಂಡಾಗ, ತನ್ನ ಪ್ರೀತಿಯು ಮೊದಲು ಇವಳ ಅಕ್ಕನಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇವಳು ಮುಚ್ಚುಮರೆಯಿಲ್ಲದೆ ಸೂಳೆತನಮಾಡಿ ತನ್ನ ಮಾನವನ್ನು ಕೆಡಿಸಿಕೊಂಡಾಗ ನನ್ನ ಅನುರಾಗವು ಮೊದಲು ಇವಳ ಅಕ್ಕನಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ತಾನು ಅಪನಂಬಿಗಸ್ತಳೆಂದು ಎಲ್ಲರೂ ತನ್ನನ್ನು ಗುರುತಿಸುವಂತೆ ಒಹೊಲೀಬಳು ಮಾಡಿದಳು. ಆಕೆಯು ತನ್ನ ನಗ್ನ ಶರೀರವನ್ನು ತೋರಿಸಿದಳು. ಆದ್ದರಿಂದ ಅವಳ ಅಕ್ಕ ನನಗೆ ಹೇಗೆ ಅಸಹ್ಯವಾದಳೋ ಅದೇ ರೀತಿ ಈಕೆಯೂ ನನಗೆ ಅಸಹ್ಯವಾದಳು. ನನಗೆ ಆಕೆಯ ಅಕ್ಕನ ಮೇಲಿದ್ದ ಅನುರಾಗ ಹೇಗೆ ತೊಲಗಿಹೋಯಿತೋ ಹಾಗೆಯೇ ಈಕೆಯ ಮೇಲಿನ ಅನುರಾಗವೂ ತೊಲಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನ್ನು ಬಯಲು ಪಡಿಸಿಕೊಂಡಾಗ, ತನ್ನ ಜಿಗುಪ್ಸೆ ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:18
20 ತಿಳಿವುಗಳ ಹೋಲಿಕೆ  

ನನ್ನ ಸೊತ್ತಾದ ಜನತೆ ನನ್ನ ಪಾಲಿಗೆ ಅರಣ್ಯದ ಸಿಂಹದಂತೆ ನನಗೆದುರಾಗಿ ಅದು ಗರ್ಜಿಸಿದೆ, ಎಂದೇ ಅದನ್ನು ಹಗೆಮಾಡಿರುವೆ.


ಕೆರಳಿತು ಕೋಪ ಆ ಜನರ ಮೇಲೆ ಪ್ರಭುವಿಗೆ I ತನ್ನವರಾ ನಡತೆ ಅಸಹ್ಯವಾಯಿತು ಆತನಿಗೆ II


ರಣರೌದ್ರನಾದನು ಇದನರಿತ ದೇವನು I ತೊರೆದನು ಅಸಹ್ಯದಿಂದ ಇಸ್ರಯೇಲರನು II


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಿಮ್ಮ ಅಪರಾಧಗಳು ಬೆಳಕಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ಪ್ರತ್ಯಕ್ಷವಾಗಿ, ನೀವು ನಿಮ್ಮ ಅಧರ್ಮವನ್ನು ನನ್ನ ನೆನಪಿಗೆ ತಂದಿರುವಿರಿ; ಆದಕಾರಣ ಶತ್ರುವಿನ ಕೈಗೆ ಸಿಕ್ಕಿಬೀಳುವಿರಿ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.


ಜೆರುಸಲೇಮ್, ಎಚ್ಚರಿಕೆಯಿಂದ ನಡೆದುಕೊ. ಇಲ್ಲವಾದರೆ ನಾನು ನಿನ್ನನ್ನು ಅಗಲಿಬಿಡುವೆನು. ನಿನ್ನನ್ನು ಪಾಳುಬಿದ್ದ ನಿರ್ಜನ ಪ್ರದೇಶವಾಗಿಸುವೆನು.”


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.”


“ನಿಮ್ಮ ಹಬ್ಬಹುಣ್ಣಿಮೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ. ನಿಮ್ಮ ಉತ್ಸವಗಳ ವಾಸನೆಯೂ ನನಗೆ ಬೇಡ.


“ನಾನು ನನ್ನ ಜನರ ದುರವಸ್ಥೆಯನ್ನು ನೀಗಿಸಿ ಇಸ್ರಯೇಲನ್ನು ಸ್ವಸ್ಥಗೊಳಿಸಬೇಕೆಂದಿರುವಾಗ ಎಫ್ರಯಿಮಿನ ಅಕ್ರಮ ಮತ್ತು ಸಮಾರ್ಯದ ದುಷ್ಟತನ ಬಯಲಿಗೆ ಬರುತ್ತವೆ. ಅವರು ಒಬ್ಬರಿಗೊಬ್ಬರು ಮೋಸಮಾಡುತ್ತಾರೆ. ಕಳ್ಳರಂತೆ ನುಗ್ಗಿ ಕನ್ನಹಾಕುತ್ತಾರೆ. ದರೋಡೆಗಾರರಂತೆ ದಾರಿಯಲ್ಲೇ ಸುಲಿಗೆಮಾಡುತ್ತಾರೆ.


ಮಕ್ಕಳೇ, ವಾದಿಸಿರಿ; ನಿಮ್ಮ ತಾಯಿಯೊಡನೆ ವಾದಿಸಿರಿ. ಅವಳು ನನ್ನ ಪತ್ನಿಯಲ್ಲ, ನಾನು ಅವಳ ಪತಿಯಲ್ಲ. ತನ್ನ ಮುಖದಿಂದ ವೇಶ್ಯಾಚಾರದ ಸೋಗನ್ನೂ ಸ್ತನಮಧ್ಯದಿಂದ ವ್ಯಭಿಚಾರದ ಬೆಡಗನ್ನೂ ತ್ಯಜಿಸಲಿ.


“ಆಹಾ, ಮಿತಿಮೀರಿದ ನಿನ್ನ ಕಾಮಾತುರ! ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಮಿಂಡರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲ ಅಸಹ್ಯವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,


ಸ್ವಾಮಿ ತಿರಸ್ಕರಿಸಿಬಿಟ್ಟಿದ್ದಾನೆ ತನ್ನ ಬಲಿಪೀಠವನ್ನೇ ಅಸಹ್ಯಗೊಂಡು ತೊರೆದುಬಿಟ್ಟಿದ್ದಾನೆ ತನ್ನ ಪವಿತ್ರಸ್ಥಾನವನ್ನೇ ಸಿಯೋನ್ ಅರಮನೆಯ ಗೋಡೆಗಳನ್ನು ಕೆಡವಲು ಬಿಟ್ಟಿದ್ದಾನೆ ಹಗೆಗಳನ್ನೇ. ಹಬ್ಬಹರಿದಿನಗಳ ಜಯಘೋಷವೋ ಎಂಬಂತೆ ಘೋಷಣೆ ಹಾಕುತ್ತಿದ್ದಾರಲ್ಲಾ ಶತ್ರುಗಳು ಸರ್ವೇಶ್ವರನ ಮಂದಿರದಲ್ಲೆ !


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ಇದ ಕಂಡು ಸರ್ವೇಶ್ವರ ಬೇಸರಗೊಂಡ ತನ್ನಾ ಕುವರಕುವರಿಯರ ನಡತೆಯ ನೋಡಿ ನೊಂದುಕೊಂಡ.


ಬಾಗಿಲಿನ ಹಾಗು ಬಾಗಿಲಿನ ನಿಲುವಿನ ಹಿಂಭಾಗದಲ್ಲಿ ಅಶ್ಲೀಲ ಸ್ಮಾರಕಗಳನ್ನು ಇಟ್ಟುಕೊಂಡಿರುವೆ. ನನ್ನನ್ನು ತ್ಯಜಿಸಿಬಿಟ್ಟು, ನಿನ್ನ ಹಾಸಿಗೆಯನ್ನು ಬಿಚ್ಚಿರುವೆ. ಅನ್ಯರ ಸಂಗಮವನ್ನು ಬಯಸಿ ಅವರೊಂದಿಗೆ ಬೆಲೆಗೆ ಒಪ್ಪಂದ ಮಾಡಿಕೊಂಡಿರುವೆ; ಬಳಿಕ ಕಾಮವಿಲಾಸದಲ್ಲಿ ತೊಡಗಿರುವೆ.


ಆದಕಾರಣ ನಾನು ಅವಳನ್ನು ಅವಳ ಮಿಂಡರ ಕೈಗೆ ಅಂದರೆ, ಅವಳು ಮೋಹಿಸಿದ ಅಸ್ಸೀರಿಯರ ಕೈಗೆ ಒಪ್ಪಿಸಿದೆ.


ಇವರು ಅವಳನ್ನು ಅವಮಾನಪಡಿಸಿ, ಅವಳ ಗಂಡು ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ, ಅವಳನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯನಿರ್ಣಯವಾಗುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.


ಆದರೂ ಇವಳು ತಾನು ಈಜಿಪ್ಟ್ ದೇಶದಲ್ಲಿ ಸೂಳೆಯಾಗಿದ್ದ ತನ್ನ ತಾರುಣ್ಯವನ್ನು ನೆನಪುಮಾಡಿಕೊಂಡು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು