Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:25 - ಕನ್ನಡ ಸತ್ಯವೇದವು C.L. Bible (BSI)

25 ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು; ನಿನ್ನ ಮೂಗುಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು, ಅವರು ನಿನ್ನಲ್ಲಿ ಕೋಪವನ್ನು ತೀರಿಸಿಕೊಳ್ಳುವರು; ನಿನ್ನ ಮೂಗು, ಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವುರು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು ಅವರು ನಿನ್ನಲ್ಲಿ ಕೋಪತೀರಿಸಿಕೊಳ್ಳುವರು; ನಿನ್ನ ಮೂಗು ಕಿವಿಗಳನ್ನು ಕಿತ್ತುಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವರು; ನಿನ್ನ ಗಂಡುಹೆಣ್ಣುಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ನಿನ್ನ ವಿರುದ್ಧವಾಗಿ ನನ್ನ ಈರ್ಷೆಯ ಕೋಪವನ್ನು ನಿನ್ನ ಮೇಲೆ ಸುರಿಸುವೆನು. ಅವರಿಗೆ ಸಿಟ್ಟು ಬಂದು ನಿನ್ನನ್ನು ಹಿಂಸಿಸುವರು. ನಿನ್ನ ಕಿವಿ ಮೂಗುಗಳನ್ನು ಕತ್ತರಿಸಿಹಾಕುವರು. ತಮ್ಮ ಖಡ್ಗದಿಂದ ನಿನ್ನನ್ನು ಸಂಹರಿಸುವರು. ಆಮೇಲೆ ನಿನ್ನ ಮಕ್ಕಳನ್ನು ತೆಗೆದುಕೊಳ್ಳುವರು ಮತ್ತು ನಿನ್ನಲ್ಲಿ ಉಳಿದಿರುವುದನ್ನೆಲ್ಲ ಸುಟ್ಟುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು. ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು. ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದುಹಾಕು; ನಿನ್ನಲ್ಲಿ ಉಳಿದವರು ಖಡ್ಗದಿಂದ ಬೀಳುವರು. ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:25
17 ತಿಳಿವುಗಳ ಹೋಲಿಕೆ  

ಸಭೆಯವರು ಇವರ ಮೇಲೆ ಕಲ್ಲುತೂರಿ, ಕತ್ತಿಗಳಿಂದ ಸಂಹರಿಸಿ, ಇವರ ಗಂಡುಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಕಾರಿ ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಸರ್ವೇಶ್ವರನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ನೀವು ಬೇರೆ ದೇವರ ಮುಂದೆ ಅಡ್ಡಬೀಳಬಾರದು; ಏಕೆಂದರೆ ಸ್ವಾಭಿಮಾನಿಯೆಂಬ ಹೆಸರುಳ್ಳ ಸರ್ವೇಶ್ವರನಾದ ನಾನು ನನಗೆ ಸಲ್ಲಬೇಕಾದ ಅಭಿಮಾನವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ.


ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”


ನಿನ್ನ ವೃಕ್ಷದಲಿ, ನಿನ್ನ ಹಸ್ತಗಳಲಿ ಧರಿಸಿಕೊ ನನ್ನನ್ನು ಪ್ರೇಮ ಮುದ್ರೆಯಾಗಿ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ ! ಮತ್ಸರ ಪಾತಾಳದಷ್ಟು ಕ್ರೂರಿ ಅದರ ಜ್ವಾಲೆ ಬೆಂಕಿಯ ಉರಿ ಧಗಧಗಿಸುವ ಕೋಪಾಗ್ನಿ.


ಏಕೆಂದರೆ, ಅವಳ ಪತಿಗಾಗುವ ಮತ್ಸರ ಉದ್ರೇಕಗೊಳ್ಳುವುದು; ಕನಿಕರ ತೋರನು, ಮುಯ್ಯಿ ತೀರಿಸುವ ದಿನದಂದು.


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ಅವರ ಕೈಗೆ ನಿನ್ನನ್ನು ನಾನು ಒಪ್ಪಿಸುವೆನು. ಅವರು ನಿನ್ನಲ್ಲಿ ಹಗೆ ತೀರಿಸಿಕೊಳ್ಳುವರು. ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಹಾದರವು, ಹೌದು, ನಿನ್ನ ಲಂಪಟತನ ಹಾಗು ಸೂಳೆತನ ಬಯಲಿಗೆ ಬರುವುವು.


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು