Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:27 - ಕನ್ನಡ ಸತ್ಯವೇದವು C.L. Bible (BSI)

27 ಹೀಗೆ ನಾನು ನಿನ್ನ ಲಂಪಟತನವನ್ನೂ ನೀನು ಈಜಿಪ್ಟಿನಲ್ಲಿ ಇದ್ದಂದಿನಿಂದ ನಡೆದುಬಂದ ನಿನ್ನ ಸೂಳೆತನವನ್ನೂ ನಿನ್ನಿಂದ ತೊಲಗಿಸುವೆನು. ಆಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ ಈಜಿಪ್ಟನ್ನು ನೆನಪಿಗೆ ತಂದುಕೊಳ್ಳಲಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೀಗೆ ನಾನು ನಿನ್ನ ದುಷ್ಕರ್ಮವನ್ನು, ನೀನು ಐಗುಪ್ತದಲ್ಲಿ ಇದ್ದಂದಿನಿಂದ ನಡೆದು ಬಂದ ನಿನ್ನ ವ್ಯಭಿಚಾರವನ್ನೂ ನಿನ್ನಿಂದ ತೊಲಗಿಸುವೆನು; ಆ ಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೀಗೆ ನಾನು ನಿನ್ನ ಪುಂಡಾಟವನ್ನೂ ನೀನು ಐಗುಪ್ತದಲ್ಲಿದ್ದಂದಿನಿಂದ ನಡೆದು ಬಂದ ನಿನ್ನ ಸೂಳೆತನವನ್ನೂ ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ, ಈಜಿಪ್ಟ್ ದೇಶದಲ್ಲಿ ಆರಂಭವಾದ ನಿನ್ನ ನೀಚತನಕ್ಕೆ ಮತ್ತು ಅನೈತಿಕ ಜೀವಿತಕ್ಕೆ ತಡೆಹಾಕುವೆನು. ನೀನು ನಿನ್ನ ಕಣ್ಣುಗಳನ್ನು ಅವರ ಕಡೆಗೆ ಇನ್ನೆಂದಿಗೂ ತಿರುಗಿಸುವದಿಲ್ಲ. ನೀನು ಅವರನ್ನು ಜ್ಞಾಪಿಸಿಕೊಳ್ಳುವುದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಈಜಿಪ್ಟಿನಲ್ಲಿ ಇದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು. ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಈಜಿಪ್ಟನ್ನು ಜ್ಞಾಪಕಕ್ಕೆ ತರದೇ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:27
9 ತಿಳಿವುಗಳ ಹೋಲಿಕೆ  

ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಬಹುಮಾನ ತರದಂತೆಮಾಡುವೆನು.


ಆದರೂ ಇವಳು ತಾನು ಈಜಿಪ್ಟ್ ದೇಶದಲ್ಲಿ ಸೂಳೆಯಾಗಿದ್ದ ತನ್ನ ತಾರುಣ್ಯವನ್ನು ನೆನಪುಮಾಡಿಕೊಂಡು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿದಳು.


ಅವರು ಈಜಿಪ್ಟಿನಲ್ಲಿ ಸೂಳೆತನ ಮಾಡುತ್ತಿದ್ದರು. ಬಾಲ್ಯದಲ್ಲಿ ವೇಶ್ಯೆಯರಾಗಿ ನಡೆಯುತ್ತಿದ್ದರು. ಅಲ್ಲಿನ ಪುರುಷರು ಅವರ ಸ್ತನಗಳನ್ನು ಹಿಸುಕಿದರು, ಎಳೆಯ ತೊಟ್ಟುಗಳನ್ನು ಸವರಿಸಿದರು.


ಅಂದು ನಾಡಿನಲ್ಲಿ ವಿಗ್ರಹಗಳು ಹೆಸರಿಲ್ಲದಂತೆ ಮಾಡುವೆನು; ಅಷ್ಟೇ ಅಲ್ಲ, ಅವುಗಳನ್ನು ಯಾರೂ ನೆನಸಿಕೊಳ್ಳದಂತೆ ಮಾಡುವೆನು; ಅಲ್ಲದೆ ಪ್ರವಾದಿಯೆನಿಸಿಕೊಳ್ಳುವವರನ್ನೂ ಅಶುದ್ಧ ಆತ್ಮವನ್ನೂ ನಾಡಿನಿಂದ ತೊಲಗಿಸಿಬಿಡುವೆನು.


ನಾನು ನಿನ್ನನ್ನು ಜನಾಂಗಗಳಲ್ಲಿ ಚದರಿಸಿ, ದೇಶವಿದೇಶಗಳಿಗೆ ತೂರಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದುಹಾಕುವೆನು.


ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.


ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಣ ಕಲ್ಮಷವು ಕರಗಿ ಕಿಲುಬು ಇಲ್ಲವಾಗುವಂತೆ, ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.


ದರೋಡೆಗಾರರು ದಾರಿಹೋಕರಿಗಾಗಿ ಹೊಂಚುಹಾಕುವಂತೆ ಯಾಜಕರು ಗುಂಪುಗೂಡಿ ಹೊಂಚುಹಾಕುತ್ತಾ, ಶೆಖೆಮಿಗೆ ಯಾತ್ರೆಹೋಗುವವರನ್ನು ಕೊಂದುಹಾಕುತ್ತಾರೆ. ಅವರು ಮಾಡುವುದು ನಿಜಕ್ಕೂ ಘೋರಕೃತ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು