Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:29 - ಕನ್ನಡ ಸತ್ಯವೇದವು C.L. Bible (BSI)

29 ಅವರ ಕೈಗೆ ನಿನ್ನನ್ನು ನಾನು ಒಪ್ಪಿಸುವೆನು. ಅವರು ನಿನ್ನಲ್ಲಿ ಹಗೆ ತೀರಿಸಿಕೊಳ್ಳುವರು. ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಹಾದರವು, ಹೌದು, ನಿನ್ನ ಲಂಪಟತನ ಹಾಗು ಸೂಳೆತನ ಬಯಲಿಗೆ ಬರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು, ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬರಿದುಮಾಡಿ ಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ವ್ಯಭಿಚಾರವು, ಹೌದು, ನಿನ್ನ ದುಷ್ಕರ್ಮವು ಮತ್ತು ವ್ಯಭಿಚಾರವೂ ಬಯಲಿಗೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು ನೀನು ದುಡಿದದ್ದನ್ನೆಲ್ಲಾ ಅಪಹರಿಸಿ ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಸೂಳೆತನವು, ಹೌದು ನಿನ್ನ ಪುಂಡಾಟವೂ ಸೂಳೆತನವೂ ಬೈಲಿಗೆ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಅವರು ನಿನ್ನನ್ನು ಎಷ್ಟು ದ್ವೇಷಿಸುವರೆಂದು ನಿನಗೆ ತೋರಿಸುವರು. ನೀನು ದುಡಿದವುಗಳನ್ನೆಲ್ಲ ಅವರು ಕಿತ್ತುಕೊಳ್ಳುವರು. ನಿನ್ನನ್ನು ಬೆತ್ತಲೆಮಾಡಿ ಬಿಟ್ಟುಬಿಡುವರು. ಜನರು ನಿನ್ನ ಪಾಪಗಳನ್ನು ಪರಿಪೂರ್ಣವಾಗಿ ನೋಡುವರು. ನೀನು ಸೂಳೆಯಂತೆ ವರ್ತಿಸಿದ್ದನ್ನು ಅವರು ನೋಡುವರು. ನಿನ್ನ ನೀಚತನವೂ ನಿನ್ನ ಸೂಳೆತನವೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರು ನಿನ್ನ ವಿಷಯದಲ್ಲಿ ಹಗೆತೀರಿಸಿಕೊಳ್ಳುವರು. ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:29
11 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ಮಂಟಪವನ್ನು ಕೆಡವಿ, ನಿನ್ನ ಜಗಲಿಗಳನ್ನು ಒಡೆದು, ನಿನ್ನ ಬಟ್ಟೆಗಳನ್ನು ಕಿತ್ತು, ನಿನ್ನ ಒಡವೆಗಳನ್ನು ಸುಲಿದುಕೊಂಡು, ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.


ಇವಳು ಮುಚ್ಚುಮರೆಯಿಲ್ಲದೆ ಹಾದರಮಾಡಿ ತನ್ನ ಮಾನವನ್ನೇ ಕೆಡಿಸಿಕೊಂಡಾಗ ನನ್ನ ಅನುರಾಗ, ಮೊದಲು ಇವಳ ಅಕ್ಕನಿಂದ ದೂರವಾದ ಹಾಗೆ, ಇವಳಿಂದಲೂ ದೂರವಾಯಿತು.


ಇದಾದ ಮೇಲೆ ಅವನಿಗೆ ಆಕೆಯಲ್ಲಿ ತುಂಬಾ ದ್ವೇಷ ಹುಟ್ಟಿತು. ಅವನ ಮುಂಚಿನ ಪ್ರೀತಿಗಿಂತ ದ್ವೇಷವೇ ಹೆಚ್ಚಾಯಿತು.


ನಿನ್ನ ಉಡುಗೆಯನ್ನು ನಿನ್ನ ಕಣ್ಮುಂದೆಯೇ ಕೀಳಿಸುವೆನು. ನೀನು ಅತ್ಯಾಚಾರಕ್ಕೆ ಈಡಾಗುವೆ.


ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯೆ ದುರಾಚಾರಗಳನ್ನು ನಡೆಸಿದ್ದಾರೆ.


ಶಾಫೀರಿನವರೇ, ಬೆತ್ತಲೆಯಾಗಿ ಲಜ್ಜೆಗೆಟ್ಟು ತೊಲಗಿರಿ. ಚಾನಾನಿನವರಿಗೆ ಹೊರಬರಲು ಧೈರ್ಯವಿಲ್ಲ. ಬೇತೇಲಿನವರ ಗೋಳಾಟ ಕೇಳಿಬಂದಾಗ, ಅಲ್ಲಿ ನಿಮಗೆ ಆಶ್ರಯವಿಲ್ಲವೆಂದು ಗೊತ್ತಾಗುವುದು.


ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು