Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:3 - ಕನ್ನಡ ಸತ್ಯವೇದವು C.L. Bible (BSI)

3 ಅವರು ಈಜಿಪ್ಟಿನಲ್ಲಿ ಸೂಳೆತನ ಮಾಡುತ್ತಿದ್ದರು. ಬಾಲ್ಯದಲ್ಲಿ ವೇಶ್ಯೆಯರಾಗಿ ನಡೆಯುತ್ತಿದ್ದರು. ಅಲ್ಲಿನ ಪುರುಷರು ಅವರ ಸ್ತನಗಳನ್ನು ಹಿಸುಕಿದರು, ಎಳೆಯ ತೊಟ್ಟುಗಳನ್ನು ಸವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಐಗುಪ್ತದಲ್ಲಿ ಸೂಳೆತನ ಮಾಡುತ್ತಿದ್ದರು, ಬಾಲ್ಯದಲ್ಲೇ ಸೂಳೆಯರಾಗಿ ನಡೆಯುತ್ತಿದ್ದರು; ಅಲ್ಲಿ ಅವರ ಸ್ತನಗಳು ಹಿಸಕಲ್ಪಟ್ಟವು, ಎಳೆಯ ತೊಟ್ಟುಗಳು ನಸುಕಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ಈಜಿಪ್ಟಿನಲ್ಲಿ ಇನ್ನೂ ಎಳೆ ಪ್ರಾಯದಲ್ಲಿರುವಾಗಲೇ ಸೂಳೆಯರಾದರು. ಈಜಿಪ್ಟಿನಲ್ಲಿ ಅವರು ಮೊದಲ ಬಾರಿ ಸಂಭೋಗಿಸಿದರು. ಪುರುಷರು ತಮ್ಮ ಮೊಲೆತೊಟ್ಟುಗಳನ್ನು ಮುಟ್ಟಿ ಅವರ ಎಳೆಸ್ತನಗಳನ್ನು ಹಿಡಿಯಲು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಈಜಿಪ್ಟಿನಲ್ಲಿ ವೇಶ್ಯೆ ಆದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲಾದವು; ಅವುಗಳ ತೊಟ್ಟುಗಳು ನಸುಕಲಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:3
17 ತಿಳಿವುಗಳ ಹೋಲಿಕೆ  

ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.


ಈ ನಿನ್ನ ಅಸಹ್ಯಕಾರ್ಯಗಳನ್ನೂ ಸೂಳೆತನವನ್ನೂ ನೀನು ಪದೇ ಪದೇ ನಡಿಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.


“ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.


ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.


ಒಹೊಲೀಬಳೇ, ನಿನ್ನ ಪುಟ್ಟ ಮೊಲೆಗಳಿಗೆ ಆಸೆಬಿದ್ದ ಈಜಿಪ್ಟ್‌ರಿಂದ ತೊಟ್ಟುಗಳನ್ನು ಚಿವುಟಿಸಿಕೊಂಡ ನಿನ್ನ ತಾರುಣ್ಯದ ಕಾಮವನ್ನು ನೀನು ನೆನಪಿಗೆ ತಂದುಕೊಂಡು ಆ ಮಿಂಡರನ್ನು ಮೋಹಿಸಿದೆಯಲ್ಲವೆ?”


ಆದರೂ ಇವಳು ತಾನು ಈಜಿಪ್ಟ್ ದೇಶದಲ್ಲಿ ಸೂಳೆಯಾಗಿದ್ದ ತನ್ನ ತಾರುಣ್ಯವನ್ನು ನೆನಪುಮಾಡಿಕೊಂಡು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿದಳು.


ಅವಳು ಈಜಿಪ್ಟಿನಲ್ಲಿ ಇದ್ದಂದಿನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಬಾಲ್ಯದಲ್ಲಿಯೇ ಅಲ್ಲಿಯವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ನಸುಕಿ, ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು.


ಅವರಾದರೋ ನನ್ನ ಮಾತನ್ನು ಲೆಕ್ಕಿಸದೆ ನನ್ನ ವಿರುದ್ಧ ದಂಗೆಯೆದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತ್ಯಜಿಸಲಿಲ್ಲ. ಆಗ ನಾನು ಈಜಿಪ್ಟ್ ದೇಶದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಎಂದುಕೊಂಡೆ.


ನಾವು ಈಜಿಪ್ಟ್ ದೇಶದಲ್ಲಿ ವಾಸಮಾಡಿದ್ದು, ಅನೇಕ ಜನಾಂಗಗಳ ಪ್ರದೇಶಗಳನ್ನು ದಾಟಿಬಂದದ್ದು ನಿಮಗೆ ತಿಳಿದೇ ಇದೆ.


ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು.


ಕಲ್ಲುಮರಗಳಿಗೆ ಆರಾಧನೆಮಾಡಿ ವ್ಯಭಿಚಾರಿಣಿಯಾದಳು. ಇದೆಲ್ಲ ಲಘುವೆಂದು ಭಾವಿಸಿ ತನ್ನ ವೇಶ್ಯಾ ವರ್ತನೆಯಿಂದ ನಾಡನ್ನು ಅಪವಿತ್ರಪಡಿಸಿದಳು.


ಹಿರಿಯಳ ಹೆಸರು ಒಹೊಲ, ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರಿಯವನ್ನೂ, ಒಹೊಲೀಬ ಜೆರುಸಲೇಮನ್ನೂ ಸೂಚಿಸುವ ಹೆಸರುಗಳು.


ಆಗ ನಾನು - ‘ಆಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ ಅವಳು ಇವರೊಂದಿಗೆ ಜಾರತನ ಮಾಡುತ್ತಾರಲ್ಲಾ’ ಎಂದುಕೊಂಡೆ.


ಸರ್ವೇಶ್ವರಸ್ವಾಮಿ ಪ್ರಥಮವಾಗಿ ಹೊಶೇಯನ ಸಂಗಡ ಮಾತನಾಡುತ್ತಾ ಆತನಿಗೆ ಹೇಳಿದ್ದೇನೆಂದರೆ: “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೊ. ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೊ. ಏಕೆಂದರೆ, ನನ್ನ ಪ್ರಜೆ ನನ್ನನ್ನು ತೊರೆದುಬಿಟ್ಟು ವ್ಯಭಿಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಇದು ನಿದರ್ಶನವಾಗಿರಲಿ.”


“ಆದರೆ ನೀನು ನಿನ್ನ ಸೌಂದರ್ಯವನ್ನೇ ನೆಚ್ಚಿಕೊಂಡೆ, ‘ನಾನು ಪ್ರಸಿದ್ಧಳಾದೆ’ ಎಂದು ಉಬ್ಬಿಕೊಂಡು ಸೂಳೆತನಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ಹಾದರಮಾಡಿದೆ. ಒಬ್ಬೊಬ್ಬನಿಗೂ ಒಳಗಾದೆ.


‘ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಡಿಬಿಡಿ; ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿ; ನಾನು ನಿಮ್ಮ ದೇವರಾದ ಸರ್ವೇಶ್ವರ’ ಎಂದು ಅವರನ್ನು ಎಚ್ಚರಿಸಿದೆ.


ಅದರ ಬೋಕಿಗಳನ್ನು ಕಚ್ಚಿ, ನೆಕ್ಕಿ, ನಿನ್ನ ಮೊಲೆಗಳನ್ನು ಬಗೆದುಕೊಳ್ಳುವೆ. ಇದು ನನ್ನ ಅಪ್ಪಣೆ ಎಂಬುದೇ ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು