Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:36 - ಕನ್ನಡ ಸತ್ಯವೇದವು C.L. Bible (BSI)

36 ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೇ? ಹಾಗಾದರೆ ಅವರ ದುರಾಚಾರಗಳನ್ನು ಅವರಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಒಹೊಲಳಿಗೂ, ಒಹೊಲೀಬಳಿಗೂ ನ್ಯಾಯತೀರುಸುವೆಯೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಮತ್ತು ಯೆಹೋವನು ನನಗೆ ಹೀಗೆ ಹೇಳಿದನು - ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನೀನು ಒಹೊಲ ಮತ್ತು ಒಹೊಲೀಬಳನ್ನು ನ್ಯಾಯವಿಚಾರಣೆ ಮಾಡುವಿಯೋ? ಆಗ ನೀನು, ಗಾಬರಿಗೊಳಿಸುವ ಅವರ ದುಷ್ಟತನವನ್ನು ಅವರಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೆಹೋವ ದೇವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸುವೆಯೋ? ಹೌದು, ಅವರ ಅಸಹ್ಯಕರ ಕೃತ್ಯಗಳನ್ನು ಅವರಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:36
15 ತಿಳಿವುಗಳ ಹೋಲಿಕೆ  

“ನರಪುತ್ರನೇ, ರಕ್ತಸಿಕ್ತವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ಸ್ಥಿರಮನಸ್ಸು ಮಾಡಿರುವೆಯಾ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು -


“ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನೀನೂ ಮನಸ್ಸು ಮಾಡಿರುವೆಯಾ? ಇವರ ಪಿತೃಗಳ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು -


“ನರಪುತ್ರನೇ, ನೀನು ಜೆರುಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ -


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ರಾಷ್ಟ್ರಗಳ ಮೇಲೂ ರಾಜ್ಯಗಳ ಮೇಲೂ ಅಧಿಕಾರವುಳ್ಳವನನ್ನಾಗಿ ನಾನು ನಿನ್ನನ್ನು ಈ ದಿನ ನೇಮಿಸಿದ್ದೇನೆ. ಇದರಿಂದಾಗಿ ಕಿತ್ತುಹಾಕುವ ಹಾಗು ಕೆಡುವುವ, ನಾಶಪಡಿಸುವ ಹಾಗು ನೆಲಸಮಮಾಡುವ, ಕಟ್ಟುವ ಹಾಗು ನೆಡುವ ಕಾರ್ಯ ನಿನ್ನದು,” ಎಂದರು


ಮಕ್ಕಳೇ, ವಾದಿಸಿರಿ; ನಿಮ್ಮ ತಾಯಿಯೊಡನೆ ವಾದಿಸಿರಿ. ಅವಳು ನನ್ನ ಪತ್ನಿಯಲ್ಲ, ನಾನು ಅವಳ ಪತಿಯಲ್ಲ. ತನ್ನ ಮುಖದಿಂದ ವೇಶ್ಯಾಚಾರದ ಸೋಗನ್ನೂ ಸ್ತನಮಧ್ಯದಿಂದ ವ್ಯಭಿಚಾರದ ಬೆಡಗನ್ನೂ ತ್ಯಜಿಸಲಿ.


ಸರ್ವೇಶ್ವರ ಮತ್ತೆ ನನಗೆ : “ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆಮಾಡಬೇಡ.


ಆದುದರಿಂದ ಯೆರೆಮೀಯನೇ, ಈ ಜನರ ಪರವಾಗಿ ಬೇಡಿಕೊಳ್ಳಬೇಡ. ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂಬೇಡ. ಅವರಿಗೆ ಕೇಡು ಬಂದಾಗ ನನ್ನನ್ನು ಗೋಗರೆದರೂ ನಾನು ಕೇಳುವುದಿಲ್ಲ.


ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


ಹಿರಿಯಳ ಹೆಸರು ಒಹೊಲ, ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರಿಯವನ್ನೂ, ಒಹೊಲೀಬ ಜೆರುಸಲೇಮನ್ನೂ ಸೂಚಿಸುವ ಹೆಸರುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು