Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:45 - ಕನ್ನಡ ಸತ್ಯವೇದವು C.L. Bible (BSI)

45 ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಹರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ಅವರಿಗೆ ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 “ನೀತಿವಂತರು ಅವರನ್ನು ವ್ಯಭಿಚಾರ ಮಾಡಿದ ಮತ್ತು ಕೊಲೆ ಮಾಡಿದ ಅಪರಾಧಿಗಳೆಂದು ತೀರ್ಪು ನೀಡುವರು. ಯಾಕೆಂದರೆ, ಒಹೊಲ ಮತ್ತು ಒಹೊಲೀಬಳ ವ್ಯಭಿಚಾರವನ್ನು ಆಚರಣೆ ಮಾಡುತ್ತಾರೆ ಮತ್ತು ರಕ್ತವು ಅವರ ಕೈಗಳ ಮೇಲಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ನೀತಿಯುಳ್ಳ ನ್ಯಾಯಾಧೀಶರು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು. ಏಕೆಂದರೆ ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:45
17 ತಿಳಿವುಗಳ ಹೋಲಿಕೆ  

ಖಂಡತುಂಡವಾದ ತೀರ್ಪುನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯದಂಡನೆ ಮಿಂಚಿನಂತೆ ಹೊರಡುವುದು.


“ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ಆದುದರಿಂದ ಸೇನಾಧೀಶ್ವರ ಸರ್ವೇಶ್ವರ ಆದ ದೇವರು ಯೆರೆಮೀಯನಿಗೆ ಹೀಗೆಂದರು : “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು; ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು; ಆ ಬೆಂಕಿ ಅವರನ್ನು ಸುಟ್ಟುಹಾಕುವುದು.


ಯಾಜಕನ ಮಗಳು ಸೂಳೆತನದಿಂದ ನಿಂದೆಗೆ ಒಳಗಾದರೆ ತನ್ನ ತಂದೆಯನ್ನೂ ನಿಂದೆಗೆ ಒಳಪಡಿಸಿದವಳಾದಳು; ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿನ್ನ ಮಧ್ಯೆ ರಕ್ತ ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ, ನಿನ್ನ ಕೇಡಿಗಾಗಿಯೇ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನೆ ಹೊಲೆಗೆಡಿಸಿಕೊಂಡ ನಗರಿಯೇ,


ಅವರು ಆಯುಧ, ರಥ, ಸರಕುಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಗಳನ್ನು ಧರಿಸಿ, ನಿನಗೆ ವಿರುದ್ಧ ಸುತ್ತುಮುತ್ತಲು ವ್ಯೂಹ ಕಟ್ಟುವರು. ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಕೊಡುವೆನು; ಅವರು ತಮ್ಮ ನ್ಯಾಯಾನುಸಾರ ತೀರ್ಪುನೀಡಿ ನಿನ್ನನ್ನು ದಂಡಿಸುವರು.


ಸೂಳೆಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟಹೆಂಗಸರಾದ ಒಹೊಲಳನ್ನೂ ಒಹೊಲೀಬಳನ್ನೂ ಸೇರಿದರು.


ಮಕ್ಕಳೇ, ವಾದಿಸಿರಿ; ನಿಮ್ಮ ತಾಯಿಯೊಡನೆ ವಾದಿಸಿರಿ. ಅವಳು ನನ್ನ ಪತ್ನಿಯಲ್ಲ, ನಾನು ಅವಳ ಪತಿಯಲ್ಲ. ತನ್ನ ಮುಖದಿಂದ ವೇಶ್ಯಾಚಾರದ ಸೋಗನ್ನೂ ಸ್ತನಮಧ್ಯದಿಂದ ವ್ಯಭಿಚಾರದ ಬೆಡಗನ್ನೂ ತ್ಯಜಿಸಲಿ.


ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.


ಇದಲ್ಲದೆ, ನಿರ್ದೋಷಿಗಳಾದ ದೀನದಲಿತರ ಪ್ರಾಣರಕ್ತ ನಿಮ್ಮ ಬಟ್ಟೆಗೆ ಅಂಟಿಕೊಂಡಿದೆ! ‘ಇವರು ಕನ್ನ ಕೊರೆಯುವುದನ್ನು ಕಂಡೆವು’ ಎಂದು ನೀವು ನೆವ ಹೇಳುವಂತಿಲ್ಲ. ನಿಮ್ಮ ಈ ಎಲ್ಲ ದುರಭ್ಯಾಸಗಳ ನಿಮಿತ್ತ ದಂಡಿಸುವೆನು.


ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಿಹರು ಆ ಯಾಜಕರು ಮತ್ತು ಪ್ರವಾದಿಗಳು. ಅವರ ಬಟ್ಟೆಯನ್ನೂ ಯಾರೂ ಮುಟ್ಟರು ಏಕೆಂದರೆ ರಕ್ತದಿಂದ ಅವರು ಕಳಂಕಿತರಾಗಿಹರು.


ಜೆರುಸಲೇಮ್ ನಗರ ಸುರಿಸಿದ ರಕ್ತ ಅದರಲ್ಲೇ ನಿಂತಿದೆ. ಧೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ, ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು