Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:47 - ಕನ್ನಡ ಸತ್ಯವೇದವು C.L. Bible (BSI)

47 ಸಭೆಯವರು ಇವರ ಮೇಲೆ ಕಲ್ಲುತೂರಿ, ಕತ್ತಿಗಳಿಂದ ಸಂಹರಿಸಿ, ಇವರ ಗಂಡುಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಸಭೆಯವರು ಇವರ ಮೇಲೆ ಕಲ್ಲೆಸೆದು, ಕತ್ತಿಗಳಿಂದ ಇವರನ್ನು ಸಂಹರಿಸಿ, ಇವರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಸಭೆಯವರು ಇವರ ಮೇಲೆ ಕಲ್ಲೆಸೆದು ಕತ್ತಿಗಳಿಂದ ಇವರನ್ನು ಸಂಹರಿಸಿ ಇವರ ಗಂಡು ಹೆಣ್ಣುಮಕ್ಕಳನ್ನು ಕೊಂದು ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಆ ಬಳಿಕ ಜನರ ಗುಂಪು ಅವರ ಮೇಲೆ ಕಲ್ಲೆಸೆದು ಅವರನ್ನು ಕೊಲ್ಲುವುದು. ಆಮೇಲೆ ತಮ್ಮ ಖಡ್ಗಗಳಿಂದ ಅವರನ್ನು ತುಂಡುತುಂಡು ಮಾಡುವರು. ಅವರ ಮಕ್ಕಳನ್ನು ಕೊಂದು ಅವರ ಮನೆಗಳನ್ನು ಸುಟ್ಟುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಖಡ್ಗಗಳಿಂದ ಕೊಯ್ದು ಅವರ ಪುತ್ರರನ್ನೂ ಪುತ್ರಿಯರನ್ನೂ ಕೊಂದುಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:47
14 ತಿಳಿವುಗಳ ಹೋಲಿಕೆ  

ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬಾಬಿಲೋನಿಯದವರು ಬೆಂಕಿಯಿಂದ ಸುಟ್ಟು ಜೆರುಸಲೇಮಿನ ಸುತ್ತಣವಿದ್ದ ಗೋಡೆಗಳನ್ನು ಕೆಡವಿದರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಆರಿಸಿ, ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು.


ಅವರ ಕೈಗೆ ನಿನ್ನನ್ನು ನಾನು ಒಪ್ಪಿಸುವೆನು. ಅವರು ನಿನ್ನಲ್ಲಿ ಹಗೆ ತೀರಿಸಿಕೊಳ್ಳುವರು. ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಹಾದರವು, ಹೌದು, ನಿನ್ನ ಲಂಪಟತನ ಹಾಗು ಸೂಳೆತನ ಬಯಲಿಗೆ ಬರುವುವು.


ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು; ನಿನ್ನ ಮೂಗುಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.


ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಅದರಲ್ಲಿ ಇರುವ ಎಲ್ಲ ಸಾಮಗ್ರಿಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ, ಅದರಲ್ಲಿರುವ ಎಲ್ಲ ಸಾಮಾನುಗಳನ್ನೂ ನಿಮ್ಮ ದೇವರಾದ ಸರ್ವೇಶ್ವರನಿಗೆ ನಿಶ್ಯೇಷವಾಗಿ ಸುಟ್ಟುಬಿಡಬೇಕು. ಅದು ಪುನಃ ಯಾವಾಗಲೂ ಹಾಳುದಿಬ್ಬವಾಗಿರಬೇಕು. ಅದನ್ನು ಪುನಃ ಕಟ್ಟಬಾರದು.


“ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಹೀಗೆ ನಾನು ನಾಡಿನೊಳಗಿಂದ ಲಂಪಟತನವನ್ನು ತೊಲಗಿಸುವೆನು; ಇದರಿಂದ ಸಮಸ್ತ ಮಹಿಳೆಯರಿಗೂ ನಿಮ್ಮ ಲಂಪಟತನವನ್ನೂ ಅನುಸರಿಸಬಾರದೆಂಬ ಬುದ್ಧಿ ಬರುವುದು.


ಈ ನಗರಕ್ಕೆ ಮುತ್ತಿಗೆಹಾಕಲಿರುವ ಬಾಬಿಲೋನಿಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕುವರು. ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳ್‍ದೇವತೆಗೆ ಧೂಪಾರತಿ ಎತ್ತಿದ್ದಾರೋ, ಅನ್ಯದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದ್ದಾರೋ, ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ನಗರವನ್ನು ಸುಟ್ಟುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು