ಯೆಹೆಜ್ಕೇಲನು 23:49 - ಕನ್ನಡ ಸತ್ಯವೇದವು C.L. Bible (BSI)49 ನಿಮ್ಮ ಲಂಪಟತನದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪದ ಫಲವನ್ನು ನೀವು ಅನುಭವಿಸಿ, ನಾನೇ ಸರ್ವೇಶ್ವರನಾದ ದೇವರು ಎಂದು ತಿಳಿದುಕೊಳ್ಳುವಿರಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ನಿಮ್ಮ ದುಷ್ಕರ್ಮದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸುವಿರಿ. ನಾನೇ ಕರ್ತನಾದ ಯೆಹೋವನು” ಎಂದು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ನಿಮ್ಮ ಬೊಂಬೆಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸಿ ನಾನೇ ಕರ್ತನಾದ ಯೆಹೋವನು ಎಂದು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ನಿನ್ನ ನಾಚಿಕೆಕರವಾದ ಕಾರ್ಯಗಳಿಗಾಗಿ ಅವರು ನಿನ್ನನ್ನು ಶಿಕ್ಷಿಸುವರು. ನೀನು ಅಸಹ್ಯವಾದ ವಿಗ್ರಹಗಳನ್ನು ಪೂಜೆಮಾಡಿದ್ದಕ್ಕೆ ಶಿಕ್ಷಿಸಲ್ಪಡುವಿ. ಆಗ ನಾನೇ ಒಡೆಯನೂ ಯೆಹೋವನೂ ಎಂದು ನೀನು ತಿಳಿಯುವಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ನಿಮ್ಮ ದುಷ್ಕರ್ಮದ ಫಲವನ್ನು ನೀವೇ ಅನುಭವಿಸುವಂತೆ ಮಾಡುವೆ. ನೀವು ನಿಮ್ಮ ವಿಗ್ರಹಗಳ ಆರಾಧನೆಯಿಂದಾದ ಪಾಪಗಳನ್ನು ಹೊರುವಿರಿ. ಆಗ ಸಾರ್ವಭೌಮ ಯೆಹೋವ ದೇವರು ನಾನೇ ಎಂದು ತಿಳಿದುಕೊಳ್ಳುವಿರಿ.” ಅಧ್ಯಾಯವನ್ನು ನೋಡಿ |