Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:5 - ಕನ್ನಡ ಸತ್ಯವೇದವು C.L. Bible (BSI)

5 ಒಹೊಲಳು ನನ್ನವಳಾಗಿದ್ದರೂ ಹಾದರ ನಡೆಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಒಹೊಲಳು ನನ್ನ ವಶವಾಗಿರುವಾಗಲೇ, ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯರನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಒಹೊಲಳು ನನ್ನ ಹೆಂಡತಿಯಾಗಿದ್ದರೂ ಸೂಳೆಯಾಗಿ ನಡೆದು ತನ್ನ ವಿುಂಡರನ್ನು ಅಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಒಹೊಲಳು ನನಗೆ ಅಪನಂಬಿಗಸ್ತಳಾದಳು. ಆಕೆ ಸೂಳೆಯಂತೆ ಜೀವಿಸತೊಡಗಿದಳು. ಆಕೆ ಪುರುಷರಿಗಾಗಿ ಆಸೆಪಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಒಹೊಲಳು ಇನ್ನು ನನ್ನ ವಶವಾಗಿರುವಾಗಲೇ ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು ತನ್ನ ನೆರೆಯವರಾದ ಅಸ್ಸೀರಿಯದವರನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:5
23 ತಿಳಿವುಗಳ ಹೋಲಿಕೆ  

“ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು.


ಅಸ್ಸೀರಿಯದ ಅರಸ ಶಲ್ಮನೆಸರನು ಇವನಿಗೆ ವಿರುದ್ಧ ದಂಡೆತ್ತಿ ಬಂದಾಗ ಇವನು ಇವನಿಗೆ ಅಧೀನನಾಗಿ ಕಪ್ಪಕೊಡುವವನಾದನು.


ಆಹಾಜನು ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪೆಲೆಸರನ ಬಳಿಗೆ ದೂತರನ್ನು ಕಳುಹಿಸಿ, “ನಾನು ನಿಮ್ಮ ಸೇವಕ ಹಾಗು ಕುವರ; ನೀವು ಬಂದು ನನ್ನನ್ನು, ನನಗೆ ವಿರುದ್ಧ ದಂಡೆತ್ತಿ ಬಂದಿರುವ ಸಿರಿಯಾದವರ ಮತ್ತು ಇಸ್ರಯೇಲರ ಅರಸುಗಳ ಕೈಗೆ ಸಿಕ್ಕದಂತೆ, ಕಾಪಾಡಿ,” ಎಂದು ಹೇಳಿಸಿದನು.


ಅಸ್ಸೀರಿಯಾ ದೇಶದ ಅರಸನಾದ ಪೂಲನೆಂಬವನು ಇಸ್ರಯೇಲ್ ದೇಶಕ್ಕೆ ವಿರುದ್ಧ ದಾಳಿಯಿಟ್ಟಾಗ, ಮೆನಹೇಮನು ಅವನ ಮುಖಾಂತರ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವುದಕ್ಕಾಗಿ, ಅವನಿಗೆ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.


“ಇಷ್ಟೂ ಸಾಲದೆಂದು ನೀನು ಅಸ್ಸೀರಿಯರೊಂದಿಗೂ ಹಾದರಮಾಡಿದೆ; ಹೌದು, ಅವರೊಡನೆ ಹಾದರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.


ಅವರ ನೀರನ್ನೆಲ್ಲ ಹೀರಲಿ ಬೇಗನೆ ಬತ್ತಿಹೋಗಲಿ ಅವರ ತೊರೆ. ಅಕಟಾ! ತುಂಬಿದೆ ಆ ದೇಶ ಬೊಂಬೆಗಳಿಂದ ಮದವೇರಿದೆ ಅದರ ಜನತೆಗೆ ವಿಗ್ರಹಾರಾಧನೆಯಿಂದ.


“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”


ಆ ವಿಗ್ರಹವನ್ನು ಅಸ್ಸೀರಿಯದ ಜಗಳಗಂಟಿ ರಾಜನಿಗೆ ಕಾಣಿಕೆಯಾಗಿ ಕೊಡಲಾಗುವುದು. ಎಫ್ರಯಿಮಿಗೆ ಅವಮಾನವಾಗುವುದು. ಇಸ್ರಯೇಲ್ ತಾನು ಕೆತ್ತಿಸಿಕೊಂಡ ವಿಗ್ರಹಕ್ಕಾಗಿ ನಾಚಿಕೆಗೀಡಾಗುವುದು.


ಕತ್ತೆಗಳಂತೆ ಬೆದೆಯುಳ್ಳವರು, ಕುದುರೆಗಳಂತೆ ದಾಟುವವರು ಆದ ಕಸ್ದೀಯ ಮಿಂಡರನ್ನು ಮೋಹಿಸಿದಳು.


ಬಾಬಿಲೋನಿಯಾದ ಆ ವ್ಯಕ್ತಿಗಳ ಬಳಿಗೆ ದೂತರನ್ನು ಕಳುಹಿಸುತ್ತಿದ್ದಳು.


ಇವಳು ನಾಯಕ-ಉಪನಾಯಕರೂ ಯೋಧರೂ ವಿಚಿತ್ರ ವಸ್ತ್ರಧಾರಿಗಳೂ ಅಶ್ವಾರೂಢರೂ ಎಲ್ಲ ಮನೋಹರ ಯುವಕರೂ ಆದ ಅಸ್ಸೀರಿಯರನ್ನು ಮೋಹಿಸಿದಳು.


ಆದಕಾರಣ ನಾನು ಅವಳನ್ನು ಅವಳ ಮಿಂಡರ ಕೈಗೆ ಅಂದರೆ, ಅವಳು ಮೋಹಿಸಿದ ಅಸ್ಸೀರಿಯರ ಕೈಗೆ ಒಪ್ಪಿಸಿದೆ.


ತನ್ನನ್ನು ಸೂಳೆಯಾಗಿ ಒಪ್ಪಿಸಿಕೊಂಡಳು; ಇವರೆಲ್ಲರು ಅಸ್ಸೀರಿಯದಲ್ಲಿನ ಗಣ್ಯವ್ಯಕ್ತಿಗಳು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನೇ ಹೊಲಸುಮಾಡಿಕೊಂಡಳು.


ಇವುಗಳನ್ನು ನಾನು ನೋಡಿ, ನೀನು ರಮಿಸಿದ ನಿನ್ನ ಎಲ್ಲ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತ ಜಾರರನ್ನೂ, ನೀನು ಹಗೆಮಾಡಿದ ಎಲ್ಲರನ್ನೂ, ಸುತ್ತುಮುತ್ತಲು ನಿನಗೆ ವಿರುದ್ಧ ಒಟ್ಟುಗೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆ ಬಹಳ ಅಸಹ್ಯವಾಗಿತ್ತು.


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಯೇಲರನ್ನೂ ಪಾಪಕ್ಕೆ ಪ್ರೇರಿಸಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದ್ದರಿಂದ ಹೀಗಾಯಿತು.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ತನ್ನ ತಂದೆಯ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದೆ; ನನ್ನನ್ನು ತಿರಸ್ಕರಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದೆ.


ಹಿರಿಯಳ ಹೆಸರು ಒಹೊಲ, ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರಿಯವನ್ನೂ, ಒಹೊಲೀಬ ಜೆರುಸಲೇಮನ್ನೂ ಸೂಚಿಸುವ ಹೆಸರುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು