Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:1 - ಕನ್ನಡ ಸತ್ಯವೇದವು C.L. Bible (BSI)

1 ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವೇಶ್ವರಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಂಭತ್ತನೆಯ ವರ್ಷದ, ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ಯೆಹೋಯಾಖೀನನು ಸೆರೆಯಾದ] ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಒಡೆಯನಾದ ಯೆಹೋವನ ಸಂದೇಶ ನನಗೆ ಬಂತು. ಇದು ಸೆರೆಹೋದ (ಯೆಹೋಯಾಖೀನನು ಸೆರೆಯಾದ) ಒಂಭತ್ತನೇ ವರ್ಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಆಯಿತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:1
17 ತಿಳಿವುಗಳ ಹೋಲಿಕೆ  

ಏಳನೆಯ ವರ್ಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಸರ್ವೇಶ್ವರನನ್ನು ಪ್ರಶ್ನಿಸುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.


ಅದು ಆರನೆಯ ವರ್ಷದ ಆರನೆಯ ತಿಂಗಳಿನ ಐದನೆಯ ದಿನ. ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕುಳಿತಿದ್ದೆವು. ಸರ್ವೇಶ್ವರನಾದ ದೇವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ ಅಂದರೆ, ಪಟ್ಟಣವು ಹಾಳಾದ ಹದಿನಾಲ್ಕನೆಯ ವರ್ಷದ ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಹೌದು, ಆ ದಿನದಲ್ಲೇ ನಾನು ಸರ್ವೇಶ್ವರಸ್ವಾಮಿಯ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನ್ನನ್ನು ಅಲ್ಲಿಗೆ ಒಯ್ದರು.


ನಾವು ಸೆರೆಯಾಗಿ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಜೆರುಸಲೇಮಿನಿಂದ ಪಲಾಯನ ಮಾಡಿದವನೊಬ್ಬನು ನನ್ನ ಬಳಿಗೆ ಬಂದು, - ‘ಪಟ್ಟಣವು ಶತ್ರು ವಶವಾಯಿತು’ ಎಂದು ಹೇಳಿದನು.


ಹನ್ನೆರಡನೆಯ ವರ್ಷದ ಹದಿನೈದನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು -


ಹನ್ನೆರಡನೆಯ ವರ್ಷದ ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:


ಹನ್ನೊಂದನೆಯ ವರ್ಷದ ಮೂರನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:


ಇಪ್ಪತ್ತೇಳನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:


ಹನ್ನೊಂದನೆಯ ವರ್ಷದ ಒಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು:


ಅದೇ ತಿಂಗಳಿನ ಐದನೆಯ ದಿನ, ಅಂದರೆ, ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷ,


ಆಗ ಜುದೇಯದ ಅರಸ ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು. ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಸಕಲ ಸೈನ್ಯಸಮೇತ ಬಂದು ಜೆರುಸಲೇಮನ್ನು ಮುತ್ತಿದನು.


ಅವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದ. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದ.


ನಿಮ್ಮ ಲಂಪಟತನದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪದ ಫಲವನ್ನು ನೀವು ಅನುಭವಿಸಿ, ನಾನೇ ಸರ್ವೇಶ್ವರನಾದ ದೇವರು ಎಂದು ತಿಳಿದುಕೊಳ್ಳುವಿರಿ.”


“ನರಪುತ್ರನೇ, ಈ ದಿನದ ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬಿಲೋನಿನ ಅರಸನು ಜೆರುಸಲೇಮಿಗೆ ಮುತ್ತಿಗೆ ಹಾಕಿದ್ದಾನೆ.


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು