ಯೆಹೆಜ್ಕೇಲನು 24:17 - ಕನ್ನಡ ಸತ್ಯವೇದವು C.L. Bible (BSI)17 ಸದ್ದಿಲ್ಲದೆ ಮೊರೆಯಿಡು, ವಿಯೋಗದುಃಖ ತೋರಿಸಬೇಡ. ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ವಿಯೋಗದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಮೌನವಾಗಿ ನರಳಾಡು. ನಿನ್ನ ಸತ್ತ ಹೆಂಡತಿಗಾಗಿ ಗಟ್ಟಿಯಾಗಿ ರೋಧಿಸಬೇಡ. ನೀನು ಯಾವಾಗಲೂ ತೊಡುವ ಬಟ್ಟೆಯನ್ನು ತೊಟ್ಟುಕೋ. ಮುಂಡಾಸವನ್ನು ಕಟ್ಟಿಕೋ. ಕಾಲಿಗೆ ಕೆರವನ್ನು ಮೆಟ್ಟಿಕೋ, ನಿನ್ನ ದುಃಖವನ್ನು ತೋರಿಸಲು ಮೀಸೆಯನ್ನು ಮುಚ್ಚಿಕೊಳ್ಳಬೇಡ. ಮರಣದ ಊಟವನ್ನು ಮಾಡದಿರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.” ಅಧ್ಯಾಯವನ್ನು ನೋಡಿ |
ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರಿಗೆ, “ನೀವು ಸಂತಾಪ ಸೂಚಿಸಲು ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವು ಕೂಡ ಸಾಯುವಿರಿ; ಅದು ಮಾತ್ರವಲ್ಲ, ಇಡೀ ಜನಸಮೂಹದ ಮೇಲೆ ಸರ್ವೇಶ್ವರ ಸಿಟ್ಟುಗೊಳ್ಳುವರು. ಸರ್ವೇಶ್ವರನಿಂದ ಹೊರಟ ಆ ಬೆಂಕಿಯ ನಿಮಿತ್ತ ನಿಮ್ಮ ಸೋದರರಾದ ಇಸ್ರಯೇಲ್ ಸಮಾಜದವರೇ ದುಃಖಿಸಲಿ.