Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:21 - ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಹೊಲೆಮಾಡಿಸುವೆನು. ನೀವು ಬಿಟ್ಟುಬಂದಿರುವ ನಿಮ್ಮ ಗಂಡುಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು ಎಂಬದಾಗಿ ಕರ್ತನಾದ ಯೆಹೋವನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇಸ್ರಾಯೇಲರ ಮನೆತನದವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ ಎಂದು ಹೇಳು: ಇಗೋ, ನಾನು ನನ್ನ ಪವಿತ್ರಾಲಯವನ್ನೂ, ನಿಮ್ಮ ಮುಖ್ಯಬಲವನ್ನೂ, ನಿಮ್ಮ ನೇತ್ರಾನಂದಕರವಾದದ್ದನ್ನೂ, ನಿಮ್ಮ ಮನಸ್ಸು ಅಭಿಲಾಷಿಸುವುದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳು ಖಡ್ಗದಿಂದ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:21
33 ತಿಳಿವುಗಳ ಹೋಲಿಕೆ  

ಸಭೆಯವರು ಇವರ ಮೇಲೆ ಕಲ್ಲುತೂರಿ, ಕತ್ತಿಗಳಿಂದ ಸಂಹರಿಸಿ, ಇವರ ಗಂಡುಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.


ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು; ನಿನ್ನ ಮೂಗುಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.


ಈ ಕಾರಣ ನನ್ನ ನಾಮಕ್ಕೆ ನೆಲೆಯಾದ ಹಾಗು ನಿಮ್ಮ ಭರವಸೆಗೆ ಆಧಾರವಾದ ಈ ದೇವಾಲಯಕ್ಕೆ, ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ಈ ಸ್ಥಳಕ್ಕೆ ನಾನು ಶಿಲೋಗೆ ಬರಮಾಡಿದ ಗತಿಯನ್ನೇ ಬರಮಾಡುವೆನು.


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು. ಆದರೂ ನೀನು ಗೋಳಾಡಬೇಡ, ಅಳಬೇಡ, ಕಣ್ಣೀರು ಸುರಿಸಬೇಡ.


ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.


ಹೇ ಪ್ರಭು, ಸ್ವರ್ಗ ಸೇನಾಧೀಶ್ವರ I ನಿನ್ನ ನಿವಾಸಗಳೆನಿತೋ ಸುಂದರ II


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸುವುದು. ಅನುದಿನದ ಬಲಿಯನ್ನು ನಿಲ್ಲಿಸುವುದು. ವಿನಾಶಕರ ವಿಕಟ ಮೂರ್ತಿಯನ್ನು ಪ್ರತಿಷ್ಠಾಪಿಸುವುದು.


ದೇವರು ಅವರಿಗೆ, “ಹೊರಡಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿ,” ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.


ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ !


ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.


“ಆದರೆ ನನ್ನನ್ನು ತೊರೆದು ನನ್ನ ಪವಿತ್ರ ಪರ್ವತವನ್ನು ಮರೆತು, ‘ಗಾದ್’ ಎಂಬ ಅದೃಷ್ಟ ದೇವತೆಗೆ ಔತಣವನ್ನು ಅಣಿಮಾಡುವ, ‘ಮೆನೀ’ ಎಂಬ ಗತಿ ದೇವತೆಗೆ ಬೆರೆತ ಮದ್ಯವನ್ನು ಭರ್ತಿಮಾಡುವ, ನಿಮಗೆ ಕತ್ತಿಯನ್ನೇ ಗತಿಯನ್ನಾಗಿ ಮಾಡುವೆನು.


ಆಗಮಿಸು ಪ್ರಭು, ನಿನ್ನ ತೇಜೋ ಮಂಜೂಷದೊಡನೆ I ನಿನ್ನಾ ವಾಸಸ್ಥಾನವನು ಬಂದು ಸೇರು ಬೇಗನೆ II


ಅರಸಿರಿ ಪ್ರಭುವನೂ ಆತನ ಶಕ್ತಿಯನೂ I ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II


ಇವೆ ಮಹಿಮೆ, ಮಹತ್ವ, ಆತನ ಸನ್ನಿಧಿಯಲಿ I ಶಕ್ತಿಸೌಂದರ್ಯ ಆತನ ಗರ್ಭಗುಡಿಯಲಿ II


ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II


ಅಗ್ನಿಗಾಹುತಿ ಮಾಡಿಹರು ನಿನ್ನ ನಾಮದ ಮಂದಿರವನು I ಹೊಲಸುಮಾಡಿ, ನೆಲಸಮಮಾಡಿಹರಿದೊ ನಿನ್ನ ದೇಗುಲವನು II


ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣವಾಗಿಸುವೆನು. ನೀವು ಸಾಗುವಳಿ ಮಾಡುವ ಭೂಮಿಯನ್ನು ತಾಮ್ರವಾಗಿಸುವೆನು.


ಹೀಗಿರಲು ನಾನು ಅತಿ ದುಷ್ಟಜನಾಂಗಗಳನ್ನು ಬರಮಾಡುವೆನು; ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವುವು;


ಅದಕ್ಕೆ ನಾನು ಹೀಗೆ ಹೇಳಿದೆ: “ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದ್ದಾರೆ -


ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ,


“ನರಪುತ್ರನೇ, ಅವರಿಗೆ ಬಲಾಧಾರವೂ ನೇತ್ರಾನಂದವೂ ಆದ ಅವರ ಇಷ್ಟು ಸುಂದರ ಆಲಯವನ್ನೂ ಹೃದಯೋಲ್ಲಾಸವಾದ ಅವನ ಗಂಡು ಹೆಣ್ಣುಮಕ್ಕಳನ್ನೂ ನಾನು ನಿರ್ಮೂಲಮಾಡುವ ದಿನದಲ್ಲಿ


ನಾನು ದೇಶವನ್ನು ಹಾಳುಪಾಳು ಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವುದು; ಇಸ್ರಯೇಲಿನ ಮಲೆನಾಡು ಬೀಡುಬೀಳುವುದು; ಯಾರೂ ಇಲ್ಲಿ ಹಾದುಹೋಗರು.


ಎಫ್ರಯಿಮಿಗೆ ಏಟು ಬಿದ್ದಿದೆ; ಅವರ ವಂಶದ ಬೇರು ಬತ್ತಿಹೋಗಿದೆ. ಅವರು ಫಲಹೀನರಾಗಿದ್ದಾರೆ. ಮಕ್ಕಳನ್ನು ಹೆತ್ತರೂ ಅವಳ ಕರುಳ ಕುಡಿಯನ್ನು ಕತ್ತರಿಸಿಹಾಕುವೆನು.”


ಇಂಥ ಕೃತ್ಯವನ್ನು ಎಸಗುವವನು ಎಂಥ ಕುಟುಂಬಕ್ಕಾದರೂ ಸೇರಿರಲಿ - ಅಂಥವನನ್ನು ಸೇನಾಧೀಶ್ವರ ಸರ್ವೇಶ್ವರ ಯಕೋಬನ ಕುಲದಿಂದ ಹೊರಗೆ ಹಾಕುವರು.


ನಾನು ಕೊಟ್ಟ ನಾಡಿನಿಂದ ಇಸ್ರಯೇಲರನ್ನು ತೆಗೆದುಹಾಕುವೆನು; ನನ್ನ ಹೆಸರಿಗಾಗಿ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಯೇಲರು ಎಲ್ಲಾ ಜನಾಂಗಗಳವರ ಲಾವಣಿಗೂ ನಿಂದೆಪರಿಹಾಸ್ಯಕ್ಕೂ ಗುರಿಯಾಗುವರು.


ಸ್ವಾಮಿ ದೇವ, ಎನ್ನರಸ, ಸ್ವರ್ಗಸೇನಾಧೀಶ್ವರ I ದೊರಕಿದೆ ಗುಬ್ಬಿಗೆ ಗೂಡು ನಿನ್ನ ವೇದಿಕೆಯ ಹತ್ತಿರ I ಪಾರಿವಾಳಕ್ಕು ಅಲ್ಲೇ ಇದೆ ಮರಿಯಿಡಲು ಆಗರ II


ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !


ವಯಸ್ಕರೂ ವೃದ್ಧರೂ ಬಿದ್ದಿದ್ದಾರೆ ಬೀದಿಗಳಲ್ಲೆ ತರುಣತರುಣಿಯರು ತುತ್ತಾಗಿದ್ದಾರೆ ಖಡ್ಗಗಳಿಗೆ. ನಿನ್ನ ಪ್ರಕೋಪದ ದಿನದಂದು ಹತಮಾಡಿದೆಯಲ್ಲಾ ಅವರನ್ನು ಕನಿಕರಿಸದೆ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು