Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:3 - ಕನ್ನಡ ಸತ್ಯವೇದವು C.L. Bible (BSI)

3 ಈ ದ್ರೋಹಿವಂಶಕ್ಕೆ ದೃಷ್ಟಾಂತಕೊಟ್ಟು ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಈ ದಂಗೆಕೋರ ಮನೆತನದವರಿಗೆ ದೃಷ್ಟಾಂತವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈ ದ್ರೋಹಿವಂಶಕ್ಕೆ ದೃಷ್ಟಾಂತವನ್ನೆತ್ತಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ವಿಷಯವನ್ನು ವಿಧೇಯರಾಗದ ಆ ಸಂತಾನಕ್ಕೆ ತಿಳಿಸು. ಅವರಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “‘ಹಂಡೆಯನ್ನು ಬೆಂಕಿಯ ಮೇಲಿಟ್ಟು ಅದರಲ್ಲಿ ನೀರು ಹೊಯ್ಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಟ್ಟು ಅದರಲ್ಲಿ ನೀರನ್ನು ಸುರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:3
30 ತಿಳಿವುಗಳ ಹೋಲಿಕೆ  

ಆಗ ನಾನು - “ಅಯ್ಯೋ, ಸರ್ವೇಶ್ವರನಾದ ದೇವರೇ, ‘ಅವನು ಒಗಟುಗಾರನಲ್ಲವೆ?’ ಎಂದು ಈ ಜನರು ನನ್ನ ಬಗ್ಗೆ ಆಡಿಕೊಳ್ಳುತ್ತಾರೆ” ಎಂದು ಅರಿಕೆಮಾಡಿದೆನು.


“ನರಪುತ್ರನೇ, ನೀನು ಇಸ್ರಯೇಲ್ ವಂಶದವರಿಗೆ ಈ ಸಾಮತಿಯನ್ನು ಒಗಟಾಗಿ ಹೇಳು -


ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿ ವಂಶದವರು; ಅವರ ಬಿರುನುಡಿಗೆ ದಿಗಿಲು ಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.


ಅವರು ನನಗೆ ಹೀಗೆ ಹೇಳಿದರು, “ನರಪುತ್ರನೇ, ನನಗೆ ವಿಮುಖರಾಗಿ ದ್ರೋಹಮಾಡಿದ ಜನಾಂಗದವರಾದ ಇಸ್ರಯೇಲರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನ್ನನ್ನು ಪ್ರತಿಭಟಿಸುತ್ತಲೇ ಬಂದಿದ್ದಾರೆ.


ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಆರಿಸಿ, ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು.


“ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು: ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿತೆರೆದು ತಿಂದುಬಿಡು,” ಎಂದರು.


ಇವರು ದಂಗೆ ಏಳುವ ಜನರು. ಸುಳ್ಳಾಡುವ ಪೀಳಿಗೆ, ಸರ್ವೇಶ್ವರನ ಉಪದೇಶಕ್ಕೆ ಕಿವಿಗೊಡದ ಸಂತಾನ,


ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.


ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು I ಹೊರಪಡಿಸುವೆನು ಪೂರ್ವಕಾಲದ ಗೂಡಾರ್ಥಗಳನು II


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.”


ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.


ಆ ದಿನದಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ. ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋದಿಸುವರು.


“ದ್ರೋಹಿವಂಶದ ಈ ಜನರಿಗೆ ಹೀಗೆ ಹೇಳು - ಇದರ ಅರ್ಥ ನಿಮಗೆ ತಿಳಿಯಲಿ; ಇಗೋ, ಬಾಬಿಲೋನಿನ ಅರಸನು ಜೆರುಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದ;


ನಾನೇ ಸರ್ವೇಶ್ವರ; ನಾನು ನುಡಿದೆ ತೀರುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು. ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು. ಇದು ಸರ್ವೇಶ್ವರನಾದ ದೇವರ ವಾಕ್ಯ.”


“ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ಈ ಪಟ್ಟಣ ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿ ಮಾಂಸವಾಗುವುದಿಲ್ಲ; ಇಸ್ರಯೇಲಿನ ಮೇರೆಯಲ್ಲೆ ನಿಮಗೆ ದಂಡನೆಯನ್ನು ವಿಧಿಸುವೆನು.


“ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.


ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಕಠಿಣವಾದ ವಜ್ರದಷ್ಟು ಕಠಿಣಪಡಿಸಿದ್ದೇನೆ; ಅವರು ದ್ರೋಹಿ ವಂಶದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಬೆಚ್ಚದಿರು.”


ಮತ್ತೆ ಸರ್ವೇಶ್ವರ ನನಗೆ, “ಇನ್ನೂ ಏನು ನೋಡುತ್ತಿರುವೆ?” ಎಂದರು. ಅದಕ್ಕೆ ನಾನು, “ಉರಿಯುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯೊಂದನ್ನು ನೋಡುತ್ತಿದ್ದೇನೆ. ಅದರ ಬಾಯಿ ಉತ್ತರದಿಂದ ಇತ್ತ ಬಾಗಿಕೊಂಡಿದೆ,” ಎಂದೆ.


ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ಎಲೀಷನು ಪುನಃ ಗಿಲ್ಗಾಲಿಗೆ ಹೋದನು. ಆಗ ನಾಡಿನಲ್ಲಿ ಬರವಿತ್ತು. ಪ್ರವಾದಿಮಂಡಲಿಯವರು ತನ್ನ ಮುಂದೆ ಕೂಡಿಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೆ ಅಡಿಗೆಮಾಡು,” ಎಂದು ಆಜ್ಞಾಪಿಸಿದನು.


ಅದಕ್ಕೆ ಸ್ವಾಮಿ ನನಗೆ ಹೀಗೆಂದರು : “ಈ ನಾಡಿನ ನಿವಾಸಿಗಳೆಲ್ಲರ ಮೇಲೆ ಉತ್ತರದಿಂದ ಕೇಡು ಉಕ್ಕಿಬರುವುದು.


ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು.


ಅವರು ಈ ಮಾತನ್ನು ಹೇಳಿದ ಕೂಡಲೆ ದೇವರಾತ್ಮ ನನ್ನೊಳಗೆ ಸೇರಿ ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆ.


ಅವರು ದ್ರೋಹಿ ವಂಶದವರು, ಒಂದು ವೇಳೆ ಕೇಳದೆ ಹೋಗಬಹುದು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿ ತಮ್ಮ ಮಧ್ಯೆ ಕಾಣಿಸಿಕೊಂಡಿದ್ದಾನೆಂದು ತಿಳಿದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು