ಯೆಹೆಜ್ಕೇಲನು 24:6 - ಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಆರಿಸಿ, ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಮಯವಾದ ಪಟ್ಟಣವೇ ನಿನಗೆ ಧಿಕ್ಕಾರ, ಒಳಗೆ ಕಿಲುಬು ಹಿಡಿದಿರುವ, ಕಿಲುಬು ಬಿಟ್ಟುಹೋಗದಿರುವ ಹಂಡೆ! ಅದರಿಂದ ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಅದಕ್ಕಾಗಿ ಚೀಟುಗಳನ್ನು ಹಾಕಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಾ, ರಕ್ತಮಯವಾದ ಪಟ್ಟಣದ ಗತಿಯನ್ನು ಏನು ಹೇಳಲಿ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಇದಕ್ಕೆ ಕ್ರಮದ ಚೀಟು ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರ ಪಟ್ಟಣವಾದ ಜೆರುಸಲೇಮಿಗೆ ಆಪತ್ತು ಬರುವುದು. ಕೊಲೆಗಾರರ ನಗರಕ್ಕೆ ಕೇಡಾಗುವದು. ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಆ ಕಿಲುಬಿನ ಕಲೆಯನ್ನು ತೆಗೆಯಲಾಗುವುದೇ ಇಲ್ಲ. ಆ ಹಂಡೆಯು ಅಶುದ್ಧವಾಗಿರುವುದರಿಂದ ಅದರೊಳಗಿರುವ ಮಾಂಸವನ್ನೆಲ್ಲಾ ಹೊರಗೆ ತೆಗೆದುಬಿಡು. ಆ ಮಾಂಸವನ್ನು ನೀನಾಗಲಿ ಯಾಜಕರಾಗಲಿ ತಿನ್ನಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ ‘ಆದಕಾರಣ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ರಕ್ತಮಯವಾದ ಆ ಪಟ್ಟಣಕ್ಕೆ ಕಷ್ಟ! ಯಾವುದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ತುಂಡುತುಂಡಾಗಿ ಹೊರಗೆ ತೆಗೆ. ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ. ಅಧ್ಯಾಯವನ್ನು ನೋಡಿ |