Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:8 - ಕನ್ನಡ ಸತ್ಯವೇದವು C.L. Bible (BSI)

8 ಆ ರಕ್ತದಿಂದ ರೋಷವೆದ್ದು ಮುಯ್ಯಿಗೆ ಮುಯ್ಯಿ ತೀರಿಸಲೆಂದು, ಅದನ್ನು ನಾನು ಇಂಗಗೊಡಿಸದೆ ಬರೀ ಬಂಡೆಯ ಮೇಲೆ ನಿಲ್ಲಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ, ರೋಷವನ್ನೆಬ್ಬಿಸುವ ಹಾಗೆ, ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಅದನ್ನು ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ರಕ್ತದಿಂದ ರೋಷವೆದ್ದು ಮುಯ್ಯಿಗೆ ಮುಯ್ಯಿತೀರಿಸಲೆಂದು ಅದನ್ನು ನಾನು ಇಂಗಗೊಡಿಸದೆ ಬರೀ ಬಂಡೆಯ ಮೇಲೆ ನಿಲ್ಲಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಕೆಯು ಸುರಿಸಿದ ರಕ್ತವು ಬರಿದಾದ ಬಂಡೆಯ ಮೇಲೆ ಮುಚ್ಚಲ್ಪಡದಂತೆ ನಾನೇ ಮಾಡಿದೆನು. ನಿರಪರಾಧಿಗಳನ್ನು ಆಕೆ ಕೊಂದದ್ದಕ್ಕೆ ಜನರು ಕೋಪಗೊಂಡು ಆಕೆಯನ್ನು ದಂಡಿಸಲೆಂದು ನಾನು ಹೀಗೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ ರೋಷವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:8
23 ತಿಳಿವುಗಳ ಹೋಲಿಕೆ  

“ಅಯ್ಯೋ ! ಅಯ್ಯೋ ! ಮಹಾನಗರಿ ನಿನಗೆಂಥಾ ದುರ್ಗತಿ ! ಕೆನ್ನೀಲಿಯ ಕಡುಗೆಂಪಿನ ನಯವಸ್ತ್ರಗಳನುಟ್ಟವಳೇ, ಹೊನ್ನ ತೊಟ್ಟವಳೇ, ಮತ್ತು ರತ್ನಾಭರಣಗಳನು ಧರಿಸಿದವಳೇ, ತಾಸೊಂದರಲೇ ನಿನ್ನ ಐಸಿರಿಯೆಲ್ಲಾ ವ್ಯರ್ಥವಾಯಿತೇ!” ಎಂದು ದುಃಖಿಸಿ ಅತ್ತು ಗೋಳಾಡುವರು.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಹರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ.”


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಕಾರಿ ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಸರ್ವೇಶ್ವರನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


‘ಗಗನದೊಡತಿ’ ಎಂದು ಇವರು ಕರೆದ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ; ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯುತ್ತಿರುವುದು ಆರಿಹೋಗುವುದಿಲ್ಲ,” ಎನ್ನುತ್ತಾರೆ.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯಹತ್ತಿ ಆರಿಹೋಗುವುದೇ ಇಲ್ಲ,’ ಎನ್ನುತ್ತಾರೆ ಸರ್ವೇಶ್ವರ.


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿರುವೆ. ಹೀಗೆ ನಿನ್ನ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.


ಸರ್ವೇಶ್ವರ ಇಂತೆನ್ನುತ್ತಾರೆ, “ಮಾನವರ ಮೇಲೆ ಕಷ್ಟ - ಸಂಕಷ್ಟಗಳನ್ನು ಬರಮಾಡುವೆನು; ಅವರು ಕುರುಡರಂತೆ ತಡಕಾಡುವರು. ಏಕೆಂದರೆ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ; ಅವರ ರಕ್ತವನ್ನು ನೀರಿನಂತೆ ಚೆಲ್ಲಲಾಗುವುದು; ಅವರ ಹೆಣಗಳನ್ನು ಕಸದಂತೆ ಕೊಳೆಯಲು ಬಿಡಲಾಗುವುದು.”


ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು