Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:11 - ಕನ್ನಡ ಸತ್ಯವೇದವು C.L. Bible (BSI)

11 ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸದೆ ಬಿಡೆನು. ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸಿ ತೀರಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸಿ ತೀರಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೀಗೆ ನಾನು ಮೋವಾಬನ್ನು ಶಿಕ್ಷಿಸುವೆನು. ಆಗ ನಾನೇ ಯೆಹೋವನೆಂದು ಅವರು ತಿಳಿಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮೋವಾಬ್ಯರಿಗೆ ನಾನು ಶಿಕ್ಷೆಯನ್ನು ವಿಧಿಸುವೆನು. ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:11
20 ತಿಳಿವುಗಳ ಹೋಲಿಕೆ  

ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.


“ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸುವೆನು. ಆಗ ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡೆಸಿದವನು ನಾನೇ ಎಂದು ಆ ಜನಾಂಗಗಳಿಗೆಲ್ಲಾ ಗೋಚರವಾಗುವುದು,


ಇಸ್ರಯೇಲರ ಸೊತ್ತಿನ ನಾಶನಕ್ಕೆ ಜಗವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೆಯೀರ್ ಬೆಟ್ಟವೇ, ನೀನು ಹಾಳಾಗುವೆ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ವ್ಯಕ್ತವಾಗುವುದು.”


ಹೀಗೆ ನಾನು ಈಜಿಪ್ಟರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ನಾನು ದಕ್ಷಿಣ ಈಜಿಪ್ಟನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಕ್ಕಿ, ತೆಬೆಸಿನ ರಾಜಧಾನಿಯನ್ನು ದಂಡಿಸಿ,


ಅವರೆಲ್ಲರನ್ನು ಬಹಳವಾಗಿ ಖಂಡಿಸಿ ಮುಯ್ಯಿಗೆ ಮುಯ್ಯಿ ತೀರಿಸುವೆನು; ಹೀಗೆ ಪ್ರತೀಕಾರಮಾಡುವೆನು, ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿ ಹಾಗೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿ ಮಾಡುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಬಹುಮಾನ ತರದಂತೆಮಾಡುವೆನು.


ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು.


“ನಾನು ಕೋಪದಿಂದ, ರೋಷದಿಂದ ಹಾಗು ತೀವ್ರ ಖಂಡನೆಯಿಂದ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ ಪರಿಹಾಸ್ಯಗಳಿಗೂ ಬೆರಗು ಬುದ್ಧಿವಾದಗಳಿಗೂ ಆಸ್ಪದವಾಗುವುವು; ಇದು ಸರ್ವೇಶ್ವರನಾದ ನನ್ನ ನುಡಿ.


ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.’


ಆದುದರಿಂದ ಜೆರುಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಸರ್ವೇಶ್ವರನಾದ ನನ್ನ ನುಡಿ.


ಎದೋಮ್, ಮೋವಾಬ್, ಅಮ್ಮೋನ್ ಜನರೆಲ್ಲರು;


ಈ ಪರಿ ಮುಯ್ಯಿತೀರಿಸಲಿ ಜನಾಂಗಗಳಿಗೆ I ವಿಧಿಸಲಿ ದಂಡನೆಯನು ಅನ್ಯರಾಷ್ಟ್ರಗಳಿಗೆ II


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು;


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಎದೋಮ್ ಯೆಹೂದವಂಶಕ್ಕೆ ಪ್ರತೀಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ;


ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು