Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:15 - ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಫಿಲಿಷ್ಟಿಯರು ಜುದೇಯಕ್ಕೆ ಪ್ರತೀಕಾರ ಮಾಡಿದ್ದಾರೆ; ಹೌದು, ಮುಯ್ಯಿಗೆ ಮುಯ್ಯಿ ತೀರಿಸುತ್ತಾ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಫಿಲಿಷ್ಟಿಯರು ಯೆಹೂದಕ್ಕೆ ಪ್ರತಿಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಫಿಲಿಷ್ಟಿಯರು ಯೆಹೂದಕ್ಕೆ ಪ್ರತೀಕಾರಮಾಡಿದ್ದಾರೆ; ಹೌದು, ಮುಯ್ಯಿಗೆ ಮುಯ್ಯಿತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಫಿಲಿಷ್ಟಿಯರು ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ಆವೇಶದಿಂದ ತಿರಸ್ಕರಿಸಿ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ತಮ್ಮ ದೀರ್ಘಕಾಲದ ದ್ವೇಷದಿಂದ ನಾಶನವು ಬರುವಂತೆ ಮಾಡಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ತೀರಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಯೆಹೂದವನ್ನು ಕೆಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:15
22 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಎದೋಮ್ ಯೆಹೂದವಂಶಕ್ಕೆ ಪ್ರತೀಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ;


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಒದೆದು, ಇಸ್ರಯೇಲ್ ನಾಡನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದಕ್ಕೆ ಬಂದ ಗತಿಗೆ ಹಿಗ್ಗಿಕೊಂಡೆ.


ಊಚ್ ನಾಡಿನ ಎಲ್ಲ ಅರಸರು, ಫಿಲಿಷ್ಟಿಯ ದೇಶದ ಎಲ್ಲ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಅಷ್ಟೋದಿನ ಶೇಷ, ಈ ಪ್ರಾಂತ್ಯಗಳ ಎಲ್ಲ ಅರಸರು;


ಫಿಲಿಷ್ಟಿಯರು ಜುದೇಯದ ಇಳಕಲಿನ ಪ್ರದೇಶದ ಮತ್ತು ದಕ್ಷಿಣಪ್ರಾಂತದ ಪಟ್ಟಣಗಳ ಮೇಲೆ ದಾಳಿಮಾಡಿ ಬೇತ್ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿ ಇದ್ದರು.


ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಜಾಬಾದ್, ಶೂತೆಲಹ ಎಂಬವರು. ಶೂತೆಲಹನಲ್ಲದೆ ಎಫ್ರಯಿಮನಿಗೆ ಎಜೆರ್, ಎಲ್ಲಾದ್ ಎಂಬಿಬ್ಬರು ಮಕ್ಕಳಿದ್ದರು. ಇವರು ಗತ್‍ನ ಮೂಲನಿವಾಸಿಗಳ ದನಗಳನ್ನು ಕದಿಯಲು ಪ್ರಯತ್ನಿಸಿದಾಗ ಕೊಲೆಗೀಡಾದರು.


“ನೀನು ಇಸ್ರಯೇಲಿನ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದೆ.


ಎದೋಮ್ಯರ ಪಾಳೆಯದವರು ಇಷ್ಮಾಯೇಲ್ಯರು, I ಗೇಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, II


ಅರಸ ಆಹಾಜನು ಕಾಲವಾದ ವರುಷದಲಿ ಕೇಳಿಬಂದಿತು ಈ ದೈವೋಕ್ತಿ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು