Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:16 - ಕನ್ನಡ ಸತ್ಯವೇದವು C.L. Bible (BSI)

16 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನಾನು ಫಿಲಿಷ್ಟಿಯರನ್ನು ಶಿಕ್ಷಿಸುವೆನು, ಹೌದು, ಕೆರೇತದ ಆ ಜನರನ್ನು ನಾಶಮಾಡುವೆನು. ಸಮುದ್ರ ಕರಾವಳಿಯಲ್ಲಿ ವಾಸಿಸುವ ಉಳಿದ ಜನರನ್ನೆಲ್ಲಾ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಫಿಲಿಷ್ಟಿಯರ ವಿರುದ್ಧ ನನ್ನ ಕೈಯನ್ನು ಚಾಚುವೆನು. ಕೆರೇತಿಯರನ್ನು ಕಡಿದುಬಿಡುವೆನು: ಉಳಿದವರನ್ನು ಸಮುದ್ರ ತೀರದಲ್ಲಿ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:16
8 ತಿಳಿವುಗಳ ಹೋಲಿಕೆ  

ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ನಾವು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು,” ಎಂದು ಉತ್ತರಕೊಟ್ಟನು.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ಸುಲಿಗೆಗಾಗಿ ನಿನ್ನನ್ನು ಮ್ಲೇಚ್ಛರಿಗೆ ವಶಪಡಿಸುವೆನು. ಜನಾಂಗಗಳಿಂದ ಕಿತ್ತು, ದೇಶಗಳಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


ದಾವೀದನ ಎಲ್ಲಾ ಸೇವಕರೂ, ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳು ಮತ್ತು ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಮಂದಿ ಗಿತ್ತೀಯರು ಅರಸನ ಮುಂದೆ ಹೋದರು.


ಊಚ್ ನಾಡಿನ ಎಲ್ಲ ಅರಸರು, ಫಿಲಿಷ್ಟಿಯ ದೇಶದ ಎಲ್ಲ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಅಷ್ಟೋದಿನ ಶೇಷ, ಈ ಪ್ರಾಂತ್ಯಗಳ ಎಲ್ಲ ಅರಸರು;


ನಾನು ಅಷ್ಡೋದಿನಲ್ಲಿ ಸಿಂಹಾಸನಾರೂಢನಾಗಿ ಇರುವವನನ್ನೂ ಅಷ್ಕೆಲೋನಿನಲ್ಲಿ ಆಡಳಿತಾಧಿಕಾರಿಯನ್ನೂ ನಿರ್ಮೂಲ ಮಾಡುವೆನು. ಎಕ್ರೋನಿನ ಪಟ್ಟಣವನ್ನು ಶಿಕ್ಷಿಸುವೆನು. ಫಿಲಿಷ್ಟಿಯರಲ್ಲಿ ಅಳಿದುಳಿದವರೆಲ್ಲರೂ ನಾಶವಾಗಿಹೋಗುವರು,” ಇದೂ ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು