Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:7 - ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ಸುಲಿಗೆಗಾಗಿ ನಿನ್ನನ್ನು ಮ್ಲೇಚ್ಛರಿಗೆ ವಶಪಡಿಸುವೆನು. ಜನಾಂಗಗಳಿಂದ ಕಿತ್ತು, ದೇಶಗಳಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸುಲಿಗೆಗಾಗಿ ಮ್ಲೇಚ್ಛರಿಗೆ ವಶಪಡಿಸಿ, ಜನಾಂಗಗಳೊಳಗಿಂದ ಕಿತ್ತುಬಿಟ್ಟು, ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ, ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸೂರೆಗಾಗಿ ಮ್ಲೇಚ್ಫರಿಗೆ ವಶಪಡಿಸಿ ಜನಾಂಗಗಳೊಳಗಿಂದ ಕಿತ್ತುಬಿಟ್ಟು ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದಕ್ಕಾಗಿ ನಾನು ನಿಮ್ಮನ್ನು ದಂಡಿಸುವೆನು. ಜನಾಂಗಗಳಿಂದ ನಿಮ್ಮನ್ನು ಕೊಳ್ಳೆ ಹೊಡೆಸಿ ನಿರ್ಮೂಲ ಮಾಡುವೆನು. ದೇಶಗಳೊಳಗಿಂದ ನಿಮ್ಮ ಹೆಸರನ್ನು ಅಳಿಸಿಹಾಕುವೆನು; ನಿಮ್ಮನ್ನು ನಾಶಮಾಡುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಇತರ ಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಾಂಗಗಳೊಳಗಿಂದ ನಿಮ್ಮನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನ ಹೆಸರನ್ನು ಅಳಿಸಿಬಿಡುವೆನು. ನಾನು ನಿಮ್ಮನ್ನು ನಾಶಮಾಡುವೆನು. ಆಗ ನಾನೇ ಯೆಹೋವ ದೇವರೆಂದು ತಿಳಿಯುವಿರಿ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:7
14 ತಿಳಿವುಗಳ ಹೋಲಿಕೆ  

“ಜುದೇಯ ನಾಡನ್ನೂ ಜೆರುಸಲೇಮಿನ ನಿವಾಸಿಗಳೆಲ್ಲರನ್ನೂ ಕೈಯೆತ್ತಿ ಸದೆಬಡಿಯುವೆನು; ಬಾಳನ ಪೂಜೆಪುರಸ್ಕಾರಗಳ ಗುರುತೂ ಅಲ್ಲಿ ಇಲ್ಲದಂತೆ ಮಾಡುವೆನು. ಅವನ ಪೂಜಾರಿಗಳನ್ನು ನಿರ್ನಾಮಗೊಳಿಸುವೆನು;


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ಎದೋಮೇ ಇಗೋ, ನಿನಗೆ ನಾ ವಿರೋಧಿಯಾಗಿರುವೆ ನಿನ್ನ ನಾಡಿನ ಮೇಲೆ ಕೈಯೆತ್ತಿ ನಾಶಪಡಿಸುವೆ.


“ಒಬ್ಬ ಪ್ರವಾದಿ ಮರುಳುಗೊಂಡು ದೈವೋಕ್ತಿಯೊಂದನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಸರ್ವೇಶ್ವರನಾದ ನಾನೇ. ನಾನು ಅವನ ಮೇಲೆ ಕೈಯೆತ್ತಿ ಇಸ್ರಯೇಲರಾದ ನನ್ನ ಜನರಿಂದ ತೆಗೆದುಹಾಕಿ ಅವನನ್ನು ನಿರ್ನಾಮ ಮಾಡುವೆನು.


ನಾನು ಅವರ ವಿರುದ್ಧ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಬದವರೆಗೂ ಹಾಳುಪಾಳು ಮಾಡುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಆದುದರಿಂದ ಇಗೋ ಕೇಳಿ: ನನ್ನ ಅಪ್ಪಣೆಯ ಮೇರೆಗೆ ಶತ್ರುಗಳು ರಬ್ಬಾ ಎಂಬ ಅಮ್ಮೋನ್ಯರ ನಗರದ ಮೇಲೆ ಬಿದ್ದು ಯುದ್ಧ ಘೋಷಣೆ ಮಾಡುವ ದಿನಗಳು ಬರುವುವು. ಆ ನಗರ ಹಾಳುದಿಬ್ಬವಾಗುವುದು. ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಯೇಲ್ ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಸರ್ವೇಶ್ವರನಾದ ನನ್ನ ನುಡಿ.


ಅವರು ಕೊಳ್ಳೆಗೆ ಒಳಗಾಗುವರು; ಜನ ಮಿಡತೆಗಳಂತೆ ಆ ಕೊಳ್ಳೆಗೆ ಹಾರಿಬೀಳುವರು.


“ನನ್ನ ದ್ರೋಹಗಳನ್ನು ನನಗೆ ಬಿಗಿದಿದ್ದಾನೆ ನೊಗದ ಕಣ್ಣುಗಳಂತೆ. ಅವು ಹುರಿಗೊಂಡು, ಸುತ್ತಿಕೊಂಡು ಕುತ್ತಿಗೆಗೆ, ನನ್ನ ಶಕ್ತಿಯನ್ನು ಹೀರುತ್ತಿವೆ. ಸಿಕ್ಕಿಸಿದನಲ್ಲಾ ಸ್ವಾಮಿ, ನನ್ನಿಂದ ಎದುರಿಸಲಾಗದಂಥವರ ಕೈಗೆ !


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.


ನೀನು ಅಗ್ನಿಗೆ ಆಹುತಿಯಾಗುವೆ; ನೀನು ರಕ್ತ ನಾಡಿನಲ್ಲೆಲ್ಲಾ ಇಂಗಿರುವುದು; ನೀನು ಇನ್ನು ನೆನಪಿಗೆ ಬರುವುದಿಲ್ಲ; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.”


ಅದು ಸಮುದ್ರದ ನಡುವೆ ಬಲೆಗಳಿಗೆ ಹಾಸುಬಂಡೆಯಾಗುವುದು; ನಾನೇ ಇದನ್ನು ನುಡಿದಿದ್ದೇನೆ, ಎಂದು ಸರ್ವೇಶ್ವರನಾದ ದೇವರು ಎನ್ನುತ್ತಾರೆ; ಅದು ಜನಾಂಗಗಳಿಗೆ ಸೂರೆಯಾಗುವುದು;


ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು