ಯೆಹೆಜ್ಕೇಲನು 26:12 - ಕನ್ನಡ ಸತ್ಯವೇದವು C.L. Bible (BSI)12 ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ವಿನೋದಭವನಗಳನ್ನು ಕೆಡವಿ, ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು ನಿನ್ನ ಸರಕುಗಳನ್ನು ಕೊಳ್ಳೆಹೊಡೆದು ನಿನ್ನ ಗೋಡೆಗಳನ್ನು ಉರುಳಿಸಿ ನಿನ್ನ ವಿನೋದಭವನಗಳನ್ನು ಕಿತ್ತುಹಾಕಿ ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೆಬೂಕದ್ನೆಚ್ಚರನ ಸೈನ್ಯವು ನಿನ್ನ ಐಶ್ವರ್ಯವನ್ನು ದೋಚಿಕೊಳ್ಳುವದು. ನೀನು ಮಾರಬೇಕೆಂದಿದ್ದ ವಸ್ತುಗಳನ್ನು ಅವರು ದೋಚಿಕೊಳ್ಳುವರು. ನಿನ್ನ ಗೋಡೆಗಳನ್ನು ಒಡೆದು ಅಂದವಾದ ನಿನ್ನ ಮನೆಗಳನ್ನು ಹಾಳು ಮಾಡುವರು. ನಿನ್ನ ಮರದಿಂದ ಮತ್ತು ಕಲ್ಲುಗಳಿಂದ ಮಾಡಿದ ಮನೆಗಳನ್ನು ಕಸದಂತೆ ಸಮುದ್ರಕ್ಕೆ ಎಸೆಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಒಡೆದು, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ ನಿನ್ನ ಮರಗಳನ್ನೂ ಧೂಳನ್ನೂ ನೀರಿನಲ್ಲಿ ಹಾಕುವರು. ಅಧ್ಯಾಯವನ್ನು ನೋಡಿ |