ಯೆಹೆಜ್ಕೇಲನು 26:15 - ಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರನಾದ ದೇವರು ಟೈರ್ ನಗರಕ್ಕೆ ಹೀಗೆ ಹೇಳುತ್ತಾರೆ - “ನಿನ್ನ ಮಧ್ಯದಲ್ಲಿ ಕಗ್ಗೊಲೆಯುಂಟಾಗಿ, ಗಾಯಗೊಂಡವರು ನರಳುತ್ತಿರಲು, ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, “ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ - ನಿನ್ನ ಮಧ್ಯದಲ್ಲಿ ಕೊಲೆಯುಂಟಾಗಿ ಗಾಯಪಟ್ಟವರು ನರಳುತ್ತಿರಲು ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಒಡೆಯನಾದ ಯೆಹೋವನು ತೂರಿಗೆ ಹೇಳುವುದೇನೆಂದರೆ, “ಭೂಮದ್ಯ ಸಮುದ್ರ ಕರಾವಳಿಯಲ್ಲಿರುವ ದೇಶದವರು ನೀನು ಕೆಳಗೆ ಬೀಳುವ ಶಬ್ದ ಕೇಳಿ ನಡುಗುವರು. ಅದು ನಿನ್ನ ಜನರು ಗಾಯಗೊಂಡು ಸಾಯುವಾಗ ಆಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಸಾರ್ವಭೌಮ ಯೆಹೋವ ದೇವರು ಟೈರಿಗೆ ಹೀಗೆ ಹೇಳುತ್ತಾರೆ: ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ಸಮುದ್ರತೀರದ ಪ್ರದೇಶಗಳು ನಡುಗುವುದಿಲ್ಲವೇ? ಅಧ್ಯಾಯವನ್ನು ನೋಡಿ |