Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:17 - ಕನ್ನಡ ಸತ್ಯವೇದವು C.L. Bible (BSI)

17 “ಇವರು ನಿನ್ನ ಕುರಿತು, ‘ನಾವಿಕರ ನಿವಾಸವೇ, ಹೆಸರುವಾಸಿಯ ನಗರಿಯೇ, ಸಮುದ್ರದಿಂದ ಬಲಗೊಂಡ ಪಟ್ಟಣವೇ, ನೀನು ತೀರಾ ಹಾಳಾಗಿರುವೆ. ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ತೀರಾ ಹಾಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇವರು ನಿನ್ನ ವಿಷಯದಲ್ಲಿ - ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವರು ನಿನ್ನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು: “‘ತೂರ್, ನೀನು ಹೆಸರುವಾಸಿಯಾದ ನಗರವಾಗಿದ್ದೆ. ನಿನ್ನಲ್ಲಿ ವಾಸಮಾಡಲು ಜನರು ಸಮುದ್ರದಾಚೆಯಿಂದ ಬಂದರು. ನೀನು ಪ್ರಸಿದ್ಧಳಾಗಿದ್ದೆ, ಆದರೆ ನೀನೀಗ ಹೋಗಿಬಿಟ್ಟೆ. ದ್ವೀಪವಾಗಿರುವ ನೀನು ಮತ್ತು ನಿನ್ನಲ್ಲಿ ವಾಸವಾಗಿದ್ದ ಜನರು ಸಮುದ್ರದಿಂದ ದೂರದಲ್ಲಿರುವುದರಿಂದ ಬಲಿಷ್ಠರಾಗಿದ್ದೀರಿ. ಭೂಮಿಯ ಮೇಲೆ ವಾಸವಾಗಿದ್ದ ಎಲ್ಲಾ ಜನರನ್ನು ನೀವು ಭಯಗೊಳಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವುದೇನೆಂದರೆ: “ ‘ಸಮುದ್ರಗಳ ಬಳಿಯಲ್ಲಿ ವಾಸಿಸಿದವಳೇ, ಪ್ರಸಿದ್ಧ ಪಟ್ಟಣವೇ, ಸಮುದ್ರದ ಮೇಲೆ ಬಲಗೊಂಡ ನಗರವೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:17
27 ತಿಳಿವುಗಳ ಹೋಲಿಕೆ  

ಮುಂಜಾನೆಯ ನಕ್ಷತ್ರವೆ, ಉದಯ ಕುಮಾರನೆ, ಆಗಸದಿಂದ ಹೇಗೆ ಬಿದ್ದೆ? ರಾಷ್ಟ್ರಗಳನ್ನು ಗೆದ್ದ ನೀನು, ನೆಲಕ್ಕೆ ಅದು ಹೇಗೆ ಉರುಳಿದೆ?


“ಇಸ್ರಯೇಲ್ ಅರಸರನ್ನು ಕುರಿತ ಈ ಶೋಕ ಗೀತೆಯನ್ನು ಹಾಡು:


ಪ್ರಲಾಪಿಸುವವರು ಈ ಶೋಕಗೀತವನ್ನು ಹಾಡಲಿ; ಜನಾಂಗಗಳ ಯುವತಿಯರು ಹೀಗೆ ಗೋಳಿಡಲಿ; ಈಜಿಪ್ಟಿಗಾಗಿಯೂ ಅಲ್ಲಿನ ಬಹುಪ್ರಜೆಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ; ಇದು ಸರ್ವೇಶ್ವರನಾದ ದೇವರ ನುಡಿ.”


“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನನ್ನು ಕುರಿತು ಶೋಕಗೀತೆಯೊಂದನ್ನು ನುಡಿ : “ನೀನು ಮೃಗರಾಜನೆನಿಸಿಕೊಂಡಿರುವೆ ಜನಾಂಗಗಳಲ್ಲಿ, ಇಗೋ ದೊಡ್ಡ ಮೊಸಳೆಯಾಗಿಬಿಟ್ಟಿರುವೆ ಮಹಾನದಿಯಲ್ಲಿ. ನೀನಿದ್ದ ನದಿಗಳ ಭೇದಿಸಿಕೊಂಡು ಬಂದು, ಕಾಲಿಂದ ನೀ ಕಲಕಿರುವೆ ಅದರ ನೀರನ್ನು, ತುಳಿದು ಬದಿಮಾಡಿರುವೆ ಜನಾಂಗವೆಂಬ ಹೊಳೆಯನ್ನು.”


ಅದರ ಕಾಂಡದಿಂದ ಹೊರಟ ಬೆಂಕಿಯು ದಹಿಸಿಬಿಟ್ಟಿದೆ ಅದರ ಫಲಗಳನು ಎಂದೇ ಇನ್ನು ಉಳಿದಿಲ್ಲ ಅದರೊಳು ರಾಜದಂಡಕೆ ಯೋಗ್ಯವಾದ ಗಟ್ಟಿಕೊಂಬೆಯು.” ಇದೊಂದು ಶೋಕ ಗೀತೆ; ರೂಢಿಯಲ್ಲಿ ಇರುವ ಜಾನಪದ ಗೀತೆ.


ಸಿದೋನ್ ನಗರವೇ, ನಿನಗೆ ನಾಚಿಕೆಗೇಡು ! ಸಮುದ್ರವೂ ಸಮುದ್ರ ತಳವೂ ನಿನ್ನನ್ನು ನಿರಾಕರಿಸುತ್ತಾ; “ನಾನು ಗರ್ಭಧರಿಸಲಿಲ್ಲ, ಪ್ರಸವಿಸಲಿಲ್ಲ, ಪುತ್ರಪುತ್ರಿಯರನ್ನು ಸಾಕಿ ಸಲಹಲಿಲ್ಲ,” ಎಂದು ನುಡಿದಿದೆ.


“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!


ಆ ದಿನದಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ. ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋದಿಸುವರು.


ನಿನ್ನಲ್ಲಿಗೆ ಕಳ್ಳರಾಗಲಿ, ರಾತ್ರಿಯಲ್ಲಿ ಪಂಜುಗಳ್ಳರಾಗಲಿ ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರಲ್ಲವೆ?


ಪಶುಪ್ರಾಣಿಗಳು ನರಳುತ್ತಿವೆ; ದನಕರುಗಳು ಮೇವಿಲ್ಲದೆ ಕಂಗಾಲಾಗಿವೆ; ಕುರಿಮಂದೆಗಳು ಕೂಡ ಕಂಗೆಟ್ಟಿವೆ.


ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ !


ನಾನು : “ಮಹಿಳೆಯರೇ, ಸರ್ವೇಶ್ವರ ಸ್ವಾಮಿಯ ನುಡಿಯನ್ನು ಕೇಳಿರಿ ಅವರ ಬಾಯಿಂದ ಹೊರಟ ಮಾತಿಗೆ ಕಿವಿ ತೆಗೆಯಿರಿ ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ ಪ್ರತಿಯೊಬ್ಬಳೂ ತನ್ನ ನೆರೆಯವಳಿಗೆ ಶೋಕಗೀತೆಯನ್ನು ಹೇಳಿಕೊಡಲಿ.


“ಎಲೈ ಜೆರುಸಲೇಮೇ ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,”


ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”


ಇದರ ವ್ಯಾಪಾರಿಗಳು ವಿಶ್ವವಿಖ್ಯಾತರು. ಇಂಥ ಟೈರ್ ಪಟ್ಟಣಕ್ಕೆ ನಾಶವೊದಗಿದುದನ್ನು ಯೋಚಿಸಿದವರಾರು?


ಮಣ್ಣುಪಾಲಾಗಿದೆ, ಓ ಇಸ್ರಯೇಲರೇ, ನಿಮ್ಮ ವೈಭವ ಆ ಗುಡ್ಡಗಳ ಮೇಲೆ ನೀವು ಮಡಿದದ್ದು ಹೇಗೆ, ಓ ಯುದ್ಧವೀರರೇ?


ಅಲ್ಲಿಂದ ಅದು ತಿರುಗಿಕೊಂಡು ರಾಮಾ, ಟೈರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರತೀರದಲ್ಲಿ ಕೊನೆಗೊಳ್ಳುತ್ತದೆ.


ಅದು ಹೇಗೆ ನುಚ್ಚುನೂರಾಗಿದೆ ! ಆ ಜನರು ಕಿರಿಚಿಕೊಳ್ಳುತ್ತಿದ್ದಾರೆ ! ಇಗೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ. ನೆರೆಹೊರೆಯವರು ಅಣಕಿಸುವುದಕ್ಕೂ ಬೆಚ್ಚಿಬೀಳುವುದಕ್ಕೂ ಆಸ್ಪದ ಆಗಿದೆ.” ಸರ್ವೇಶ್ವರ ಹೀಗೆನ್ನುತ್ತಾರೆ :


ಲೋಕವನ್ನೆಲ್ಲ ಬಡಿದ ಕೊಡಲಿಯಂಥ ಬಾಬಿಲೋನ್ ಈಗ ಮುರಿದು ಚೂರುಚೂರಾಗಿದೆ! ಆ ರಾಜ್ಯವು ರಾಷ್ಟ್ರಗಳ ನಡುವೆ ಹಾಳಾಗಿ ಬಿದ್ದಿದೆ.


ಅವರ ಗೋರಿಗಳು ಅಧೋಲೋಕದ ಅಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಅವರು ಅಸ್ಸೀರಿಯದ ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಭೀಕರವಾಗಿದ್ದ ಇವರೆಲ್ಲರೂ ಸಂಹೃತರು, ಖಡ್ಗಹತರು.


ಪೂರ್ವದಲ್ಲಿ ಯಾವ ಸುನ್ನತಿಹೀನ ಶೂರರು, ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು, ಹತರಾಗಿ ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಅಸ್ಥಿಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದರೋ ಅವರ ನಡುವೆ ಮೆಷೆಕಿನವರೂ, ತೂಬಲಿನವರೂ ನೆಲಸದೆಹೋಗುವರೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು