Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:4 - ಕನ್ನಡ ಸತ್ಯವೇದವು C.L. Bible (BSI)

4 ಅವು ಟೈರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೊತ್ತಲಗಳನ್ನು ಕೆಡವಿಹಾಕುವುವು; ನಾನು ಅದರ ಮಣ್ಣನ್ನು ಕೆರೆದು, ಅದನ್ನು ಬೋಳುಬಂಡೆಯಾಗಿ ಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೋಟೆ ಕೊತ್ತಲುಗಳನ್ನು ಕೆಡವಿ ಹಾಕುವವು; ನಾನು ಅದರ ಧೂಳನ್ನು ಒರೆಸಿ, ಅದನ್ನು ಬೋಳು ಬಂಡೆಯಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ ಅದರ ಕೊತ್ತಲಗಳನ್ನು ಕೆಡವಿಹಾಕುವವು; ನಾನು ಅದರ ಮಣ್ಣನ್ನು ಕೆರೆದು ಅದನ್ನು ಗುಡಿಸಿ ಗಂಡಾಂತರಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ಹೇಳಿದ್ದೇನೆಂದರೆ, “ಆ ಶತ್ರು ಸೈನಿಕರು ತೂರಿನ ಗೋಡೆಗಳನ್ನು ಕೆಡವಿ, ಅದರ ಬುರುಜುಗಳನ್ನು ಎಳೆದು ಹಾಕುವರು. ನಾನು ಅದರ ಫಲವತ್ತಾದ ಮಣ್ಣನ್ನು ಕೆರೆದುಹಾಕಿ, ಅದನ್ನು ಬರಿದಾದ ಬಂಡೆಯನ್ನಾಗಿ ಬಿಟ್ಟುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಟೈರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ಧೂಳನ್ನು ಒರಸಿ ಅದನ್ನು ಬೋಳು ಬಂಡೆಯಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:4
8 ತಿಳಿವುಗಳ ಹೋಲಿಕೆ  

ಆದಕಾರಣ ನಾನು ಟೈರಿನ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.”


ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.


ತನ್ನ ಭಿತ್ತಿಭೇದಕಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೊತ್ತಲಗಳನ್ನು ಒಡೆದುಬಿಡುವನು.


ಟೈರ್ ಪಟ್ಟಣವು ತನ್ನ ಸುತ್ತಲೂ ಗೋಡೆಯನ್ನು ಕಟ್ಟಿಕೊಂಡಿದೆ. ಬೆಳ್ಳಿಯನ್ನು ಮಣ್ಣುಮಸಿಯಂತೆ, ಬಂಗಾರವನ್ನು ಕಡ್ಡಿಕಸದಂತೆ ರಾಶಿಮಾಡಿಟ್ಟುಕೊಂಡಿದೆ.


ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ವಿನೋದಭವನಗಳನ್ನು ಕೆಡವಿ, ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು.


ಆಕ್ರಮಣಕಾರರಿಗೆ ಕರೆ; ಸಿಯೋನೆಂಬ ದ್ರಾಕ್ಷಾತೋಟದ ಸಾಲುಗಿಡಗಳನ್ನು ಹಾಳುಮಾಡಿ. ಆದರೆ ಅದನ್ನು ನಿರ್ಮೂಲಮಾಡಬೇಡಿ. ಅದರ ರೆಂಬೆಗಳನ್ನು ಕಿತ್ತುಹಾಕಿ. ಅವು ಸರ್ವೇಶ್ವರನಾದ ನನಗೆ ಸೇರಿದವುಗಳಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು