Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:15 - ಕನ್ನಡ ಸತ್ಯವೇದವು C.L. Bible (BSI)

15 ದೆದಾನಿನವರು ನಿನ್ನ ವರ್ತಕರಾಗಿದ್ದರು; ಬಹುದ್ವೀಪಗಳ ಉತ್ಪತ್ತಿ ನಿನ್ನ ಕೈಗೆ ಸೇರಿತ್ತು. ಗಜದಂತಗಳನ್ನೂ, ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತ ಕೊಂಬು ಮತ್ತು, ಕಪ್ಪುಮರಗಳನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೇದಾನಿನವರು ನಿನ್ನ ವರ್ತಕರು; ಬಹು ದ್ವೀಪಗಳ ಉತ್ಪತ್ತಿಯು ನಿನ್ನ ಕೈಗೆ ಸೇರಿತು; ಗಜದಂತಗಳನ್ನೂ ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರೋಧೆ ದ್ವೀಪದ ಜನರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ನೀನು ಅನೇಕ ಕಡೆಗಳಲ್ಲಿ ವ್ಯಾಪಾರ ಮಾಡಿದಿ. ಜನರು ದಂತವನ್ನೂ ಬೀಟೆ ಮರಗಳನ್ನೂ ತಂದು ನಿನ್ನೊಂದಿಗೆ ವ್ಯಾಪಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ ‘ದೆದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದ ಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:15
13 ತಿಳಿವುಗಳ ಹೋಲಿಕೆ  

ಇವರು ಚಿನ್ನ, ಬೆಳ್ಳಿ, ಮುತ್ತು ರತ್ನಾಭರಣಗಳನ್ನೂ ನಯವಾದ ನಾರುಮಡಿ, ಕೆನ್ನೀಲಿಯ ವಸ್ತ್ರ, ರೇಷ್ಮೆ ಬಟ್ಟೆ ಮತ್ತು ಕಡುಗೆಂಪು ಉಡುಪುಗಳನ್ನೂ ಎಲ್ಲಾ ಬಗೆಯ ಗಂಧಕ ಚಕ್ಕೆಗಳನ್ನೂ ಎಲ್ಲಾ ವಿಧದ ದಂತದ ಸಾಮಾನುಗಳನ್ನೂ ಬಹು ಬೆಲೆಬಾಳುವ ಮರದ, ಕಂಚಿನ, ಕಬ್ಬಿಣದ, ಚಂದ್ರಕಾಂತ ಶಿಲೆಯ ಸಾಮಾನುಗಳನ್ನೂ ಅವಳಿಗೆ ಮಾರುತ್ತಿದ್ದರು.


ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷಿಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಕೂಷನ ಮಕ್ಕಳು - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬ ಜನಾಂಗಗಳು. ರಗ್ಮ ಸಂತಾನದವರು -‍ ಶೆಬಾ, ದೆದಾನ್ ಎಂಬ ಜನಾಂಗಗಳು.


ದೆದಾನಿನವರು ಹಲ್ಲಣಕ್ಕೆ ಸರಿಯಾದ ಒಳ್ಳೆಯ ಜಮಖಾನೆಗಳನ್ನು ನಿನಗೆ ತರುತ್ತಿದ್ದ ವ್ಯಾಪಾರಿಗಳಾಗಿದ್ದರು.


ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾ, ಬೂಜ್ ನಾಡಿನವರು, ಮುಂದಲೆಗೂದಲು ಕತ್ತರಿಸಿಕೊಳ್ಳುವವರೆಲ್ಲರು;


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ದೇದಾನಿನವರೇ, ಹಿಂದಿರುಗಿ ಓಡಿಹೋಗಿರಿ. ಒಳ ಪ್ರಾಂತ್ಯವನ್ನು ಸೇರಿ ವಾಸಿಸಿರಿ. ಏಕೆಂದರೆ ನಾನು ಎದೋಮನ್ನು ದಂಡಿಸುವೆನು. ಏಸಾವನಿಗೆ ವಿಧಿಸಿದ್ದ ಆಪತ್ತನ್ನು ಅದರ ಮೇಲೆ ಬರಮಾಡುವೆನು.


ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಇವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನ್‍ನಿಗೆ ಶೆಬಾ ಮತ್ತು ದೆದಾನ್ ಎಂಬಿಬ್ಬರು ಮಕ್ಕಳು ಹುಟ್ಟಿದರು.


ಸೆಬ, ಹವೀಲ, ಸಬ್ತ, ರಮ್ಮಸಬ್ತೆಕಾಗಳ ಜನರು ಕೂಷನ ಸಂತತಿಯವರು. ಶೆಬ ಮತ್ತು ದೆದಾನಿನವರು ರಮ್ಮ ಸಂತಾನದವರು. (


ಯೊಕ್ಷಾನನು ಶೆಬಾ, ದೆದಾನ್ ಎಂಬವರನ್ನು ಪಡೆದನು. ಅಶ್ಯೂರ್ಯರು, ಲೆಟೂಶ್ಯರೂ ಲೆಯುಮ್ಯರು ದೆದಾನನಿಂದ ಹುಟ್ಟಿದರು.


ಅರೇಬಿಯ ವಿಷಯವಾದ ದೈವೋಕ್ತಿ : ದೇದಾದಿನ ಜನರೇ, ಒಂಟೆ ಸವಾರರೇ, ಅರೇಬಿಯದ ಮರುಭೂಮಿಯಲ್ಲಿ ಬೀಡು ಬಿಡುವವರೇ,


ಶೆಬದವರು, ದೆದಾನಿನವರು, ತಾರ್ಷೀಷಿನ ವರ್ತಕರು ಹಾಗು ಅದರ ಸಿಂಹಪ್ರಾಯರೆಲ್ಲರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ದನ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯೋ?’ ಎಂದು ಕೇಳುವರು.


ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು