Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:22 - ಕನ್ನಡ ಸತ್ಯವೇದವು C.L. Bible (BSI)

22 ಶೆಬದವರೂ ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ ಕನಕ, ಮುಖ್ಯ ಮುಖ್ಯ ಸುಗಂಧದ್ರವ್ಯ, ಸಮಸ್ತ ಅಮೂಲ್ಯರತ್ನ, ಈ ವಸ್ತುಗಳನ್ನು ನಿನಗಾಗಿ ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಶೆಬದವರೂ ಮತ್ತು ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ, ಎಲ್ಲಾ ಶ್ರೇಷ್ಠವಾದ ಸುಗಂಧದ್ರವ್ಯದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ, ಚಿನ್ನದಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಶೆಬದವರೂ ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ ಕನಕ ಮುಖ್ಯ ಮುಖ್ಯ ಸುಗಂಧದ್ರವ್ಯ ಸಮಾಸ್ತಾಮೂಲ್ಯರತ್ನ ಈ ಸರಕುಗಳನ್ನು ನಿನಗೋಸ್ಕರ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಶೆಬ ಮತ್ತು ರಗ್ಮದ ವ್ಯಾಪಾರಿಗಳು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನಗೆ ಸಂಬಾರ ಜೀನಸು, ರತ್ನಗಳು ಮತ್ತು ಚಿನ್ನವನ್ನು ಬದಲಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ ‘ಶೆಬದವರು, ರಾಮದವರು ನಿನ್ನ ಕಡೆಯ ವರ್ತಕರಾಗಿ ಎಲ್ಲಾ ಶ್ರೇಷ್ಠವಾದ ಸುಗಂಧ ದ್ರವ್ಯದಿಂದಲೂ ಎಲ್ಲಾ ಬೆಲೆಯುಳ್ಳ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:22
11 ತಿಳಿವುಗಳ ಹೋಲಿಕೆ  

ಕೂಷನ ಮಕ್ಕಳು - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬ ಜನಾಂಗಗಳು. ರಗ್ಮ ಸಂತಾನದವರು -‍ ಶೆಬಾ, ದೆದಾನ್ ಎಂಬ ಜನಾಂಗಗಳು.


ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು.


ಶೆಬದವರು, ದೆದಾನಿನವರು, ತಾರ್ಷೀಷಿನ ವರ್ತಕರು ಹಾಗು ಅದರ ಸಿಂಹಪ್ರಾಯರೆಲ್ಲರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ದನ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯೋ?’ ಎಂದು ಕೇಳುವರು.


ಅರಸ ಬಾಳಲಿ ಚಿರಕಾಲ; ದೊರಕಲಿ ಆತನಿಗೆ ಶೆಬಾದ ಬಂಗಾರ I ಜರುಗಲಿ ಪ್ರಾರ್ಥನೆ ಸದಾಕಾಲ; ಆಶೀರ್ವಾದ ಸಿಗಲಿ ಅನವರತ II


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಸೆಬ, ಹವೀಲ, ಸಬ್ತ, ರಮ್ಮಸಬ್ತೆಕಾಗಳ ಜನರು ಕೂಷನ ಸಂತತಿಯವರು. ಶೆಬ ಮತ್ತು ದೆದಾನಿನವರು ರಮ್ಮ ಸಂತಾನದವರು. (


ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ.


ನೀನಿದ್ದೆ ದೇವರ ಉದ್ಯಾನವನದ ಏದೆನಿನೊಳು ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ಬೆರುಲ್ಲ, ವೈಡೂರ್ಯ, ನೀಲ, ಕೆಂಪರಲು, ಸ್ಫಟಿಕವೆಂಬ ನವರತ್ನಗಳಿಂದ ಭೂಷಿತನಾಗಿದ್ದೆ ನೀನು. ನಿನ್ನ ಕಿವಿಯೋಲೆ ಆಭರಣಗಳು ಸುವರ್ಣಖಚಿತವಾಗಿದ್ದವು. ನಿನ್ನ ಸೃಷ್ಟಿಯ ದಿನದಂದೇ ಸಿದ್ಧವಾಗಿದ್ದವವು.


ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನವರ ಕಳಕಳವಾಯಿತು; ಅರಣ್ಯದಿಂದ ಕರೆಯಿಸಿಕೊಂಡ ಕುಡುಕರು ನಾಡಾಡಿಗರೊಂದಿಗೆ ಸೇರಿ ಅಸ್ಸೀರಿಯರಿಬ್ಬರ ಕೈಗೆ ಕಡಗವನ್ನು ತೊಡಿಸಿ, ಅವರ ತಲೆಗೆ ಸುಂದರ ಕಿರೀಟವನ್ನಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು