Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:26 - ಕನ್ನಡ ಸತ್ಯವೇದವು C.L. Bible (BSI)

26 ಹುಟ್ಟುಹಾಕುವವರು ನಿನ್ನ ಸಿಕ್ಕಿಸಿಹರು ಮಹಾತರಂಗಗಳಿಗೆ ಸಾಗರಮಧ್ಯೆ ಒಡೆದು ಚೂರಾಗಿರುವೆ ಸಿಕ್ಕಿ ಮೂಡಣಗಾಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹುಟ್ಟುಹಾಕುವವರು ನಿನ್ನನ್ನು ಮಹಾ ತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರದ ಮಧ್ಯದಲ್ಲಿ ಒಡೆದುಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹುಟ್ಟುಹಾಕುವವರು ನಿನ್ನನ್ನು ಮಹಾತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರಮಧ್ಯದಲ್ಲಿ ಒಡೆದುಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿನ್ನನ್ನು ಹುಟ್ಟುಹಾಕುವವರು ಸಮುದ್ರದ ಬಹುದೂರ ನಿನ್ನನ್ನು ನಡಿಸಿದರು. ಆದರೆ ಪೂರ್ವದಿಂದ ಬಂದ ಬಲವುಳ್ಳ ಗಾಳಿಯು ನಿನ್ನನ್ನು ಮುರಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹುಟ್ಟು ಹಾಕುವವರು ನಿನ್ನನ್ನು ಸಿಕ್ಕಿಸಿದ್ದಾರೆ. ಪೂರ್ವದಿಕ್ಕಿನ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:26
13 ತಿಳಿವುಗಳ ಹೋಲಿಕೆ  

ತಾರ್ಷಿಷ್ ನಾಡಿನ ದೊಡ್ಡ ದೊಡ್ಡ ಹಡಗುಗಳನು I ಚಂಡಮಾರುತದಿಂದ ಪುಡಿಪುಡಿ ಮಾಡಿದೆ ನೀನು II


ಆದರೆ ಸ್ವಲ್ಪದರಲ್ಲೇ ‘ಈಶಾನ್ಯ ಮಾರುತ’ ಎಂಬ ಪ್ರಚಂಡಗಾಳಿ ದ್ವೀಪದಿಂದ ಬೀಸತೊಡಗಿತು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವೆನು.


ಶತ್ರುಗಳು ಮೇಲೆ ಬಿದ್ದು ದಾಳಿಮಾಡಲು ಬಂದಾಗ ಮೂಡಣ ಬಿರುಗಾಳಿ ಮುಂದೆ ಧೂಳಿ ಮಣ್ಣಿನಂತೆ ನನ್ನ ಜನರನ್ನು ದಿಕ್ಕುಪಾಲಾಗಿ ಚದರಿಸುವೆನು. ಅವರ ಆ ವಿಪತ್ತಿನ ದಿನದಂದು ಅವರತ್ತ ಮುಖತಿರುಗಿಸದೆ ಬೆನ್ನು ಮಾಡುವೆನು.”


ಆ ದೇವದೂತನು ಮುಂದುವರೆದು ಹೀಗೆ ನುಡಿದನು : “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.


ಆದರೆ ಮಧ್ಯದಲ್ಲಿ ಹಡಗು ಮರಳು ದಿಬ್ಬಕ್ಕೆ ಢಿಕ್ಕಿಹೊಡೆದು ನೆಲ ಹತ್ತಿತ್ತು. ಹಡಗಿನ ಮುಂಭಾಗ ದಿಣ್ಣೆಗೆ ಸಿಲುಕಿ ಅಲ್ಲಾಡದೆ ನಿಂತಿತು; ಹಿಂಭಾಗ ಹುಚ್ಚು ಅಲೆಗಳ ಹೊಡೆತಕ್ಕೆ ಸಿಕ್ಕಿ ತುಂಡುತುಂಡಾಯಿತು.


ಮುಳುಗಿಹೋದರು ಅಗಾಧ ಜಲದೊಳು ಸರಕುಸಮೇತ ನಿನ್ನ ಸೇರಿದ್ದ ಜನರು; ಹಾಳಾದೆ ನೀನು ಸಮುದ್ರ ಸಾಗರದೊಳು.


ಶತ್ರು ಹಡಗುಗಳ ಹಗ್ಗಗಳು ಸಡಿಲ, ಅದರ ಕೂವೆಯ ಬುಡ ಸಡಿಲ; ಅದರ ಹಾಯಿಯನ್ನು ಮುದುರದಂತೆ ಹಿಡಿದುಕೊಳ್ಳಲು ಅಸಾಧ್ಯ. ಅವುಗಳನ್ನು ಸೂರೆಮಾಡಿ ಕೊಳ್ಳೆಹೊಡೆದು, ಸಮನಾಗಿ ಹಂಚಿಕೊಳ್ಳಲು ಎಲ್ಲರಿಗೂ ಆಸ್ಪದವುಂಟು. ಕುಂಟರು ಕೂಡ ತಮ್ಮ ಪಾಲನ್ನು ಪಡೆಯಬಲ್ಲರು.


‘ಗೋಳಾಡಿರಿ, ತಾರ್ಷೀಷಿನ ನಾವಿಕರೆಲ್ಲರು; ಹಾಳಾಗಿವೆ ನಿಮ್ಮ ಬಂದರುಗಳೆಲ್ಲವು.’


ವಿನಾಶದಿನದೊಳು ಮುಳುಗಿಹೋಗುವುವು ಸಮುದ್ರದೊಳು ನಿನ್ನ ಆಸ್ತಿ, ನಿನ್ನ ದಿನಸು, ನಿನ್ನ ಸರಕುಗಳು ನಿನ್ನ ನಾವಿಕರು, ಅಂಬಿಗರು, ಕಂಡಿ ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ಸೈನಿಕರೆಲ್ಲರು, ನಿನ್ನ ಸಿಬ್ಬಂದಿಯೆಲ್ಲವು.


ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯೆ ಹತರಾದವರ ಗತಿ ನಿನಗೆ ಸಂಭವಿಸುವುದು.


ಕಿವಿಯಾರೆ ಕೇಳಿದಂತೆಯೆ ಕಣ್ಣಾರೆ ಕಂಡೆವು I ಸರ್ವಶಕ್ತ ಪ್ರಭುವನು ದೇವನಗರದಲಿ ಕಂಡೆವು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು