Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:9 - ಕನ್ನಡ ಸತ್ಯವೇದವು C.L. Bible (BSI)

9 ನಿನ್ನ ಕಂಡಿಗಳ ಭದ್ರಪಡಿಸಿಹರು, ನಿನ್ನಲ್ಲಿ ಸೇರಿದ್ದ ಗೆಬಲಿನ ಜಾಣರು, ಹಿರಿಯರು. ನಿನಗೆ ಸರಕುಗಳ ತಂದೊಪ್ಪಿಸುತ್ತಿದ್ದರು ಸಕಲ ನಾವೆಗಳು, ಸಕಲ ನಾವಿಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನಲ್ಲಿ ಸೇರಿಕೊಂಡಿದ್ದ ಗೇಬಾಲಿನ ಹಿರಿಯರೂ ಮತ್ತು ಜಾಣರೂ ನಿನ್ನ ಬಿರುಕುಗಳನ್ನು ಮುಚ್ಚಿದ್ದಾರೆ. ಸಮುದ್ರದ ಸಕಲ ನಾವೆಗಳ ಮತ್ತು ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು, ನಿನಗೆ ಸರಕುಗಳನ್ನು ತಂದೊಪ್ಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನಲ್ಲಿ ಸೇರಿಕೊಂಡಿದ್ದ ಗೆಬಲಿನ ಹಿರಿಯರೂ ಜಾಣರೂ ನಿನ್ನ ಕಂಡಿಗಳನ್ನು ಭದ್ರಪಡಿಸುವವರು. ಸಮುದ್ರದ ಸಕಲ ನಾವೆಗಳು ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸುತ್ತಿದ್ದವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಗೆಬಲಿನ ಹಿರಿಯರೂ ಜ್ಞಾನಿಗಳೂ ನಿನ್ನ ಹಡಗುಗಳ ಬಿರುಕುಗಳನ್ನು ಸರಿಪಡಿಸುವವರಾಗಿದ್ದರು. ಸಾಗರದ ಹಡಗುಗಳೂ ಅದರ ನಾವಿಕರೂ ನಿನ್ನೊಂದಿಗೆ ವ್ಯಾಪಾರ ಮಾಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಗೆಬಾಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:9
7 ತಿಳಿವುಗಳ ಹೋಲಿಕೆ  

ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕೆ ಬೇಕಾದ ಕಲ್ಲು, ಮರಗಳನ್ನು ಸಿದ್ಧಪಡಿಸಿದವರು ಇವರೇ.


ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ಹಾದಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ;


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ಈ ಲೋಕದ ವರ್ತಕರೂ ಅವಳ ನಿಮಿತ್ತ ಅತ್ತು ಗೋಳಾಡುತ್ತಾ ತಮ್ಮ ಸರಕು ಸಾಮಗ್ರಿಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ದುಃಖಿಸುವರು.


ಓಡಾಡುತ್ತವದರೊಳು ಹಡಗುಗಳು I ನೀನುಂಟುಮಾಡಿದ ತಿಮಿಂಗಿಲಗಳು II


ಇವರೊಡನೆ ಕೂಡಿಕೊಂಡಿಹ ಅಸ್ಸೀರ್ಯರು I ಲೋಟನ ವಂಶಕ್ಕೆ ಭುಜಬಲವಾಗಿಹರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು