Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:10 - ಕನ್ನಡ ಸತ್ಯವೇದವು C.L. Bible (BSI)

10 ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ; ನಾನೇ ನುಡಿದಿದ್ದೇನೆ, ಇದು ಸರ್ವೇಶ್ವರನಾದ ದೇವರ ಸಂಕಲ್ಪ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ಏಕೆಂದರೆ ನಾನೇ ಇದನ್ನು ನುಡಿದಿದ್ದೇನೆ” ಎಂದು ಕರ್ತನಾದ ಯೆಹೋವನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ನಾನೇ ನುಡಿದಿದ್ದೇನೆ, ಇದು ಕರ್ತನಾದ ಯೆಹೋವನ ಸಂಕಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪರದೇಶಸ್ಥರು ನಿನ್ನನ್ನು ಪರದೇಶಿಯಂತೆ ನೋಡುವರು ಮತ್ತು ಕೊಲೆ ಮಾಡುವರು. ನಾನು ಆ ರೀತಿಯಾಗಿ ಮಾಡಬೇಕೆಂದು ಆಜ್ಞಾಪಿಸುವದರಿಂದ ನಿನಗೆ ಹಾಗೆ ಆಗುವದು.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀನು ವಿದೇಶಿಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ. ಏಕೆಂದರೆ ನಾನೇ ಇದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:10
19 ತಿಳಿವುಗಳ ಹೋಲಿಕೆ  

ಇಂಥಾ ವೈಭವದಿಂದ ಹಾಗೂ ಮಹಿಮೆಯಿಂದ ಕೂಡಿದ ನೀನು, ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ದೂಡಿದವನಾಗಿ ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವೆ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.”


ಈಜಿಪ್ಟೇ, ನೀನು ಸೌಂದರ್ಯದಲ್ಲಿ ಯಾರಿಗೆ ಕಡಿಮೆ? ಪಾತಾಳಕ್ಕೆ ಇಳಿದು ನೆಲಸು ಸುನ್ನತಿಹೀನರ ನಡುವೆ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ಪಾತಾಳದಲ್ಲಿನ ಬಲಿಷ್ಠಶೂರರು ಅದನ್ನೂ ಅದರ ಸಹಾಯಕರನ್ನೂ ನೋಡಿ, “ಓಹೋ, ಇವರು ಸುನ್ನತಿಹೀನರು, ಖಡ್ಗಹತರು, ಇಳಿದುಬಂದು ಒರಗಿಬಿದ್ದರು’ ಎಂದುಕೊಳ್ಳುವರು.


ನಿಮ್ಮ ಸೇವಕನಾದ ನನ್ನಿಂದ ಆ ಸಿಂಹಕ್ಕೂ ಕರಡಿಗೂ ಆದ ಗತಿಯೇ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು; ಏಕೆಂದರೆ ಜೀವಸ್ವರೂಪರಾದ ದೇವರ ಸೈನ್ಯವನ್ನು ನಿಂದಿಸುತ್ತಿದ್ದಾನೆ.


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಸ್ರಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.”


ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


‘ಆದುದರಿಂದ ನಾನು ಅತಿಭಯಂಕರ ಜನಾಂಗದವರಾದ ಮ್ಲೇಚ್ಛರನ್ನು ನಿನ್ನ ಮೇಲೆ ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿ ಹಿರಿದು, ನಿನ್ನ ಹೊಳಪನ್ನು ಹೊಲಸುಮಾಡುವರು.


ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಅದಕ್ಕೆ ನಾನು, “ಅಯ್ಯೋ ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ . ಅವರು ಕೇಳಿಸಿಕೊಳ್ಳುವುದಿಲ್ಲ . ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.


ನಾನು ಅವರಿಗೆ ವಿರುದ್ಧವಾಗಿ ವರ್ತಿಸಿ ಶತ್ರುದೇಶದಲ್ಲಿ ಸೆರೆ ಸೇರಿಸಬೇಕಾಯಿತೆಂದು ಅರಿತುಕೊಂಡು, ತಮ್ಮ ಮೊಂಡುತನವನ್ನು ಬಿಟ್ಟು, ನನ್ನ ಆಜ್ಞೆಗೆ ತಲೆಬಾಗಿ, ತಮ್ಮ ಪಾಪ ಪರಿಣಾಮದ ಶಿಕ್ಷೆಯನ್ನು ಸ್ವೀಕರಿಸಿದ್ದೇ ಆದರೆ,


ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!


ಸರ್ವೇಶ್ವರ ದಯಪಾಲಿಸಿದ ಇನ್ನೊಂದು ವಾಣಿ ನನಗೆ ಹೀಗೆಂದಿತು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು