Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:24 - ಕನ್ನಡ ಸತ್ಯವೇದವು C.L. Bible (BSI)

24 ಇಸ್ರಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆ ಇನ್ನಾಗದು; ನಾನೇ ಸರ್ವೇಶ್ವರನಾದ ದೇವರು ಎಂದು ಅವರಿಗೆ ವ್ಯಕ್ತವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನು ಮೇಲೆ ಇರುವುದಿಲ್ಲ; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನು ಆಗುವುದಿಲ್ಲ; ನಾನೇ ಕರ್ತನಾದ ಯೆಹೋವನು” ಎಂದು ಅವರಿಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನಾಗದು; ನಾನೇ ಕರ್ತನಾದ ಯೆಹೋವನು ಎಂದು ಅವರಿಗೆ ವ್ಯಕ್ತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “‘ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಅದನ್ನು ಹಗೆ ಮಾಡಿದರು. ಆ ರಾಜ್ಯಗಳಿಗೆ ಬಹು ದೊಡ್ಡ ಕಂಟಕವು ಬಂದೊದಗುವದು. ಆಗ ಹರಿತವಾದ ಮುಳ್ಳಾಗಲಿ ಮುಳ್ಳಿನ ಪೊದೆಗಳಾಗಲಿ ಇಸ್ರೇಲಿನ ಜನರನ್ನು ಬಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ ‘ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು, ಹೀನೈಸುವ ನೆರೆಹೊರೆಯವರೆಂಬ ಮುಳ್ಳಿನ ಬಾಧೆ ಇನ್ನಾಗದು. ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:24
14 ತಿಳಿವುಗಳ ಹೋಲಿಕೆ  

ಮಿಶ್ರವಾದರೆ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಮಧ್ಯೆಯಿಂದ ಹೊರಡಿಸುವುದೇ ಇಲ್ಲವೆಂಬುದು ನಿಮಗೆ ತಿಳಿದಿರಲಿ. ಆ ಜನರೇ ನಿಮಗೆ ಉರುಳೂ ಬೋನೂ ಆಗುವರು; ಪಕ್ಕೆಗೆ ಬಡಿಯುವ ಕೊರಡಾಗಿಯೂ ಇರಿಯುವ ಶೂಲವಾಗಿಯೂ ಕಣ್ಣಿಗೆ ಚುಚ್ಚುವ ಮುಳ್ಳಾಗಿಯೂ ಮಾರ್ಪಡುವರು. ಕಡೆಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ಈ ಚೆಲುವ ನಾಡಲ್ಲಿ ನೀವೇ ಇಲ್ಲದಂತಾಗುವಿರಿ.


ನೀವು ಆ ನಾಡಿನ ನಿವಾಸಿಗಳನ್ನು ಹೊರಡಿಸದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆ ಆಗುವರು; ಪಕ್ಕೆ ತಿವಿಯುವ ಶೂಲಗಳಂತೆ ಆಗುವರು; ನೀವು ವಾಸಿಸುವ ನಾಡಿನಲ್ಲಿ ನಿಮಗೆ ಕಂಠಕಪ್ರಾಯರಾಗುವರು.


ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿ ವಂಶದವರು; ಅವರ ಬಿರುನುಡಿಗೆ ದಿಗಿಲು ಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.


ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”


ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”


ಅವರಲ್ಲಿ ಅತ್ಯುತ್ತಮನಾದವನೂ ಮುಳ್ಳಿನ ಪೊದೆಗೆ ಸಮಾನ. ಸತ್ಯವಂತನೂ ಮುಳ್ಳುಬೇಲಿಗಿಂತ ಕಡೆ. ಜನರ ದಂಡನೆಯ ದಿನ ಸಮೀಪಿಸಿದೆ. ಅವರ ಕಾವಲುಗಾರರಾದ ಪ್ರವಾದಿಗಳು ಮುಂತಿಳಿಸಿದ ಕಾಲ ಬಂದಿದೆ. ಜನರೆಲ್ಲರು ದಿಗ್ಭ್ರಾಂತರಾಗುವರು.


ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ, ಆಮೇಲೆ ಒಟ್ಟುಗೂಡಿಸಿ, ಸ್ವದೇಶಕ್ಕೆ ತಂದದ್ದರಿಂದ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು;


ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”


ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು; ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ತಿಳಿದುಬರುವುದು.


ಸರ್ವೇಶ್ವರ ಸ್ವಜನರಾದ ಇಸ್ರಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ : “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. (ಅವರ ಮಧ್ಯೆಯಿಂದ ಕಿತ್ತುಬಿಡುವೆನು ಯೆಹೂದ ವಂಶವನ್ನು).


ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ. ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ.


ನೀವು ಹೀಗೆ ಮಾಡುವುದಾದರೆ ನಾನು ಈ ನಾಡಿನ ನಿವಾಸಿಗಳನ್ನು ನಿಮ್ಮಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮನ್ನು ಉಪದ್ರವಪಡಿಸುವರು. ಅವರ ದೇವತೆಗಳು ನಿಮ್ಮನ್ನು ತಮ್ಮ ಉರುಳಿನಲ್ಲಿ ಸಿಕ್ಕಿಸಿಕೊಳ್ಳುವುವು ಎಂದು ನಿಮಗೆ ಮೊದಲೇ ಹೇಳಿದ್ದೇನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು