Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:26 - ಕನ್ನಡ ಸತ್ಯವೇದವು C.L. Bible (BSI)

26 ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಲ್ಲಿ ನಿರ್ಭಯವಾಗಿರುವರು, ಮನೆಗಳನ್ನು ಕಟ್ಟಿಕೊಂಡು ತೋಟಗಳನ್ನು ಮಾಡಿಕೊಂಡು ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರಿಗೆ ನಾನು ದಂಡನೆಮಾಡಿದ ಮೇಲೆ ನಾನೇ ತಮ್ಮ ದೇವರಾದ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ದೇಶದಲ್ಲಿ ಅವರು ಸುರಕ್ಷಿತವಾಗಿ ವಾಸಿಸುವರು; ಮನೆಗಳನ್ನು ಕಟ್ಟಿ ದ್ರಾಕ್ಷಿತೋಟಗಳನ್ನು ಮಾಡುವರು. ಅವರನ್ನು ದ್ವೇಷಿಸಿದ ರಾಜ್ಯಗಳನ್ನು ದಂಡಿಸುವೆನು. ಆಗ ಇಸ್ರೇಲ್ ಜನರು ಸುರಕ್ಷಿತವಾಗಿ ಜೀವಿಸುವರು; ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:26
41 ತಿಳಿವುಗಳ ಹೋಲಿಕೆ  

ಇಸ್ರಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆ ಇನ್ನಾಗದು; ನಾನೇ ಸರ್ವೇಶ್ವರನಾದ ದೇವರು ಎಂದು ಅವರಿಗೆ ವ್ಯಕ್ತವಾಗುವುದು.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು ; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು.


ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ.


ಈ ನಾಡಿನಲ್ಲಿ ಜನರು ಮನೆ-ಹೊಲ-ತೋಟಗಳನ್ನು ಮತ್ತೆ ಕೊಳ್ಳುವರು ಹಾಗೂ ಕೊಡುವರು. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ,” ಎಂದು ಸ್ಪಷ್ಟವಾಗಿ ಹೇಳಿದೆ.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಇದೆ ದೃಢಭರವಸೆ; ಆತನ ಮಕ್ಕಳಿಗೆ ಆಶ್ರಯ ಇದ್ದೇ ಇರುತ್ತದೆ.


ನೆಮ್ಮದಿಯಿಂದ ಬಾಳುವ ರಾಷ್ಟ್ರಗಳ ಮೇಲೆ ಬಹಳ ಸಿಟ್ಟುಗೊಂಡಿದ್ದೇನೆ. ಏಕೆಂದರೆ, ನಾನು ಜೆರುಸಲೇಮಿನ ವಿರುದ್ಧ ಕಿಂಚಿತ್ತೇ ಕೋಪಗೊಂಡಿದ್ದಾಗ ಅವರು ಕೇಡಿಗೆ ಕೇಡು ಕೂಡಿಸಿಬಿಟ್ಟರು.


ನೀನು ಅನೇಕ ಜನಾಂಗಗಳನ್ನು ಕೊಳ್ಳೆಹೊಡೆದಿರುವೆ. ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಈ ಕಾರಣ, ಜನಾಂಗಗಳಲ್ಲಿ ಅಳಿದುಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು.


ಆ ದಿನಗಳಲ್ಲಿ ನನ್ನ ಜನರಿಗೆ ಹಾನಿಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು.


ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಉರಿಸುವರು. ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಸರ್ವೇಶ್ವರನಾದ ದೇವರ ನುಡಿ.


ಬೈಗಿನಲ್ಲಿ ಇಗೋ, ಎಲ್ಲೆಲ್ಲೂ ಭಯ, ಬೆಳಗಾದಾಗ ಅವೆಲ್ಲ ಮಾಯ; ಇದೇ ನಮ್ಮನ್ನು ಸೂರೆಮಾಡುವವರ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು !.


ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಸಮಸ್ತ ಇಸ್ರಯೇಲರು ಹಾಗು ಯೆಹೂದ್ಯರು ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದಗಿಡ, ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.


ಆದರೆ ನೀವು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸೊತ್ತಾಗಿ ಕೊಡುವ ಆ ನಾಡಿನಲ್ಲಿ ಮನೆಮಾಡಿಕೊಂಡಿರುವಾಗ ನಿಮ್ಮ ಸುತ್ತಲು ಶತ್ರುಗಳು ಯಾರೂ ಇಲ್ಲದಂತೆ ಸರ್ವೇಶ್ವರ ಮಾಡುವರು;


ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ, ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ, ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು,’ ಎಂದುಕೊಂಡು ಸೂರೆಗೈಯಲು ಆಶಿಸುವೆ;


ನೀವು ನನ್ನ ಕುರಿಗಳು, ನನ್ನ ಕಾವಲಿನ ಕುರಿಗಳು, ನರಕುರಿಗಳಾದ ನಿಮಗೆ ನಾನು ದೇವರು,” ಎಂದು ಸರ್ವೇಶ್ವರನಾದ ದೇವರು ಹೇಳುತ್ತಾರೆ.


ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


ಆದರೂ ನಿನ್ನನ್ನು ಕಬಳಿಸುವವರನ್ನು ಕಬಳಿಸಲಾಗುವುದು ನಿನ್ನ ಶತ್ರುಗಳೆಲ್ಲ ತಪ್ಪದೆ ಸೆರೆಹೋಗುವರು ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು ನಿನ್ನನ್ನು ಕೊಳ್ಳೆಹೊಡೆಯುವವರು ಕೊಳ್ಳೆಗೆ ಈಡಾಗುವರು.


ಅವನು ಬಾಬಿಲೋನಿನಲ್ಲಿರುವ ನಮಗೆ ಪತ್ರ ಕಳಿಸಿ, ‘ಪರದೇಶವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ತಿಳಿಸಿದ್ದಾನೆ.”


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ವಿಧಿಸಲಿ ಅವರಿಗೆ ಲಿಖಿತಾಜ್ಞೆಯ ಶಿಕ್ಷೆಯನು I ಇದು ತರಲಿ ಭಕ್ತರೆಲ್ಲರಿಗೆ ಗೌರವವನು I ಅಲ್ಲೆಲೂಯ! II


ಜನರಿಲ್ಲದೆ, ಪ್ರಾಣಿಗಳಿಲ್ಲದೆ, ಪಾಳುಬಿದ್ದು ಬಾಬಿಲೋನಿಯರ ಕೈವಶವಾಗಿದೆ ಎನ್ನಲಾಗುವ ಈ ನಾಡಿನಲ್ಲಿ ಹೊಲಗದ್ದೆಗಳ ವ್ಯವಹಾರ ನಡೆಯುವುದು.


ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವುವು; ಇಸ್ರಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವುವು.


ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುವೆನು.


ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.


ಗುಬ್ಬಿಗಳಂತೆ ಈಜಿಪ್ಟಿನಿಂದಲೂ ಪಾರಿವಾಳಗಳಂತೆ ಅಸ್ಸೀರಿಯದಿಂದಲೂ ಅವರು ಬೆದರುತ್ತಾ ಓಡಿಬರುತ್ತಾರೆ. ಅವರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವಂತೆ ಮಾಡುವೆನು.


ಸರ್ವೇಶ್ವರ ಸ್ವಜನರಾದ ಇಸ್ರಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ : “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. (ಅವರ ಮಧ್ಯೆಯಿಂದ ಕಿತ್ತುಬಿಡುವೆನು ಯೆಹೂದ ವಂಶವನ್ನು).


‘ಇಗೋ, ನಾನು ಕಡುಕೋಪದಿಂದಲೂ ರೋಷಾವೇಶದಿಂದಲೂ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಎಲ್ಲ ದೇಶಗಳಿಂದ ಈ ಸ್ಥಳಕ್ಕೆ ಮರಳಿ ಕರೆತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು