Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:6 - ಕನ್ನಡ ಸತ್ಯವೇದವು C.L. Bible (BSI)

6 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ನಿನ್ನನ್ನೆ ದೇವರಿಗೆ ಸಮನಾಗಿಸಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ನೀನು ನಿನ್ನನ್ನು ದೇವರಿಗೆ ಸಮಾನವಾಗಿಸಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “‘ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ತೂರ್, ನೀನು ದೇವರೆಂದು ನೆನಸಿಕೊಂಡಿಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ದೇವರಂತೆ ಬುದ್ಧಿವಂತನು ಎಂದು ಭಾವಿಸಿಕೊಂಡಿರುವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:6
7 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯೋ?


ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು