Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:7 - ಕನ್ನಡ ಸತ್ಯವೇದವು C.L. Bible (BSI)

7 ‘ಆದುದರಿಂದ ನಾನು ಅತಿಭಯಂಕರ ಜನಾಂಗದವರಾದ ಮ್ಲೇಚ್ಛರನ್ನು ನಿನ್ನ ಮೇಲೆ ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿ ಹಿರಿದು, ನಿನ್ನ ಹೊಳಪನ್ನು ಹೊಲಸುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ನಿನ್ನ ಮೇಲೆ ಅತಿ ಭಯಂಕರ ಜನಾಂಗದವರಾದ ಮ್ಲೇಚ್ಫರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿಹಿರಿದು ನಿನ್ನ ಹೊಳಪನ್ನು ಹೊಲಸುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅಪರಿಚಿತರನ್ನು ಕರೆತರುವೆನು. ಅವರು ಎಲ್ಲಾ ಜನಾಂಗಗಳವರಿಗಿಂತ ಕ್ರೂರರು, ಅವರು ತಮ್ಮ ಖಡ್ಗವನ್ನು ಎಳೆದು ನಿನ್ನ ಜ್ಞಾನದಿಂದ ಕೊಂಡುಕೊಂಡಿದ್ದ ಎಲ್ಲಾ ಬೆಲೆಬಾಳುವ ಅಪೂರ್ವ ವಸ್ತುಗಳನ್ನು ನಾಶಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಭಯಂಕರ ಜನಾಂಗದವರಾದ ವಿದೇಶಿಯರನ್ನು ನಾನು ನಿನ್ನ ಮೇಲೆ ಬೀಳಮಾಡುವೆನು. ಅವರು ನಿನ್ನ ಸೌಂದರ್ಯ ಮತ್ತು ಜ್ಞಾನದ ವಿರುದ್ಧವಾಗಿ ಖಡ್ಗವನ್ನು ಹಿರಿಯುವರು; ನಿನ್ನ ಹೊಳೆಯುವ ವೈಭವವನ್ನು ಕೆಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:7
14 ತಿಳಿವುಗಳ ಹೋಲಿಕೆ  

ಅತಿಭಯಂಕರ ರಾಷ್ಟ್ರದವರಾದ ಮ್ಲೇಚ್ಛರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲೂ ಎಲ್ಲ ಹಳ್ಳಕೊಳ್ಳಗಳಲ್ಲೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲ ತೊರೆಗಳ ಹತ್ತಿರ ಮುರಿದುಬಿದ್ದಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ತೊಲಗಿಹೋಗಿವೆ.


ನಿನ್ನ ಬಹುಪ್ರಜೆಯನ್ನು ಅತಿ ಭಯಾನಕ ಜನಾಂಗದವರಾದ ಬಲಿಷ್ಠರ ಕತ್ತಿಗಳಿಂದ ಸಂಹರಿಸುವೆನು; ಈಜಿಪ್ಟ್ ಹೆಚ್ಚಳಪಡುವ ವಸ್ತುಗಳನ್ನೇ ಅವರು ಸೂರೆಮಾಡುವರು; ಅದರ ಜನ ನಿರ್ನಾಮವಾಗುವುದು.


ಆ ದೇಶವನ್ನು ನಾಶಪಡಿಸಲು ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಈಜಿಪ್ಟಿನ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಇದಾದ ಬಳಿಕ ಆ ರಾತ್ರಿ ಕನಸಿನಲ್ಲಿ ಕಾಣಿಸಿಕೊಂಡ ನಾಲ್ಕನೇ ಮೃಗ ಭಯಂಕರವಾಗಿತ್ತು. ಹೆದರಿಸುವಂಥದಾಗಿತ್ತು. ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿತ್ತು. ಮಿಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಮುಂಚಿನ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.


ಕಿತ್ತುಹಾಕಿರುವೆ ಅವನ ರಾಜದಂಡವನು I ನೆಲಕ್ಕೆ ಉರುಳಿಸಿರುವೆ ಅವನ ಸಿಂಹಾಸನವನು II


ಹೀಗಿರಲು ನಾನು ಅತಿ ದುಷ್ಟಜನಾಂಗಗಳನ್ನು ಬರಮಾಡುವೆನು; ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವುವು;


ಸೊಬಗಿನ ನಿಮಿತ್ತ ನೀ ಗರ್ವಿಯಾದೆ ಮೆರೆತದಿಂದ ಬುದ್ಧಿಯನ್ನು ಕಳೆದುಕೊಂಡೆ. ಎಂದೇ, ನಾ ನಿನ್ನನ್ನು ದೊಬ್ಬಿಬಿಟ್ಟೆ, ನೆಲಕೆ ಅರಸರ ಕಣ್ಮುಂದೆ ಎಸೆದೆ ಅವರಿಗೆ ಅವರಿಗೆ ನೋಟವಾಗಲೆಂದೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು