Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:8 - ಕನ್ನಡ ಸತ್ಯವೇದವು C.L. Bible (BSI)

8 ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯೆ ಹತರಾದವರ ಗತಿ ನಿನಗೆ ಸಂಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರದ ಮಧ್ಯದಲ್ಲಿ ಹತರಾದವರ ಹಾಗೆ ನೀನು ಸಾಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯದಲ್ಲಿ ನಿನಗೆ ಹತರಾದವರ ಗತಿ ಸಂಭವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿನ್ನ ಘನತೆಯನ್ನು ಕೆಡಿಸಿಬಿಡುವರು. ಸಮಾಧಿಗೆ ನಿನ್ನನ್ನು ತರುವರು. ಸಮುದ್ರದಲ್ಲಿ ಸತ್ತ ನಾವಿಕನ ಸ್ಥಿತಿಯು ನಿನ್ನದಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು. ಸಮುದ್ರಗಳ ಮಧ್ಯದಲ್ಲಿ ಭಯಂಕರವಾದ ಮರಣದ ಹಾಗೆ ನೀನು ಸಾಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:8
17 ತಿಳಿವುಗಳ ಹೋಲಿಕೆ  

ಮುಳುಗಿಹೋದರು ಅಗಾಧ ಜಲದೊಳು ಸರಕುಸಮೇತ ನಿನ್ನ ಸೇರಿದ್ದ ಜನರು; ಹಾಳಾದೆ ನೀನು ಸಮುದ್ರ ಸಾಗರದೊಳು.


ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.


ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು.


ಪಾತಾಳಕ್ಕಿಳಿಯುವವರನ್ನು ನರಕ ನುಂಗುವಂತೆ ಅವರನ್ನು ಜೀವಸಹಿತ ಪೂರ್ತಿಯಾಗಿ ಕಬಳಿಸಿಬಿಡೋಣ ಬಾ;


ಮರಣ ತಟ್ಟನೆ ಆ ದುಷ್ಟರ ಮೇಲೆರಗಲಿ I ಜೀವಸಹಿತ ಪಾತಾಳಕ್ಕವರು ಇಳಿಯಲಿ I ಕೆಟ್ಟತನ ಮನೆಮಾಡಿದೆ ಅವರ ಮಧ್ಯದಲಿ II


“ನನ್ನ ಪ್ರಾಣ ನಷ್ಟದಿಂದ ನಿನಗೇನು ಫಲ? I ಸಮಾಧಿಗೆ ನಾನಿಳಿದರೆ ನಿನಗೇನು ಲಾಭ?” II “ಸತ್ತವರ ಬೂದಿ ನಿನ್ನ ಸ್ತುತಿಸಬಲ್ಲುದೆ? I ನಿನ್ನ ಸತ್ಯತೆಯನ್ನದು ಸಾರಲು ಬಲ್ಲುದೆ?” II


ನನ್ನ ಮೊರೆ ಕೇಳು ಪ್ರಭು, ದುರ್ಗ ನೀನೆನಗೆ I ನೀ ಕಿವಿಗೊಡದಿರೆ, ನಾ ಸಮಾನ ಸತ್ತವರಿಗೆ II


ವಿಮೋಚಿಸಿದ್ದಾನೆ ನನ್ನ ಆತ್ಮ ಅಧೋಲೋಕ ಸೇರದಂತೆ ನನ್ನ ಜೀವವು ಜ್ಯೋತಿಯನು ಕಾಣುವಂತೆ.’


ಅವನ ಆತ್ಮ ಅಧೋಲೋಕಕ್ಕಿಳಿಯದಂತೆ ತಡೆಯುತ್ತಾನೆ ಅವನ ಪ್ರಾಣ ಕತ್ತಿಗೆ ತುತ್ತಾಗದಂತೆ ಕಾಪಾಡುತ್ತಾನೆ.


ಇವು ನನ್ನ ಸಂಗಡ ಪಾತಾಳಕ್ಕೆ ಬರಲಾದೀತೆ? ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?”


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಇಂತೆಂದ ನೀನು ದೂಡಲಾಗಿರುವೆ ಪಾತಾಳಕೆ ಅಧೋಲೋಕದ ಅಗಾಧ ಕೂಪಗಳಿಗೆ.


ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ವಿನೋದಭವನಗಳನ್ನು ಕೆಡವಿ, ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು.


ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು