Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:9 - ಕನ್ನಡ ಸತ್ಯವೇದವು C.L. Bible (BSI)

9 ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ನಿನ್ನನ್ನು ಸಂಹರಿಸುವವನೆದುರಿಗೆ ನಾನು ದೇವರು ಎಂದು ಹೇಳುವಿಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಮನುಷ್ಯನು ನಿನ್ನನ್ನು ಕೊಂದುಹಾಕುವನು. ಆಗಲೂ ನೀನು “ನಾನು ದೇವರು” ಎಂದು ಹೇಳುವಿಯಾ? ಇಲ್ಲ. ಅವನು ನಿನ್ನನ್ನು ತನ್ನ ಅಧಿಕಾರದಲ್ಲಿರಿಸುವನು. ಆಗ ನೀನು “ಕೇವಲ ಮನುಷ್ಯನೇ” ಎಂದು ತಿಳಿಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು, “ನಾನು ದೇವರು,” ಎಂದು ಹೇಳುವೆಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರಪ್ರಾಣಿಯೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:9
10 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಗರ್ವಪಡುವುದು, ಹೊಟ್ಟೆ ತುಂಬಿಸಿಕೊಳ್ಳುವುದು, ಸ್ವಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಆಕೆಯ ಕುವರಿಯರಲ್ಲೂ ಇದ್ದವು. ಅಲ್ಲದೆ ಅವರು ದೀನದಲಿತರಿಗೆ ಬೆಂಬಲವಾಗಿರಲಿಲ್ಲ.


ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯೆ ಹತರಾದವರ ಗತಿ ನಿನಗೆ ಸಂಭವಿಸುವುದು.


ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ; ನಾನೇ ನುಡಿದಿದ್ದೇನೆ, ಇದು ಸರ್ವೇಶ್ವರನಾದ ದೇವರ ಸಂಕಲ್ಪ.”


“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು