ಯೆಹೆಜ್ಕೇಲನು 29:10 - ಕನ್ನಡ ಸತ್ಯವೇದವು C.L. Bible (BSI)10 ಇಗೋ, ನಾನು ನಿನಗೂ ನಿನ್ನ ನದಿಗೂ ವಿರುದ್ಧನಾಗಿ ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ತನಕ, ಹೌದು, ಸುಡಾನ್ ಎಲ್ಲೆಯವರೆಗೂ ಪೂರ್ತಿಯಾಗಿ ಹಾಳುಪಾಳುಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ‘ಇಗೋ, ನಾನು ನಿನಗೂ, ನಿನ್ನ ನದಿಗೂ ವಿರುದ್ಧವಾಗಿ ಐಗುಪ್ತ ದೇಶವನ್ನು ಮಿಗ್ದೋಲಿನಿಂದ ಸೆವೇನಿಯ ತನಕ, ಹೌದು, ಕೂಷಿನ ಮೇರೆಯವರೆಗೂ ತೀರಾ ಹಾಳು ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಗೋ, ನಾನು ನಿನಗೂ ನಿನ್ನ ನದಿಗೂ ವಿರುದ್ಧನಾಗಿ ಐಗುಪ್ತದೇಶವನ್ನು ವಿುಗ್ದೋಲಿನಿಂದ ಸೆವೇನೆಯ ತನಕ, ಹೌದು ಕೂಷಿನ ಎಲ್ಲೆಯವರೆಗೂ ತೀರಾ ಹಾಳುಪಾಳು ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ನಾನು ನಿನಗೆ ವಿರೋಧವಾಗಿರುತ್ತೇನೆ. ನೈಲ್ ನದಿಯ ಅನೇಕ ಶಾಖೆಗಳಿಗೂ ನಾನು ವಿರೋಧವಾಗಿದ್ದೇನೆ. ಈಜಿಪ್ಟನ್ನು ನಾನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಮಿಗ್ದೋಲ್‌ನಿಂದ ಅಸ್ವಾನ್ ತನಕ ಇರುವ ಪಟ್ಟಣಗಳು ಬರಿದಾಗುವವು. ಇಥಿಯೋಪ್ಯದ ಮೇರೆಯ ತನಕವೂ ಬರಿದಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದ್ದರಿಂದ ಇಗೋ, ನಾನು ನಿನಗೂ ನಿನ್ನ ನದಿಗಳಿಗೂ ವಿರುದ್ಧವಾಗಿದ್ದೇನೆ. ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ. ಅಧ್ಯಾಯವನ್ನು ನೋಡಿ |