Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:11 - ಕನ್ನಡ ಸತ್ಯವೇದವು C.L. Bible (BSI)

11 ಯಾವ ವ್ಯಕ್ತಿಯೂ ಅಲ್ಲಿ ಹೆಜ್ಜೆಯಿಟ್ಟು ಹಾದುಹೋಗನು; ನಲವತ್ತು ವರ್ಷ ನಿರ್ಜನವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “‘ಯಾವ ಮನುಷ್ಯನ ಪಾದವೂ ಅದರಲ್ಲಿ ಹಾದುಹೋಗುವುದಿಲ್ಲ; ಯಾವ ಪಶುವಿನ ಪಾದವೂ ಅದರಲ್ಲಿ ದಾಟಿಹೋಗುವುದಿಲ್ಲ; ನಲ್ವತ್ತು ವರ್ಷ ನಿರ್ಜನವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಟ್ಟು ಹಾದುಹೋಗನು; ಯಾವ ಪಶುವೂ ತುಳಿದು ದಾಟಿಹೋಗದು; ನಾಲ್ವತ್ತು ವರುಷ ನಿರ್ಜನವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾವನೂ, ಯಾವ ಪ್ರಾಣಿಯೂ ಈಜಿಪ್ಟ್ ದೇಶವನ್ನು ದಾಟುವುದಿಲ್ಲ. ನಲವತ್ತು ವರ್ಷದ ತನಕ ಯಾರೂ ಅಲ್ಲಿ ನೆಲೆಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಾವ ಮನುಷ್ಯನ ಪಾದವಾದರೂ ಅದರಲ್ಲಿ ಹಾದು ಹೋಗುವುದಿಲ್ಲ. ಮೃಗಗಳ ಪಾದವೂ ಅದರಲ್ಲಿ ಹಾದು ಹೋಗುವುದಿಲ್ಲ ಅಥವಾ ನಲವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:11
15 ತಿಳಿವುಗಳ ಹೋಲಿಕೆ  

ದೊಡ್ಡ ಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು; ಆ ನೀರನ್ನು ಕಲಕಲು ಇನ್ನು ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಡನು, ಯಾವ ಪಶುವೂ ಅಲ್ಲಿ ಗೊರಸಿಕ್ಕದು.


ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ, ಸರ್ವೇಶ್ವರಸ್ವಾಮಿ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಜೆರುಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆ.


ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ನಾಡಿನಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ನಾನು ದೇಶವನ್ನು ಹಾಳುಪಾಳು ಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವುದು; ಇಸ್ರಯೇಲಿನ ಮಲೆನಾಡು ಬೀಡುಬೀಳುವುದು; ಯಾರೂ ಇಲ್ಲಿ ಹಾದುಹೋಗರು.


ಅತಿಭಯಂಕರ ರಾಷ್ಟ್ರದವರಾದ ಮ್ಲೇಚ್ಛರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲೂ ಎಲ್ಲ ಹಳ್ಳಕೊಳ್ಳಗಳಲ್ಲೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲ ತೊರೆಗಳ ಹತ್ತಿರ ಮುರಿದುಬಿದ್ದಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ತೊಲಗಿಹೋಗಿವೆ.


“ಸರ್ವೇಶ್ವರ ಹೀಗೆನ್ನುತ್ತಾರೆ: ‘ಬಾಬಿಲೋನಿನ ರಾಜ್ಯ ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಸಂಧಿಸಿ ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಈ ಶುಭವಾಕ್ಯವನ್ನು ನಿಮ್ಮ ಮೇಲ್ಮೆಗಾಗಿ ನೆರವೇರಿಸುವೆನು.


ಎಪ್ಪತ್ತು ವರ್ಷಗಳಾದ ಮೇಲೆ ಸರ್ವೇಶ್ವರ ಟೈರಿಗೆ ಭೇಟಿನೀಡುವರು. ಆ ನಗರಿ ತನ್ನ ಕಸುಬಿಗೆ ಹಿಂದಿರುಗುವಳು. ಜಗದ ಎಲ್ಲ ರಾಷ್ಟ್ರಗಳೊಂದಿಗೆ ವ್ಯಾಪಾರ ಗೈಯುವಳು.


ಒಬ್ಬ ಅರಸನ ಜೀವಮಾನ ಕಾಲದಷ್ಟು ದಿನ - ಅಂದರೆ ಎಪ್ಪತ್ತು ವರ್ಷಕಾಲ - ನಗರವು ಯಾರ ನೆನಪಿಗೂ ಬಾರದೆಹೋಗುವುದು. ಆ ಅವಧಿಯು ಮುಗಿದ ಮೇಲೆ ಅದರ ಗತಿ ವೇಶ್ಯೆಯ ಗೀತದಂತಾಗುವುದು:


ಈ ಪ್ರಕಾರ ಸರ್ವೇಶ್ವರ ಯೆರೆಮೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿತು; ನಾಡು ತನ್ನ ಸಬ್ಬತ್‍ಕಾಲವನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಿತ್ತು.


ಅದು ಹಗಲಿರುಳು ಆರದೆ ಉರಿಯುವುದು. ಅದರ ಹೊಗೆ ನಿರಂತರವಾಗಿ ಏರುತ್ತಿರುವುದು. ನಾಡು ತಲತಲಾಂತರಕ್ಕೂ ಹಾಳುಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದುಹೋಗರು.


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ಈಜಿಪ್ಟಿನಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೊ. ಮೆಂಫಿಸ್ ನಗರ ಹಾಳಾಗುವುದು ಅದು ಸುಟ್ಟು ನಿರ್ಜನವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು