Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:14 - ಕನ್ನಡ ಸತ್ಯವೇದವು C.L. Bible (BSI)

14 ಈಜಿಪ್ಟಿನ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮಭೂಮಿಯಾದ ದಕ್ಷಿಣ ಈಜಿಪ್ಟಿಗೆ ಪುನಃ ಬರಮಾಡುವೆನು. ಅಲ್ಲೇ ಅವರು ನಿಕೃಷ್ಟ ರಾಜ್ಯದವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಐಗುಪ್ತದ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮ ಭೂಮಿಯಾದ ಪತ್ರೋಸ್ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ಕನಿಷ್ಠ ರಾಜ್ಯದವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರ ಜನ್ಮಭೂವಿುಯಾದ ಪತ್ರೋಸ್ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ನಿಕೃಷ್ಟ ರಾಜ್ಯದವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸೆರೆಹಿಡಿಯಲ್ಪಟ್ಟ ಈಜಿಪ್ಟರನ್ನು ಪತ್ರೋಸ್ ದೇಶಕ್ಕೆ ಬರಮಾಡುವೆನು. ಅವರ ಜನ್ಮಸ್ಥಳಕ್ಕೆ ಅವರನ್ನು ತಿರುಗಿ ಬರಮಾಡುವೆನು. ಆದರೆ ಅವರ ರಾಜ್ಯಕ್ಕೆ ಮಹತ್ವವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಈಜಿಪ್ಟಿನವರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸ್ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡುವೆನು. ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:14
8 ತಿಳಿವುಗಳ ಹೋಲಿಕೆ  

ನಾನು ದಕ್ಷಿಣ ಈಜಿಪ್ಟನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಕ್ಕಿ, ತೆಬೆಸಿನ ರಾಜಧಾನಿಯನ್ನು ದಂಡಿಸಿ,


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಈಜಿಪ್ಟ್ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ನಗರಗಳಲ್ಲೂ ಮತ್ತು ಪತ್ರೋಸ್ ಪ್ರಾಂತ್ಯದಲ್ಲೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಿಳಿಯಪಡಿಸಿದ ವಾಣಿ ಇದು:


ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಜನಿಸಿದರು. (ಫಿಲಿಷ್ಟಿಯರು ಕಸ್ಲುಹ್ಯರಿಂದ ಬಂದವರು.)


ಕಸ್ಲುಹ್ಯರೂ ಕೆಪ್ತೋರ್ಯರೂ ಹುಟ್ಟಿದರು. ಕಸ್ಲುಹ್ಯರಿಂದ ಬಂದವರು ಫಿಲಿಷ್ಟಿಯರು.


ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಾರತಿ ಎತ್ತುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲೆ ದೊಡ್ಡ ಗುಂಪಾಗಿ ನಿಂತಿದ್ದ ಹೆಂಗಸರು, ಹಾಗೂ ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದ ಎಲ್ಲ ಜನರು ಯೆರೆಮೀಯನಿಗೆ ಹೀಗೆಂದು ಉತ್ತರಕೊಟ್ಟರು:


ಅವನ ರಾಜ್ಯ ಏಳಿಗೆಗೆ ಬಾರದೆ ಗುಜ್ಜಾಗಿದ್ದು ಒಪ್ಪಂದಕ್ಕೆ ಬದ್ಧವಾಗಿರುವುದರಿಂದಲೇ ಅದು ನಿಲ್ಲದೆಂದು ಆ ದೇಶದ ಬಲಿಷ್ಠರನ್ನು ಗಡೀಪಾರುಮಾಡಿದ.


ದಾಟಿಬರುವರವರು ಕಷ್ಟವೆಂಬ ಕಡಲನು ಛೇದಿಸಿಬಿಡುವೆನು ಅಲ್ಲಕಲ್ಲೋಲ ಸಮುದ್ರವನು. ತಳದ ತನಕ ಒಣಗಿಹೋಗುವುದು ನೈಲ್ ನದಿಯು ಕುಗ್ಗಿಹೋಗುವುದು ಅಸ್ಸೀರಿಯಾದ ಗರ್ವವು ತಪ್ಪಿಹೋಗುವುದು ಈಜಿಪ್ಟಿನ ರಾಜದರ್ಪವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು